Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಚಿಕ್ಕಮಗಳೂರು-ಬೇಲೂರು ಚತುಷ್ಫಥ ರಸ್ತೆ...

'ಚಿಕ್ಕಮಗಳೂರು-ಬೇಲೂರು ಚತುಷ್ಫಥ ರಸ್ತೆ ಅಭಿವೃದ್ಧಿಗೆ ಸರಕಾರಕ್ಕೆ ಶೀಘ್ರ ಪ್ರಸ್ತಾವ ಸಲ್ಲಿಸಿ'

ಜಿಲ್ಲಾಡಳಿತಕ್ಕೆ ಉಸ್ತುವಾರಿ ಕಾರ್ಯದರ್ಶಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ27 Dec 2021 9:18 PM IST
share
ಚಿಕ್ಕಮಗಳೂರು-ಬೇಲೂರು ಚತುಷ್ಫಥ ರಸ್ತೆ ಅಭಿವೃದ್ಧಿಗೆ ಸರಕಾರಕ್ಕೆ ಶೀಘ್ರ ಪ್ರಸ್ತಾವ ಸಲ್ಲಿಸಿ

ಚಿಕ್ಕಮಗಳೂರು, ಡಿ.27: ಬೇಲೂರು-ಚಿಕ್ಕಮಗಳೂರು ನಡುವೆ ಸದ್ಯ ಇರುವ ಹೆದ್ದಾರಿಯನ್ನು ಚತುಷ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಬೇಕಿದ್ದು, ಈ ಸಂಬಂಧ ರಾಜ್ಯ ಸರಕಾರಕ್ಕೆ ಶೀಘ್ರ ಪ್ರಸ್ತಾವ ಸಲ್ಲಿಸುವಂತೆ ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿ.ಶಿಖಾ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು,  ಜಿಲ್ಲೆಯ ಪ್ರವಾಸೋದ್ಯಮ ಬೆಳವಣಿಗೆಯನ್ನು ಇನ್ನಷ್ಟು ಉತ್ತೇಜಿಸಲು ಮತ್ತು ಭವಿಷ್ಯದ ಸಂಚಾರ ಹಿತದೃಷ್ಟಿಯಿಂದ ಚಿಕ್ಕಮಗಳೂರು -ಬೇಲೂರು ರಸ್ತೆ ಮೇಲ್ದರ್ಜೆಗೇರಿಸುವುದು ಅಗತ್ಯವಾಗಿದೆ. ಆದ್ದರಿಂದ ಸರಕಾರಕ್ಕೆ ಶೀಘ್ರ ಪ್ರಸ್ತಾವ ಸಲ್ಲಿಸಲು ಕ್ರಮ ಕೈಗೊಳ್ಳಬೇಕು. ನಗರದಲ್ಲಿ ಈಗಿರುವ ಹೆಲಿಪ್ಯಾಡನ್ನು ಹೆಲಿಪೋರ್ಟ್ ಆಗಿ ಪರಿವರ್ತಿಸಿದರೆ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹೆಚ್ಚು ಬಲ ಬರಲಿದೆ. ಈ ನಿಟ್ಟಿನಲ್ಲಿ ವಿವರವಾದ ಯೋಜನಾ ವರದಿ ತಯಾರಿಸಿ ಸಲ್ಲಿಸುವಂತೆ ಉಸ್ತುವಾರಿ ಕಾರ್ಯದರ್ಶಿ ಶಿಖಾ ಜಿಲ್ಲಾಧಿಕಾರಿಗೆ ಸೂಚಿಸಿದರು. ಜಿಲ್ಲೆಯ ಅಭಿವೃದ್ಧಿಯ ದೃಷ್ಠಿಯಿಂದ ಮಾಸ್ಟರ್ ಪ್ಲಾನ್ ತಯಾರಿಸಿ ಪ್ರಮುಖ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದ ಅವರು, ಅತಿವೃಷ್ಟಿಯಿಂದ ಮನೆ ಹಾನಿಯಾದವರಿಗೆ ಪರಿಹಾರ ವಿತರಣೆ ಸಂಬಂಧ ಎಲ್ಲಾ ಪ್ರಕ್ರಿಯೆಗಳನ್ನು ಶೀಘ್ರದಲ್ಲಿ ವಿಲೇವಾರಿ ಮಾಡಬೇಕು. ವಿಪತ್ತು ನಿರ್ವಹಣೆಗೆ ಅನುದಾನದ ಕೊರತೆಯಾಗದಂತೆ ಗಮನಹರಿಸಬೇಕು. ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹರಿಸಲು ಆದ್ಯತೆ ನೀಡಬೇಕು. ಕೋವಿಡ್ ಲಸಿಕಾಕರಣದಲ್ಲಿ ಎರಡನೇ ಡೋಸ್ ನೀಡಿಕೆ ಕಾರ್ಯವನ್ನು ತ್ವರಿತಗೊಳಿಸಬೇಕೆಂದರು.

ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಮಾತನಾಡಿ, ಜಿಲ್ಲೆಯಲ್ಲಿ ಸಾಂಬಾರು ಬೆಳೆಗಳ ಪಾರ್ಕ್(ಸ್ಪೆöÊಸ್ ಪಾರ್ಕ್) ನಿರ್ಮಾಣಕ್ಕೆ ಈಗಾಗಲೇ 10 ಎಕರೆ ಜಾಗವನ್ನು ಕೆಐಎಡಿಬಿಗೆ ಹಸ್ತಾಂತರಿಸಲಾಗಿದೆ. ಈ ಕಾಮಗಾರಿ ಪ್ರಕ್ರಿಯೆಗೆ ತ್ವರಿತ ಚಾಲನೆ ನೀಡಲು ಈಗಾಗಲೇ ಸಾಂಬಾರು ಮಂಡಳಿಗೆ ಪತ್ರ ಬರೆಯಲಾಗಿದೆ. ಮಂಡಳಿಯಿಂದ ಪೂರಕವಾದ ಸ್ಪಂದನೆ ದೊರಕಿದ್ದು, ಪ್ರವಾಸೋದ್ಯಮದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಜಿಲ್ಲೆಯ  ರೆಸಾರ್ಟ್ ಮಾಲಕರೊಂದಿಗೆ ಸಭೆ ನಡೆಸಲಾಗಿದೆ. ಈ ಕ್ಷೇತ್ರದಲ್ಲಿ ವೃತ್ತಿ ನೈಪುಣ್ಯವುಳ್ಳವರನ್ನು ಸೃಷ್ಟಿಸಲು ಕೌಶಲ್ಯಾಭಿವೃದ್ಧಿ ತರಭೇತಿ ನೀಡಲು ಮುಂದೆ ಬಂದಿದ್ದಾರೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಜಿಲ್ಲೆಯಲ್ಲಿ ಜಲಜೀವನ್ ಮಿಶನ್ ಯೋಜನೆಯಡಿ 251 ಕಾಮಗಾರಿಗಳು ಪ್ರಾರಂಭವಾಗಿದೆ. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಪ್ರತೀ ಮನೆಗೆ ನಳ್ಳಿನೀರಿನ ಸಂಪರ್ಕ ಒದಗಿಸುವ ಗುರಿ ಇಟ್ಟುಕೊಳ್ಳಲಾಗಿದ್ದು, ನರೇಗಾ ಯೋಜನೆಯಲ್ಲಿ ಅಗತ್ಯ ಕಾಮಗಾರಿಗಳನ್ನು ಮಾಡಲಾಗಿದೆ. ಜಿಲ್ಲೆಯಲ್ಲಿ ವಸತಿ ಯೋಜನೆಯಡಿ ನಿವೇಶನ ಗುರುತಿಸಿ, ಮನೆ ನಿರ್ಮಿಸಲು ಸ್ಪಷ್ಟವಾದ ಯೋಜನೆ ರೂಪಿಸಲಾಗಿದೆ. ಜಮೀನು ಮಂಜೂರಾತಿಗೆ ಕಂದಾಯ ಇಲಾಖೆಯೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಳ್ಳಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್, ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪಾ, ಉಪವಿಭಾಗಾಧಿಕಾರಿ ಡಾ.ಎಚ್.ಎಲ್.ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X