Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸನ್ನಿ ಲಿಯೋನ್‌ ʼಮಧುಬನ್‌ʼ ಹಾಡಿಗೆ...

ಸನ್ನಿ ಲಿಯೋನ್‌ ʼಮಧುಬನ್‌ʼ ಹಾಡಿಗೆ ವಿರೋಧ: ಸಾಹಿತ್ಯ, ಹೆಸರು ಬದಲಾಯಿಸುತ್ತೇವೆ ಎಂದ ಸರಿಗಮ ಮ್ಯೂಸಿಕ್‌ ಲೇಬಲ್

ವಾರ್ತಾಭಾರತಿವಾರ್ತಾಭಾರತಿ26 Dec 2021 8:25 PM IST
share
ಸನ್ನಿ ಲಿಯೋನ್‌ ʼಮಧುಬನ್‌ʼ ಹಾಡಿಗೆ ವಿರೋಧ: ಸಾಹಿತ್ಯ, ಹೆಸರು ಬದಲಾಯಿಸುತ್ತೇವೆ ಎಂದ ಸರಿಗಮ ಮ್ಯೂಸಿಕ್‌ ಲೇಬಲ್

ಭೋಪಾಲ್: ನಟಿ ಸನ್ನಿ ಲಿಯೋನ್‌ ನಟಿಸಿರುವ ವಿಡಿಯೋ ಹಾಡು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಆರೋಪಿಸಿದ ಬಳಕ ಸರಿಗಮ ಸಂಗೀತ ಲೇಬಲ್ ರವಿವಾರ "ಮಧುಬನ್" ಹಾಡಿನ ಸಾಹಿತ್ಯ ಮತ್ತು ಹೆಸರನ್ನು "ಬದಲಾಯಿಸಲಾಗುತ್ತದೆ" ಎಂದು ಹೇಳಿಕೆ ನೀಡಿದೆ.

ವೀಡಿಯೊದಲ್ಲಿ ನಟಿಸಿರುವ ನಟಿ ಸನ್ನಿ ಲಿಯೋನ್ ಮತ್ತು ಗಾಯಕರಾದ ಶರೀಬ್ ಮತ್ತು ತೋಶಿ ಅವರು ಕ್ಷಮೆಯಾಚಿಸುವಂತೆ ಮತ್ತು ಮೂರು ದಿನಗಳಲ್ಲಿ ತಮ್ಮ 'ಮಧುಬನ್ ಮೇ ರಾಧಿಕಾ, ಜೈಸೆ ಜಂಗಲ್ ಮೆ ನಾಚೆ ಮೋರ್' ಹಾಡನ್ನು ಹಿಂಪಡೆಯುವಂತೆ ಸಚಿವರು ಭಾನುವಾರ ಎಚ್ಚರಿಸಿದ್ದು, ಇಲ್ಲದಿದ್ದರೆ ಕ್ರಮ ಎದುರಿಸಬೇಕಾಗುತ್ತದೆ ಎಂದಿದ್ದರು.

"ಇತ್ತೀಚಿನ ಪ್ರತಿಕ್ರಿಯೆಯ ಹಿನ್ನೆಲೆಯಲ್ಲಿ ಮತ್ತು ನಮ್ಮ ದೇಶವಾಸಿಗಳ ಭಾವನೆಗಳನ್ನು ಗೌರವಿಸಿ, ನಾವು ಮಧುಬನ್ ಹಾಡಿನ ಸಾಹಿತ್ಯ ಮತ್ತು ಹೆಸರನ್ನು ಬದಲಾಯಿಸುತ್ತೇವೆ. ಹೊಸ ಹಾಡು ಮುಂದಿನ 3 ದಿನಗಳಲ್ಲಿ ಎಲ್ಲಾ ಪ್ಲಾಟ್‌ಫಾರ್ಮ್‌ಗಳಲ್ಲಿ ಹಳೆಯದನ್ನು ಬದಲಾಯಿಸಿ ಬಿಡುಗಡೆ ಮಾಡಲಾಗುತ್ತದೆ," ಎಂದು ಸರಿಗಮ, ಡಿಸೆಂಬರ್ 22 ರಂದು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಹಾಡನ್ನು ಬಿಡುಗಡೆ ಮಾಡಿದ ಸಂಕ್ಷಿಪ್ತ ಹೇಳಿಕೆಯಲ್ಲಿ ತಿಳಿಸಿದೆ.

ಮಧ್ಯಪ್ರದೇಶ ಸರ್ಕಾರದ ವಕ್ತಾರರೂ ಆಗಿರುವ ಮಿಶ್ರಾ, "ಹಿಂದೂಗಳು ಮಾ ರಾಧೆಯನ್ನು ಪೂಜಿಸುತ್ತಾರೆ ಮತ್ತು ಹಾಡು ಜನರ ಭಾವನೆಗಳಿಗೆ ಧಕ್ಕೆ ತಂದಿದೆ" ಎಂದು ಹೇಳಿದ್ದಾರೆ.

"ಕೆಲವು ವಿಧರ್ಮಿಗಳು ನಿರಂತರವಾಗಿ ಹಿಂದೂ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ. 'ಮಧುಬನ್ ಮೇ ರಾಧಿಕಾ ನಾಚೆ' ವೀಡಿಯೊ ಕೂಡಾ ಅಂತಹ ಖಂಡನೀಯ ಪ್ರಯತ್ನವಾಗಿದೆ. ನಾನು ಸನ್ನಿ ಲಿಯೋನ್ ಜಿ, ಶರೀಬ್ ಮತ್ತು ತೋಶಿ ಜಿ ಅವರಿಗೆ ಅರ್ಥಮಾಡಿಕೊಳ್ಳಲು ಎಚ್ಚರಿಕೆ ನೀಡುತ್ತಿದ್ದೇನೆ. ಅವರು ಮೂರು ದಿನಗಳಲ್ಲಿ ಕ್ಷಮೆಯಾಚಿಸಿದ ನಂತರ ಹಾಡನ್ನು ತೆಗೆದುಹಾಕದಿದ್ದರೆ ನಾವು ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ" ಎಂದು ಮಿಶ್ರಾ ಹಾಡಿನ ಬಗ್ಗೆ ಕೇಳಿದಾಗ ಸುದ್ದಿಗಾರರಿಗೆ ತಿಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X