ಲಕ್ನೋದಲ್ಲಿ ಬ್ರಹ್ಮೋಸ್ ಕ್ಷಿಪಣಿಗಳ ಉತ್ಪಾದನಾ ಘಟಕಕ್ಕೆ ಶಿಲಾನ್ಯಾಸ
ಲಕ್ನೋ,ಡಿ.26: ಇಲ್ಲಿ ತಲೆಯೆತ್ತಲಿರುವ ಬ್ರಹ್ಮೋಸ್ ಕ್ಷಿಪಣಿ ಉತ್ಪಾದನಾ ಘಟಕ ಮತ್ತು ಡಿಆರ್‌ಡಿಒ ಲ್ಯಾಬ್‌ಗೆ ಉ.ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮತ್ತು ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಶಿಲಾನ್ಯಾಸ ನೆರವೇರಿಸಿದರು.
ಉತ್ತರ ಪ್ರದೇಶವು ರಕ್ಷಣಾ ಉತ್ಪಾದನಾ ಕೇಂದ್ರವಾಗಲಿದೆ ಮತ್ತು ಲಕ್ನೋದಲ್ಲಿ ಬ್ರಹ್ಮೋಸ್ ಕ್ಷಿಪಣಿಗಳು ತಯಾರಾಗಲಿವೆ. ಇದು ಯುವಜನರಿಗೆ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ ಎಂದು ಆದಿತ್ಯನಾಥ್ ತಿಳಿಸಿದರು.
Next Story





