Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಳಪೆ ಗುಣಮಟ್ಟದ ಟಾರ್ಪಾಲಿನ್ ನೀಡುವ...

ಕಳಪೆ ಗುಣಮಟ್ಟದ ಟಾರ್ಪಾಲಿನ್ ನೀಡುವ ಸಂಸ್ಥೆಗಳು ಕಪ್ಪು ಪಟ್ಟಿಗೆ: ಕೃಷಿ ಸಚಿವ ಬಿ.ಸಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ26 Dec 2021 7:23 PM IST
share
ಕಳಪೆ ಗುಣಮಟ್ಟದ ಟಾರ್ಪಾಲಿನ್ ನೀಡುವ ಸಂಸ್ಥೆಗಳು ಕಪ್ಪು ಪಟ್ಟಿಗೆ: ಕೃಷಿ ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು, ಡಿ. 26: ಕೃಷಿ ಇಲಾಖೆಯಲ್ಲಿ ಗುಣಮಟ್ಟದ ಟಾರ್ಪಾಲಿನ್ ವಿತರಣೆಗೆ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದು, ಭಾರತೀಯ ಮಾಪನ ಸಂಸ್ಥೆಯ ಪರವಾನಿಗೆಯ ಗುಣಮಟ್ಟಕ್ಕಿಂತ ಕಳಪೆ ಎಂದು ಕಂಡು ಬಂದಲ್ಲಿ ಅಂತಹ ಸಂಸ್ಥೆಗಳನ್ನು ಮುಂದಿನ 3 ವರ್ಷಗಳ ಕಾಲ ಇಲಾಖೆಯಲ್ಲಿ ಭಾಗವಹಿಸುವಿಕೆಯಿಂದ ಅನರ್ಹಗೊಳಿಸಿ ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಸಿದ್ದಾರೆ.

ರವಿವಾರ ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪರವಾನಿಗೆಯನ್ನು ಹೊಂದಿರುವ ಟಾರ್ಪಾಲಿನ್‍ಗಳನ್ನೇ ಸ್ವೀಕರಿಸಲು ಹಾಗೂ ವಿತರಿಸಲಾಗುತ್ತದೆ. ಕೃಷಿ ಇಲಾಖೆಯಿಂದ ಒದಗಿಸಲಾಗಿದೆ ಎಂಬುದರ ಖಾತ್ರಿಯ ಜೊತೆಗೆ ತಯಾರಿಕ ಸಂಸ್ಥೆಯ ಹೆಸರು, ಬ್ಯಾಚ್ ಸಂಖ್ಯೆ ಮತ್ತು ಭಾರತೀಯ ಮಾಪನ ಸಂಸ್ಥೆಯ ಪರವಾನಿಗೆಯ ಸಿಎಂಎಲ್ ಸಂಖ್ಯೆಯನ್ನು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಟಾರ್ಪಾಲಿನ್ ಮೇಲೆ ಲೇಜರ್ ಪ್ರಿಂಟ್ ಅಥವಾ ಅಳಿಸಲಾರದ ಶಾಹಿಯಲ್ಲಿ ಮುದ್ರಿಸಿರುವುದನ್ನು ಖಾತರಿ ಪಡಿಸಿಕೊಂಡ ನಂತರವೇ ದಾಸ್ತಾನನ್ನು ರೈತ ಸಂಪರ್ಕ ಕೇಂದ್ರದಲ್ಲಿ ಸ್ವೀಕರಿಸಲಾಗುತ್ತಿದೆ.

