ಹಿಂದುಳಿದ ವರ್ಗಕ್ಕೆ ಅಧಿಕ ಅನುದಾನ: ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಭರವಸೆ

ಬೆಳಗಾವಿ, ಡಿ.24: ಹಿಂದುಳಿದ ವರ್ಗಗಳ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಮೀಸಲಿಡಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಭರವಸೆ ನೀಡಿದರು.
ಶುಕ್ರವಾರ ಪರಿಷತ್ತಿನ ಪ್ರಶ್ನೋತ್ತರ ಕಲಾಪ ವೇಳೆ ಸದಸ್ಯ ಪಿ.ಆರ್.ರಮೇಶ್ ಪ್ರಶ್ನೆಗೆ ಉತ್ತರಿಸಿದ ಅವರು, ಮುಂದಿನ ಆಯವ್ಯಯದಲ್ಲಿ ಹಿಂದುಳಿದ ಸಮುದಾಯದ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ತಿಳಿಸಿದರು.
ಇದಕ್ಕೂ ಮುನ್ನ ಪಿ.ಆರ್.ರಮೇಶ್ ಪ್ರಸ್ತಾಪಿಸಿ, ಹಿಂದುಳಿದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದಕ್ಕೆ ಬರಬೇಕಾದರೆ ಅವರಿಗೆ ರಾಜ್ಯ ಸರಕಾರ ಒಂದು ಸಾವಿರ ಕೋಟಿ ರೂ. ಮೀಸಲಿಡಬೇಕು ಎಂದು ಒತ್ತಾಯಿಸಿದರು.
ಬಳಿಕ ಸಚಿವರು, ಕಳೆದ ಐದು ವರ್ಷಗಳಲ್ಲಿ ರಾಜ್ಯದ ಹಿಂದುಳಿದ ವರ್ಗಗಳ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ವ್ಯಾಸಂಗ ಮಾಡಲು ಇಲಾಖೆಯಲ್ಲಿ ಒಟ್ಟು 213 ವಿದ್ಯಾರ್ಥಿಗಳಿಗೆ ಮಂಜೂರು ಮಾಡಲಾಗಿದೆ.
ಅದೇ ರೀತಿಯಲ್ಲಿ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದಲೂ 27 ವಿದ್ಯಾರ್ಥಿಗಳು ವಿದೇಶಕ್ಕೆ ತೆರಳಿದ್ದಾರೆ ಎಂದು ಮಾಹಿತಿ ನೀಡಿದರು.
.jpg)







