ವ್ಹೀಲಿಂಗ್ ವೇಳೆ ಅಪಘಾತ ಸಂಭವಿಸಿದರೆ ಮಾಲಕರೇ ಹೊಣೆ: ಪೊಲೀಸ್ ಆಯುಕ್ತ ಕಮಲ್ ಪಂತ್

ಬೆಂಗಳೂರು, ಡಿ.25: ವ್ಹೀಲಿಂಗ್ ವೇಳೆ ಅಪಘಾತ ಸಂಭವಿಸಿದರೆ ಮಾಲಕರೇ ಹೊಣೆಗಾರರಾಗುತ್ತಾರೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
ಶನಿವಾರ ನಗರದ ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಮಾಸಿಕ ಜನಸಂಪರ್ಕ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಗರದ ವಿವಿಧ ಕಡೆ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಗಮನಕ್ಕೆ ಬಂದಿದ್ದು, ವ್ಹೀಲಿಂಗ್ ಮಾಡುವವರ ವಿರುದ್ಧ ಕೇಸ್ ದಾಖಲಿಸಲು ನಿರ್ಧರಿಸಲಾಗಿದೆ. ವ್ಹೀಲಿಂಗ್ ವೇಳೆ ಅಪಘಾತ ಸಂಭವಿಸಿದರೆ ಮಾಲಕರೆ ಹೊಣೆಗಾರರಾಗುತ್ತಾರೆ ಎಂದರು.
ಬೆಂಗಳೂರು ವಿಶ್ವ ಮಟ್ಟದಲ್ಲಿ ಅಭಿವೃದ್ಧಿಗೊಂಡಿದೆ. ಸಾರ್ವಜನಿಕರಿಗೆ ಭದ್ರತೆ ಕಲ್ಪಿಸುವುದು ಪ್ರಮುಖವಾಗಿದೆ. ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಕೆಲಸ ಮಾಡುತ್ತಿದೆ. ಸಾರ್ವಜನಿಕರ ಸಮಸ್ಯೆ, ಅಹವಾಲುಗಳನ್ನು ಸ್ವೀಕರಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲು ಪ್ರಾಮಾಣಿಕ ಯತ್ನ ಮಾಡಲಾಗುತ್ತದೆ ಎಂದು ಹೇಳಿದರು.
Next Story