ಸರಬರಾಜು ಆದೇಶ ಪಡೆದ ಸಂಸ್ಥೆಗಳು, ಸರಬರಾಜು ಮಾಡಿದ ಟಾರ್ಪಾಲಿನ್‍ಗಳಲ್ಲಿ ಜಿಲ್ಲೆಗೆ ಒಂದರಂತೆ ಮಾದರಿಯನ್ನು ತೆಗೆದು ಗುಣಮಟ್ಟದ ಪರೀಕ್ಷೆಗಾಗಿ CIPET ಸಂಸ್ಥೆಗೆ ಗುಣಮಟ್ಟ ಪರೀಕ್ಷೆಗಾಗಿ ಪರೀಕ್ಷಾ ಶುಲ್ಕವನ್ನು ಸರಬರಾಜುದಾರ ಸಂಸ್ಥೆಯೇ ಪಾವತಿಸುವ ಷರತ್ತಿನೊಂದಿಗೆ ಕಳುಹಿಸಲು ಸೂಚಿಸಲಾಗಿರುತ್ತದೆ. ಕಟಾವಿನ ನಂತರ ಕೃಷಿ ಉತ್ಪನ್ನಗಳನ್ನು ಮಳೆ, ಗಾಳಿ ಹಾಗೂ ಇನ್ನಿತರ ಹವಾಮಾನ ವೈಪರೀತ್ಯಗಳಿಂದ ಸಂರಕ್ಷಿಸಿ ಕೃಷಿ ಉತ್ಪನ್ನಗಳ ಗುಣಮಟ್ಟವನ್ನು ಕಾಯ್ದುಕೊಳ್ಳಲು 6 ಮೀಟರ್ ಅಳತೆಯ ಟಾರ್ಪಾಲಿನ್‍ಗಳನ್ನು ಸಾಮಾನ್ಯ ವರ್ಗದ ರೈತರಿಗೆ ಶೇ.50 ಮತ್ತು ಪರಿಶಿಷ್ಟ ಜಾತಿ/ಪಂಗಡದ ರೈತರಿಗೆ ಶೇ.90ರಷ್ಟು ಸಹಾಯ ಧನ ಒದಗಿಸಿ ರೈತ ಸಂಪರ್ಕ ಕೇಂದ್ರಗಳ ಮುಖಾಂತರ ವಿತರಿಸಲಾಗುತ್ತಿದೆ. ಐದು ಪದರುಗಳುಳ್ಳ, 250 ಜಿ.ಎಸ್.ಎಂ. ತೂಕದ, ಕಪ್ಪು ಬಣ್ಣದ ಮಾನದಂಡಗಳಿಗೆ ಅನುಗುಣವಾಗಿರುವ 8 ಮೀ X 6 ಮೀ ಅಳತೆಯ HDPE ಟಾರ್ಪಾಲಿನ್‍ಗಳನ್ನು ಸಹಾಯಧನದಡಿ ಒದಗಿಸಲಾಗುತ್ತಿದೆ. 2021-22ನೆ ಸಾಲಿನಲ್ಲಿ 2,39,606 ಟಾರ್ಪಾಲಿನ್‍ಗಳನ್ನು ವಿತರಿಸಲು ಜಿಲ್ಲಾವಾರು ಕ್ರಿಯಾ ಯೋಜನೆ ರೂಪಿಸಿ ನೀಡಲಾಗಿರುತ್ತದೆ ಎಂದು ಅವರು ಹೇಳಿದ್ದಾರೆ.

ಭಾರತೀಯ ಮಾಪನ ಸಂಸ್ಥೆಯಿಂದ ಪರವಾನಿಗೆ ಹೊಂದಿರುವ ಸಂಸ್ಥೆಗಳು ಅಥವಾ ಅವರಿಂದ ಒಡಂಬಡಿಕೆ ಪಡೆದ ಸಂಸ್ಥೆಗಳನ್ನು RFP ಮುಖಾಂತರ ಅರ್ಜಿ ಕರೆದು, ಸಂಸ್ಥೆಗಳು ಹೊಂದಿರುವ ಪರವಾನಿಗೆಯನ್ನು ತಾಂತ್ರಿಕವಾಗಿ ಮೌಲ್ಯಮಾಪನಗೊಳಿಸಿ ಅರ್ಹಗೊಂಡ ಸಂಸ್ಥೆಗಳನ್ನು ಎಂಪಾನೆಲ್ ಮಾಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಪರವಾನಿಗೆಯನ್ನು ಹೊಂದಿರುವ 24 ಸಂಸ್ಥೆಗಳನ್ನು ಎಂಪಾನೆಲ್‍ಗೊಳಿಸಲಾಗಿರುತ್ತದೆ. ಜಿಲ್ಲೆಗಳಿಗೆ ನೀಡಿದ ಕ್ರಿಯಾ ಯೋಜನೆ ಪ್ರಕಾರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಎಂಪಾನೆಲ್ ಮಾಡಿದ ಯಾವುದಾದರೂ ಸಂಸ್ಥೆಗಳಿಗೆ ಟಾರ್ಪಾಲಿನ್ ಸರಬರಾಜು ಆದೇಶ ನೀಡುವ ಮುನ್ನ ಮತ್ತೊಮ್ಮೆ ಪರವಾನಿಗೆಯನ್ನು ಹೊಂದಿರುವ ಬಗ್ಗೆ ಮತ್ತು ಪರವಾನಿಗೆಯ ಸಿಂಧುತ್ವ ಪರಿಶೀಲನೆ ಮಾಡಲು ಸೂಚಿಸಿದೆ ಎಂದು ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X