ಉಡುಪಿ: ಯುವತಿ ನಾಪತ್ತೆ

ಉಡುಪಿ, ಡಿ.24: ತಾಲೂಕಿನ ಮೂಡನಿಡಂಬೂರು ಗ್ರಾಮದ ನಿವಾಸಿ ಸಹನಾ (24) ಎಂಬ ಯುವತಿ ಡಿ.23ರಂದು ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿಯಿಂದ ನಾಪತ್ತೆಯಾಗಿದ್ದಾರೆ.
5 ಅಡಿ 2 ಇಂಚು ಎತ್ತರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story





