ಪಿಸ್ತೂಲಿನಿಂದ ಗುಂಡು ಹಾರಿಸಿ ಬಿಇಒ ಆತ್ಮಹತ್ಯೆ

ಬೆಂಗಳೂರು, ಡಿ.26: ಯಲಹಂಕದ ಕ್ಷೇತ್ರ ಶಿಕ್ಷಣಾಧಿಕಾರಿ(ಬಿಇಓ) ಮೃತದೇಹ ಪಿಸ್ತೂಲ್‍ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಇಲ್ಲಿನ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಿಇಓ ಕಮಲಾಕರ್ ಎಂಬುವರ ಶವ ಪತ್ತೆಯಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಕಮಲಾಕರ್ ಖಿನ್ನತೆಗೆ ಒಳಗಾಗಿದ್ದರು. ರವಿವಾರ ಮಧ್ಯಾಹ್ನ ಸುಮಾರು 1:30ರ ವೇಳೆ ಮನೆಯಲ್ಲಿ ಯಾರೂ ಇಲ್ಲದಿರುವ ಸಮಯ ನೋಡಿ ಪಿಸ್ತೂಲ್‍ನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶಿವಮೊಗ್ಗದ ತೀರ್ಥಹಳ್ಳಿಯ ಟೆಂಕಬೈಲಿನ ಕಮಲಾಕರ್ ಗೆ ಓರ್ವ ಮಗನಿದ್ದಾನೆ. ನಾಲ್ಕು ವರ್ಷಗಳಿಂದ ಯಲಹಂಕದಲ್ಲಿ ಬಿಇಓ ಆಗಿ ಕೆಲಸ ಮಾಡಿಕೊಂಡಿದ್ದರು. ಕೊಡಿಗೆಹಳ್ಳಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿ, ಮೊಕದ್ದಮೆ ದಾಖಲಿಸಿದ್ದಾರೆ.
Next Story





