Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹವಾಮಾನ ಆಧಾರಿತ ಕೃಷಿಯ ಸಮಗ್ರ...

ಹವಾಮಾನ ಆಧಾರಿತ ಕೃಷಿಯ ಸಮಗ್ರ ಅಭಿವೃದ್ಧಿಗೆ ಚಿಂತನೆ: ಮುಖ್ಯಮಂತ್ರಿ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ27 Dec 2021 11:24 PM IST
share
ಹವಾಮಾನ ಆಧಾರಿತ ಕೃಷಿಯ ಸಮಗ್ರ ಅಭಿವೃದ್ಧಿಗೆ ಚಿಂತನೆ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಡಿ.27: ಹವಾಮಾನ ಆಧಾರಿತ ಕೃಷಿಯ ಸಮಗ್ರ ಅಭಿವೃದ್ಧಿಗೆ ಚಿಂತನೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸೋಮವಾರ ನಗರದ ಹಡ್ಸನ್ ವೃತ್ತದಲ್ಲಿರುವ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಆವರಣದಲ್ಲಿ ಕೃಷಿ ಭವನದ 2ನೇ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಹವಾಮಾನ ಆಧಾರಿತ ಹತ್ತು ಕೃಷಿ ವಲಯಗಳು ಇವೆ. ವರ್ಷಪೂರ್ತಿ ಒಂದಿಲ್ಲೊಂದು ಬೆಳೆ ತೆಗೆಯುವ ಹವಾಮಾನ ನಮ್ಮ ರಾಜ್ಯದಲ್ಲಿದೆ. ಹವಾಮಾನ ಆಧಾರಿತ ಕೃಷಿಯ ಸಮಗ್ರ ಅಭಿವೃದ್ಧಿಗೆ ಚಿಂತನೆ ಮಾಡಬೇಕು. ಹೈನುಗಾರಿಕೆ, ಪಶುಸಂಗೋಪನೆ ಸೇರಿದಂತೆ ಉಪಕಸುಬುಗಳನ್ನು ಮಾಡುವ ಮೂಲಕ ರೈತರ ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಸ್ವತಂತ್ರ ಚಿಂತನೆ ಮೂಲಕ ಕೃಷಿ ಅಭಿವೃದ್ಧಿ ಯೋಜನೆ: ಕೃಷಿಕ ಸಮಾಜ ಕೃಷಿ ಅಭಿವೃದ್ಧಿಗೆ ತನ್ನದೇ ಕೊಡುಗೆ ನೀಡಿದೆ. ಕೃಷಿ ಇಲಾಖೆಯ ಭಾಗವಾಗಿ ಕೆಲಸ ಮಾಡುವ ಜೊತೆಗೆ ಕೃಷಿಕ ಸಮಾಜ, ಸ್ವತಂತ್ರ ಚಿಂತನೆ ಮೂಲಕ ರೂಪಿಸಿದ ರೈತಪರ ಯೋಜನೆಗಳನ್ನು ಸರಕಾರ ಅನುಷ್ಠಾನಗೊಳಿಸಲಿದೆ. ಬೀಜ, ಗೊಬ್ಬರ, ಮಣ್ಣಿನ ಗುಣಮಟ್ಟ, ಮಾರುಕಟ್ಟೆ, ಸಂಗ್ರಹಣೆಗೆ ಸಂಬಂಧಿಸಿದ ಕೃಷಿಯಲ್ಲಿನ ಆಧುನಿಕ ಸವಾಲುಗಳಿಗೆ ಉತ್ತರಿಸುವ ಯೋಜನೆಗಳನ್ನು ರೂಪಿಸಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

ರೈತನು ತಾನು ಬೆಳೆದು, ಕಟಾವು ಮಾಡಿ, ಸಂಗ್ರಹಣೆ ಮಾಡಿದ ಬೆಳೆಗೆ ಸ್ಪರ್ಧಾತ್ಮಕವಾದ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಪಡೆಯುವವರೆಗೆ ರೈತರ ಕರ್ತವ್ಯ ಇರುತ್ತದೆ. ಈಗ ಸುಗ್ಗಿ ನಂತರ ಕೃಷಿ ಚಟುವಟಿಕೆಯಲ್ಲೂ ಕೂಡ ಕೃಷಿಕ ಹೆಚ್ಚಿನ ಆಸಕ್ತಿಯನ್ನು ವಹಿಸಬೇಕಾಗಿದೆ ಎಂದು ಅವರು ಹೇಳಿದರು.

ಗೋದಾಮು, ಶೈತ್ಯಾಗಾರಗಳು, ಮಾರುಕಟ್ಟೆ ಸಂಪರ್ಕ, ಆನ್‌ಲೈನ್ ಮಾರುಕಟ್ಟೆಗಳ ಮೂಲಕ ರೈತ ಬೆಳೆದ ಬೆಳೆಗೆ ಉತ್ತಮ ಬೆಲೆ ದೊರಕಿಸಿಕೊಡುವ ಪ್ರಕ್ರಿಯೆಯಲ್ಲಿ ಕೃಷಿಕ ಸಮಾಜ ಮಹತ್ವದ ಪಾತ್ರ ವಹಿಸುತ್ತದೆ. ಕೃಷಿಕ ಸಮಾಜದ ಈ ಜವಾಬ್ದಾರಿಗೆ ಸರಕಾರ ಎಲ್ಲ ರೀತಿಯ ಸಹಕಾರವನ್ನು ನೀಡುತ್ತದೆ ಎಂದು ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ನೈಸರ್ಗಿಕ ಕೃಷಿಗೆ ಪ್ರೋತ್ಸಾಹ: ಕೃಷಿಕನ ಆದಾಯ ಹೆಚ್ಚಿಸಲು ಸೆಕೆಂಡರಿ ಕೃಷಿ ನಿರ್ದೇಶನಾಲಯ ಸ್ಥಾಪನೆಗೆ ತೀರ್ಮಾನಿಸಲಾಗಿದೆ. ನೈಸರ್ಗಿಕ ಕೃಷಿಗೆ ಪ್ರೋತ್ಸಾಹಿಸಲು ಹೆಚ್ಚಿನ ಅನುದಾನವನ್ನು ಮುಂದಿನ ಆಯವ್ಯಯದಲ್ಲಿ ಮೀಸಲಿಡಲಾಗುವುದು. ಕೃಷಿ ವಲಯದಲ್ಲಿ ಶೇ.1ರಷ್ಟು ಬೆಳವಣಿಗೆಯಾದರೆ, ಕೈಗಾರಿಕಾ ವಲಯದಲ್ಲಿ ಶೇ.4ರಷ್ಟು ಹಾಗೂ ಸೇವಾ ಕ್ಷೇತ್ರದಲ್ಲಿ ಶೇ.10ರಷ್ಟು ಬೆಳವಣಿಗೆಯಾಗುತ್ತದೆ. ಆದುದರಿಂದ, ಕೃಷಿ ಕ್ಷೇತ್ರದ ಅಭಿವೃದ್ಧಿ ರಾಜ್ಯದ ಆರ್ಥಿಕತೆಯ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೇರಿದಂತೆ ಕೃಷಿ ಇಲಾಖೆಯ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X