ಬೆಂಗಳೂರು: ಬಂದ್‌ಗೆ ಮನವಿ ಪತ್ರ ಬಂದಿಲ್ಲ; ಪೊಲೀಸ್ ಆಯುಕ್ತ ಕಮಲ್ ಪಂತ್
ಬೆಂಗಳೂರು, ಡಿ.25: ಕನ್ನಡ ಸಂಘಟನೆಗಳು ಕರೆ ನೀಡಿರುವ ಡಿ.31ರ ಬಂದ್ ಸಂಬಂಧ ಯಾರು ಯಾವುದೇ ಮನವಿ ಪತ್ರ ನೀಡಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒತ್ತಾಯಪೂರ್ವಕವಾಗಿ ಯಾವುದೇ ಬಂದ್ ನಡೆಸುವಂತಿಲ್ಲ. ಸ್ವಇಚ್ಛೆಯಿಂದ ಬಂದ್ ಆಚರಿಸಿದರೆ ಯಾವುದೇ ಅಡ್ಡಿ ಇಲ್ಲ. ಆದರೆ, ಒತ್ತಾಯಪೂರ್ವಕವಾಗಿ ಬಂದ್ ಮಾಡಿಸಿದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ಅವಕಾಶವಿಲ್ಲ. ಸರಕಾರಿ ಆದೇಶಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುತ್ತಿದೆ. ಪಬ್ಬು, ಬಾರ್‌ಗಳಲ್ಲಿ ಅವಕಾಶವಿಲ್ಲ. ಎಂ.ಜಿ.ರೋಡ್, ಬಿಗ್ರೇಡ್ ರೋಡ್‌ನಲ್ಲಿ ಸಂಭ್ರಮಾಚರಣೆ ಇಲ್ಲ ಎಂದು ಹೇಳಿದರು.
Next Story





