ಚಿಕ್ಕಮಗಳೂರು ನಗರಸಭೆ ಚುನಾವಣೆ: ಶಾಂತಿಯುತವಾಗಿ ನಡೆದ ಮತದಾನ

ಚಿಕ್ಕಮಗಳೂರು: ಇಲ್ಲಿನ ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ನಗರದಲ್ಲಿ ನಡೆದ ಮತದಾನ ಶಾಂತಿಯುತವಾಗಿ ನಡೆಯಿತು.
ಮತದಾನಕ್ಕಾಗಿ ನಗರಾದ್ಯಂತ 110 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಸೋಮವಾರ ಬೆಳಗ್ಗೆ 7ರಿಂದ ಆರಂಭಗೊಂಡ ಮತದಾನ ಪ್ರಕ್ರಿಯೆ ಸಂಜೆ 5ರವರೆಗೆ ನಡೆಯಿತು. ಬೆಳಗ್ಗೆ ಮತದಾನ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದAತೆ ಮತದಾರರು ಆಯಾ ಮತಗಟ್ಟೆಗಳಿಗೆ ತೆರಳಿ ಸರದಿಯಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು. ಆರಂಭದಲ್ಲಿ ಮಂದಾಗತಿ ಸಾಗಿದ ಮತದಾನ ಪ್ರಕ್ರಿಯೆ ನಂತರ ಬಿರುಸು ಪಡೆದು ಕೊಂಡಿತು.
ಬೆಳಿಗ್ಗೆ 7ರಿಂದ 9ಗಂಟೆಯವರೆಗೆ ನಗರದಲ್ಲಿ ತೆರೆಯಲಾಗಿದ್ದ 110 ಮತಕೇಂದ್ರಗಳಲ್ಲಿ ಶೇ.9.40ರಷ್ಟು ಜನರು ತಮ್ಮ ಹಕ್ಕು ಚಲಾಯಿಸಿದರು. 7ಗಂಟೆಯಿAದ 11ಗಂಟೆವರೆಗೂ ಶೇ.20.68ರಷ್ಟು ಮತದಾರರು ಮತ ಚಲಾಯಿಸಿದ್ದರೇ ಮಧ್ಯಾಹ್ನ 1ಗಂಟೆ ವೇಳೆಗೆ ಶೇ.35.58ರಷ್ಟು ಮತದಾರರು ಹಕ್ಕು ಚಲಾಯಿಸಿದರು. ಸಂಜೆ 3ರ ವೇಳೆಗೆ ಶೇ.47.05ರಷ್ಟು ಮತದಾರರು ಮಾತ್ರ ಮತಕೇಂದ್ರಗಳಿಗೆ ತೆರಳಿ ಮತ ಚಲಾಯಿಸಿದ್ದರು.
ಮತದಾರರಿಗೆ ಅನುಕೂಲವಾಗುವ ದೃಷ್ಟಿಯಿಂದ ಮತಕೇಂದ್ರದ ಸಮೀಪದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಆಮ್‌ಆದ್ಮಿ, ಸಿಪಿಐ, ಬಿಎಸ್ಪಿ, ಎಸ್‌ಡಿಪಿಐ ಹಾಗೂ ಪಕ್ಷೇತರ ಅಭ್ಯರ್ಥಿಗಳು ಶಾಮಿಯಾನದ ಟೆಂಟ್‌ಗಳನ್ನು ನಿರ್ಮಿಸಿ ಮತದಾರರ ಪಟ್ಟಿಯಲ್ಲಿರುವ ಮತದಾರನ ಸಂಖ್ಯೆಯನ್ನು ಬರೆದುಕೊಡುತ್ತಿದ್ದ ದೃಶ್ಯಗಳು ಕಂಡು ಬಂದವು.
ಶಾಸಕ ಸಿ.ಟಿ.ರವಿ, ನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ತೆರೆಯಲಾಗಿದ್ದ ಮತಗಟ್ಟೆಗೆ ಪತ್ನಿ ಪಲ್ಲವಿ ಸಿ.ಟಿ.ರವಿ ಹಾಗೂ ಮುಖಂಡರೊಂದಿಗೆ ತೆರಳಿ ತಮ್ಮ ಹಕ್ಕು ಚಲಾಯಿಸಿದರು. ಕಾಂಗ್ರೆಸ್ ಪಕ್ಷದ ಮುಖಂಡರಾದ ಮಾಜಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ 10ನೇ ವಾರ್ಡ್ನ ತಮಿಳು ಶಾಲೆ ಆವರಣದಲ್ಲಿ ತೆರೆಯಲಾಗಿದ್ದ ಮತಕೇಂದ್ರಕ್ಕೆ ತೆರಳಿ ತಮ್ಮಹಕ್ಕು ಚಲಾಯಿಸಿದರು. ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್ ಮಧುವನ ಬಡಾವಣೆಯ ಮತಗಟ್ಟೆಯಲ್ಲಿ ಮತಚಲಾಯಿಸಿದರು. ಜೆಡಿಎಸ್ ಪಕ್ಷದ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ವಾರ್ಡ್.ನಂ.5 ಹೊಸಮನೆ ಬಡಾವಣೆ ವಿಶ್ವವಿದ್ಯಾಲಯ ಶಾಲೆಯಲ್ಲಿ ತೆರೆಯಲಾಗಿದ್ದ ಮತಗಟ್ಟೆ ಕೇಂದ್ರಕ್ಕೆ ತೆರಳಿ ಮತ ಚಲಾಯಿಸಿದರು.
ಚಿಕ್ಕಮಗಳೂರು ನಗರಸಭೆಗೆ ಸೋಮವಾರ ನಡೆದ ಮತದಾನ ಪ್ರಕ್ರಿಯೆಯಲ್ಲಿ ಒಟ್ಟಾರೆ 60.99ರಷ್ಟು ಮತದಾನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಚಿಕ್ಕಮಗಳೂರು ನಗರಸಭೆ ವ್ಯಾಪ್ತಿಯಲ್ಲಿ 100610 ಮತದಾರರಿದ್ದು, ಈ ಪೈಕಿ ಶೇ.60.99ರಷ್ಟು ಮತದಾರರು ಮಾತ್ರ ಮತದಾನ ಮಾಡಿದ್ದಾರೆ.







