ಪರ್ಯಾಯ ಮಂಗಲೋತ್ಸವದ ‘ವಿಶ್ವಾರ್ಪಣಮ್’ ಸಮಾರೋಪ

ಉಡುಪಿ, ಡಿ.26: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಮ್ಮಿಕೊಳ್ಳ ಲಾದ ಪರ್ಯಾಯ ಅದಮಾರು ಮಠದ ಪರ್ಯಾಯ ಮಂಗಲೋತ್ಸವದ ‘ವಿಶ್ವಾರ್ಪಣಮ್’ ಸಮಾರೋಪ ಸಮಾರಂಭ ರವಿವಾರ ನಡೆಯಿತು.
ಯಕ್ಷಗಾನ ಕ್ಷೇತ್ರದ ಸಾಧನೆಗಾಗಿ ಸಾಲ್ಗೋಡು ಶ್ರೀಪಾದ ತಿಮ್ಮಣ್ಣ ಭಟ್ಟರಿಗೆ ಶ್ರೀನರಹರಿತೀರ್ಥ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉಡುಪಿ ಶಾಸಕ ಕೆ. ರಘುಪತಿ ಭಟ್, ಪಿಪಿಸಿ ಸಂಸ್ಕೃತ ಪ್ರಾಧ್ಯಾಪಕ ಡಾ.ಟಿ.ಎಸ್.ರಮೇಶ್, ಮಠದ ಕಲಾ ಸಂಘಟಕರಾದ ಪ್ರಾದೇಶ ಆಚಾರ್ಯ, ವಿದ್ವಾಂಸರಾದ ಹೆರ್ಗ ವಿದ್ವಾನ್ ರವೀಂದ್ರ ಭಟ್, ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ, ಯಕ್ಷಗಾನ ಕಲಾವಿದ ವಾಸುದೇವ ರಂಗಾ ಭಟ್ಟ, ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಪತಿ ಎ.ರಾಘವೇಂದ್ರ ರಾವ್, ನಿವೃತ್ತ ಐಎಎಸ್ ಅಧಿಕಾರಿ ಟಿ.ಶ್ಯಾಮ ಭಟ್ ಮಠದ ಸಲಹೆಗಾರ ಪುರುಷೋತ್ತಮ ಅಡ್ವೆ ಅವರನ್ನು ಸನ್ಮಾನಿಸಲಾಯಿತು.
ಪರ್ಯಾಯ ಪೀಠಾಧೀಶ ಶ್ರೀಈಶಪ್ರಿಯತೀರ್ಥ ಸ್ವಾಮೀಜಿ, ಅದಮಾರು ಹಿರಿಯ ಮಠಾಧೀಶ ಶ್ರೀವಿಶ್ವಪ್ರಿಯತೀರ್ಥ ಸ್ವಾಮೀಜಿ, ಪಲಿಮಾರು ಹಿರಿಯ ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ, ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕಾಣಿಯೂರು ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಸೋದೆ ಶ್ರೀೀವಿಶ್ವವಲ್ಲಭ ತೀರ್ಥ ಸ್ವಾಮೀಜಿ, ಪಲಿಮಾರು ಕಿರಿಯ ಶ್ರೀವಿದ್ಯಾರಾಜೇಶ್ವರ ತೀರ್ಥ ಸ್ವಾಮೀಜಿ, ಶೀರೂರು ಶ್ರೀವೇದವರ್ಧನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.
ಮುಖ್ಯ ಅತಿಥಿಗಳಾಗಿ ಕೆನರಾ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಬ್ರಿಜ್ ಮೋಹನ ಶರ್ಮ, ಚೆನ್ನೈನ ಸಿ.ಆರ್.ಬಾಲಕೃಷ್ಣ ಭಟ್ ಉಪಸ್ಥಿತರಿದ್ದರು. ಮಠದ ವ್ಯವಸ್ಥಾಪಕ ಗೋವಿಂದರಾಜ್ ಸ್ವಾಗತಿಸಿದರು. ಕೃಷ್ಣರಾಜ ಭಟ್ ಕುತ್ಪಾಡಿ ಕಾರ್ಯಕ್ರಮ ನಿರ್ವಹಿಸಿದರು.







