Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ನಡಿಗರನ್ನು ಹತ್ತಿಕ್ಕುವ,...

ಕನ್ನಡಿಗರನ್ನು ಹತ್ತಿಕ್ಕುವ, ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಿದೆ: ಕುಮಾರಸ್ವಾಮಿ

ಯುಜಿಸಿ-ಎನ್ಇಟಿ ಪರೀಕ್ಷೆ: ಕನ್ನಡ ಐಚ್ಛಿಕ ಪಶ್ನೆಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳಿದ್ದಿದ್ದಕ್ಕೆ ವಿರೋಧ

ವಾರ್ತಾಭಾರತಿವಾರ್ತಾಭಾರತಿ27 Dec 2021 10:03 AM IST
share
ಕನ್ನಡಿಗರನ್ನು ಹತ್ತಿಕ್ಕುವ, ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಿದೆ: ಕುಮಾರಸ್ವಾಮಿ

ಬೆಂಗಳೂರು, ಡಿ.27: ರಾಷ್ಟ್ರೀಯ ಪರಿಕ್ಷಾ ಸಂಸ್ಥೆ ರವಿವಾರ ನಡೆಸಿದ ಪರೀಕ್ಷೆಯಲ್ಲಿ ಯುಜಿಸಿ-ಎನ್ ಇಟಿ ಕನ್ನಡ ಐಚ್ಛಿಕ ಭಾಷಾ ಪಶ್ನೆ ಪತ್ರಿಕೆಯ 100 ಪ್ರಶ್ನೆಗಳಲ್ಲಿ 90 ಪ್ರಶ್ನೆಗಳು ಹಿಂದಿಯಲ್ಲೇ ಇದ್ದುದ್ದನ್ನು ತೀವ್ರವಾಗಿ ವಿರೋಧಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸರಕಾರದ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕುವ ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕೂಡಲೇ ಪರಿಕ್ಷಾ ಸಂಸ್ಥೆಯು ಆಗಿರುವ ಲೋಪವನ್ನು ಸರಿಪಡಿಸಿ ಮರು ಪರೀಕ್ಷೆ ನಡೆಸಬೇಕು. ಎರಡು ವರ್ಷಗಳಿಂದ ಪರಿಕ್ಷೆಗಾಗಿ ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅವರ ಟ್ವೀಟ್ ನ ಪೂರ್ಣರೂಪ ಇಂತಿದೆ...

"ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ"

ನಾನು ಮೊದಲಿನಿಂದಲೂ ಹೇಳುತ್ತಿರುವ ಮಾತಿದು. ಈ ಮಾತು ಪದೇಪದೆ ಮರುಕಳಿಸುತ್ತಿರುವುದು ನನಗೆ ಬಹಳ ನೋವುಂಟು ಮಾಡಿದೆ. ಕೇಂದ್ರ ಸರಕಾರದ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕುವ ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ.

ನಿನ್ನೆ ರಾಷ್ಟ್ರೀಯ ಪರಿಕ್ಷಾ ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ಯುಜಿಸಿ-ಎನ್ ಇಟಿ ಕನ್ನಡ ಐಚ್ಛಿಕ ಭಾಷಾ ಪಶ್ನೆ ಪತ್ರಿಕೆಯ 100 ಪ್ರಶ್ನೆಗಳಲ್ಲಿ 90 ಪ್ರಶ್ನೆಗಳು ಹಿಂದಿಯಲ್ಲೇ ಇದ್ದವು. ಅದನ್ನು ಕಂಡ ಅಭ್ಯರ್ಥಿಗಳು ಗೊಂದಲಕ್ಕೆ ಒಳಗಾಗಿ ಪರೀಕ್ಷೆಯನ್ನು ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ್ದಾರೆ.

ಇದು ಕನ್ನಡದ ಮೇಲಿನ ತಾತ್ಸಾರ ಹಾಗೂ ಹಿಂದಿ ಹೇರಿಕೆಯ ವಿಪರೀತ. ಅಲ್ಲದೆ, ಪರೀಕ್ಷೆ ನಡೆಸಿದ ಸಂಸ್ಥೆ ಮಾಡಿರುವ ಕನ್ನಡ ದ್ರೋಹ. ಉದ್ದೇಶಪೂರ್ವಕವಾಗಿಯೇ ಇಂಥ ಕೃತ್ಯಗಳನ್ನು ಕನ್ನಡದ ವಿರುದ್ಧ ಎಸಗಲಾಗುತ್ತಿದೆ. ಕನ್ನಡಿಗರ ಬಗ್ಗೆ ಈ ಕಠಿಣತೆ ಏಕೆ?

ರೈಲ್ವೆ, ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಸರಕಾರದ  ಇನ್ನು ಹಲವಾರು ಉದ್ಯೋಗ ಅವಕಾಶಗಳಲ್ಲಿ ಕನ್ನಡದ ಪ್ರತಿಭಾವಂತ ಯುವಜನರಿಗೆ ಅನ್ಯಾಯ ಆಗುತ್ತಿದೆ. ಕನ್ನಡಿಗರ ಕಡೆಗಣನೆ ದೇಶಕ್ಕೆ ಒಳ್ಳೆಯದಲ್ಲ. ನಮ್ಮ ಮೌನ ನಮ್ಮ  ದೌರ್ಬಲ್ಯವಲ್ಲ ಎಂಬುದು ನೆನಪಿರಲಿ.

ಈ ಅನ್ಯಾಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೂಡಲೇ ಪರಿಕ್ಷಾ ಸಂಸ್ಥೆಯು ಆಗಿರುವ ಲೋಪ ಸರಿಮಾಡಿ ಪುನಾ ಪರೀಕ್ಷೆ ನಡೆಸಬೇಕು. ಎರಡು ವರ್ಷಗಳಿಂದ ಪರಿಕ್ಷೆಗಾಗಿ ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ ಕ್ರಮ ವಹಿಸಬೇಕು.

ಪರೀಕ್ಷೆ ಅವ್ಯವಸ್ಥೆ ಆಗರವಾಗಿತ್ತು ಎನ್ನುವುದು ತಿಳಿದುಬಂದಿದೆ. ಅದನ್ನು ಸರಿಪಡಿಸಿ ಉತ್ತಮ ರೀತಿಯಲ್ಲಿ ಪರೀಕ್ಷೆ ನಡೆಸಬೇಕು.

"ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ."

ನಾನು ಮೊದಲಿನಿಂದಲೂ ಹೇಳುತ್ತಿರುವ ಮಾತಿದು. ಈ ಮಾತು ಪದೇಪದೆ ಮರುಕಳಿಸುತ್ತಿರುವುದು ನನಗೆ ಬಹಳ ನೋವುಂಟು ಮಾಡಿದೆ. ಕೇಂದ್ರ ಸರಕಾರದ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕುವ ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ.1/6 pic.twitter.com/quJpxbr5Mr

— H D Kumaraswamy (@hd_kumaraswamy) December 27, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X