Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮತಾಂತರ ನಿಷೇಧ ಕಾಯ್ದೆಯ ವಿರುದ್ಧ ಕಾನೂನು...

ಮತಾಂತರ ನಿಷೇಧ ಕಾಯ್ದೆಯ ವಿರುದ್ಧ ಕಾನೂನು ಹೋರಾಟಕ್ಕೆ ಎಸ್.ಡಿ.ಪಿ.ಐ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ25 Dec 2021 11:44 PM IST
share

ಬೆಂಗಳೂರು, ಡಿ.25: ರಾಜ್ಯ ಸರಕಾರವು ಜಾರಿಗೆ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆಯು ಸಂವಿಧಾನ ವಿರೋಧಿ ಮತ್ತು ಸರಕಾರಿ ಪ್ರಾಯೋಜಿತ ಭಯೋತ್ಪಾದಕ ಕೃತ್ಯವೂ ಆಗಿದೆ ಎಂಬ ನಿಲುವನ್ನು ಎಸ್.ಡಿ.ಪಿ.ಐ ಈಗಾಗಲೇ ಪ್ರಕಟಿಸಿದೆ. 

ರಾಜ್ಯಪಾಲರು ಈ ಮಸೂದೆಯನ್ನು ತಿರಸ್ಕರಿಸಬೇಕು ಎಂಬ ಒತ್ತಾಯದ ಮನವಿಗಳನ್ನು ರಾಜ್ಯದಾದ್ಯಂತ ನಡೆಸಲಾದ ಪ್ರತಿಭಟನೆಗಳ ಮೂಲಕ ಸಲ್ಲಿಸಲಾಗಿದೆ ಎಂದು ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಹೇಳಿದ್ದಾರೆ.

ಯುವಜನರ ಧರ್ಮಾಂತರದ, ವೈವಾಹಿಕ ಜೀವನದ ಆಯ್ಕೆಯ ಸ್ವಾತಂತ್ರ‍್ಯವನ್ನು ಕಸಿಯುವ ಮತ್ತು ಭಾರತದ ಪ್ರತಿಯೊಬ್ಬ ಪ್ರಜೆಯ ಧಾರ್ಮಿಕ ಹಕ್ಕು ಮತ್ತು ಸ್ವಾತಂತ್ರ‍್ಯವನ್ನು ನಿರ್ಭಂಧಿಸುವ ಮತ್ತು ಇನ್ನೂ ಹತ್ತು ಹಲವು ಒತ್ತಾಯಗಳು ಮತ್ತು ಹೇರಿಕೆಗಳ ಮೂಲಕ ಜನತೆಯಲ್ಲಿ ಆತಂಕ ಮತ್ತು ಅಭದ್ರತೆಯ ವಾತಾವರಣ ಸೃಷ್ಟಿಸಲು ಕಾರಣವಾಗಿರುವ ಮತಾಂತರ ನಿಷೇಧ ಎಂಬ ಭಯೋತ್ಪಾದಕ ಕಾಯ್ದೆಯನ್ನು ಜಾರಿಗೊಳಿಸಿದ್ದೇ ಆದಲ್ಲಿ, ಎಸ್.ಡಿ.ಪಿ.ಐ ನಾಡಿನ ಸರ್ವ ಜನರ ಹಿತದೃಷ್ಟಿಯಿಂದ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಲು ನಿರ್ಧರಿಸಿದೆ ಎಂದು ಅವರು ತಿಳಿಸಿದ್ದಾರೆ.
ಮತಾಂತರ ನಿಷೇಧ ಕಾಯ್ದೆಯು ವಿಧಾನ ಪರಿಷತ್ತಿನಲ್ಲಿ ಚರ್ಚೆಗೆ ಬಂದಾಗ ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಯಾವುದೇ ಕುಂಟು ನೆಪಗಳನ್ನು ಹೇಳದೆ, ಸಭೆಯನ್ನು ಬಹಿಷ್ಕರಿಸದೇ, ತನ್ನ ಎಲ್ಲ ಸದಸ್ಯರಿಗೂ ವಿಪ್ ಜಾರಿಗೊಳಿಸಿ ಮತಾಂತರ ನಿಷೇಧ ಕಾಯ್ದೆಯ ಚರ್ಚೆಯಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಅಬ್ದುಲ್ ಮಜೀದ್ ಆಗ್ರಹಿಸಿದ್ದಾರೆ.

ವಿಧಾನಸಭೆಯಲ್ಲಿ ಈ ಮಸೂದೆಯ ಕರಡನ್ನು ಮಂಡಿಸಿದಾಗ ಕಾಂಗ್ರೆಸ್‌ನ ಪ್ರಮುಖ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಹಾಜರಿರದೆ ಮಸೂದೆಯು ಮಂಡನೆಯಾದ ಮೇಲೆ ತಡವಾಗಿ ಸಭೆಗೆ ಆಗಮಿಸಿ, ನಮ್ಮಿಂದ ಮಸೂದೆಯನ್ನು ಮುಚ್ಚಿಟ್ಟು, ಚರ್ಚೆಗೆ ಅವಕಾಶ ನೀಡದೇ ಮಸೂದೆಯನ್ನು ಮಂಡಿಸಲಾಗಿದೆ ಎಂದು ತಕರಾರು ತೆಗೆದು ಮಾತನಾಡಿರುವ ಬಗ್ಗೆ ಎಸ್.ಡಿ.ಪಿ.ಐ ಗಮನಿಸಿದೆ. ಇದು ತಪ್ಪು. ಸಭೆಗೆ ಸರಿಯಾದ ಸಮಯಕ್ಕೆ ಆಗಮಿಸಿ ಕರಡು ಮಂಡನೆಯಾಗದಂತೆ ನೋಡಿಕೊಳ್ಳಬೇಕಾಗಿದ್ದು ಅವರ ಜವಾಬ್ದಾರಿ ಆಗಿತ್ತು ಎಂದು ಅವರು ಹೇಳಿದ್ದಾರೆ.

ಈಗಲಾದರೂ ಮಸೂದೆಯು ವಿಧಾನ ಪರಿಷತ್ತಿಗೆ ಚರ್ಚೆಗೆ ಬಂದಾಗ, ಯಾವ ನೆಪವನ್ನೂ ಹೇಳದೇ ವಿರೋಧ ಪಕ್ಷದ ಸರ್ವ ಸದಸ್ಯರು ಖುದ್ದು ಹಾಜರಿದ್ದು ಮಸೂದೆಯನ್ನು ವಿರೋಧಿಸಿ, ಪರಿಷತ್ತಿನಲ್ಲಿ ತಿರಸ್ಕಾರವಾಗುವಂತೆ ನೋಡಿಕೊಳ್ಳಬೇಕೆಂದು ಅಬ್ದುಲ್ ಮಜೀದ್ ಮೈಸೂರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X