Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋಟತಟ್ಟು ಕೊರಗ ಕಾಲನಿಯ ಮೆಹಂದಿ...

ಕೋಟತಟ್ಟು ಕೊರಗ ಕಾಲನಿಯ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರಿಂದ ಲಾಠಿ ಪ್ರಹಾರ ಆರೋಪ: ಠಾಣೆಗೆ ಮುತ್ತಿಗೆ

ಘಟನೆಯ ಕುರಿತು ತನಿಖೆ ನಡೆಸಲಾಗುವುದು ಎಂದ ಉಡುಪಿ ಜಿಲ್ಲಾ ಎಸ್ಪಿ

ವಾರ್ತಾಭಾರತಿವಾರ್ತಾಭಾರತಿ28 Dec 2021 2:36 PM IST
share
ಕೋಟತಟ್ಟು ಕೊರಗ ಕಾಲನಿಯ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರಿಂದ ಲಾಠಿ ಪ್ರಹಾರ ಆರೋಪ: ಠಾಣೆಗೆ ಮುತ್ತಿಗೆ

ಕೋಟ : ಬ್ರಹ್ಮಾವರ ತಾಲೂಕಿನ ಕೋಟತಟ್ಟು ಬಾರಿಕೆರೆ ಕೊರಗ ಕಾಲನಿಯಲ್ಲಿ  ತಡರಾತ್ರೆವರೆಗೂ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಾಂತಿ ಭಂಗ ಉಂಟಾದ ಹಿನ್ನೆಲೆಯಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ ಎನ್ನಲಾದ ಘಟನೆ ಸೋಮವಾರ ತಡ ರಾತ್ರಿ ನಡೆದಿದೆ.

ಕಾಲನಿಯಲ್ಲಿ ರಾತ್ರಿ ಆಯೋಜಿಸಲಾದ ರಾಜೇಶ್ ಎನ್ನುವವರ ಮೆಹಂದಿ ಕಾರ್ಯಕ್ರಮದಲ್ಲಿ ಡಿಜೆ ಅಳವಡಿಸಲಾಗಿತ್ತು. ಕಾರ್ಯಕ್ರಮ ತಡರಾತ್ರಿ ವರೆಗೂ ನಡೆದಿದೆ ಎನ್ನಲಾಗಿದ್ದು, ಇದರ ಶಬ್ದದಿಂದ ಸ್ಥಳೀಯರಿಗೆ ಕಿರಿಕಿರಿ ಉಂಟಾದ್ದರಿಂದ ಕೋಟ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಕೋಟ ಠಾಣಾಧಿಕಾರಿ ಸಂತೋಷ್ ಬಿಪಿ ನೇತೃತ್ವ ತಂಡವು ಸ್ಥಳಕ್ಕೆ ತೆರಳಿ ಡಿಜೆ ಬಂದ್ ಮಾಡುವಂತೆ ತಿಳಿಸಿದ್ದರು ಎಂದು ಹೇಳಲಾಗುತ್ತಿದ್ದು, ಇದರಿಂದ ಕೋಪಗೊಂಡ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದವರು 'ಎಲ್ಲಾ ಕಡೆ ಮೆಹಂದಿ ಕಾರ್ಯಕ್ರಮ ನಡೆಯುತ್ತದೆ, ಅವರಿಗೆ ಏನು ಹೇಳಲ್ಲ ಆದ್ರೆ ನಮ್ಮ ಸಮುದಾಕ್ಕೆ ಏಕೆ ಅಡ್ಡಿ ಪಡಿಸುತ್ತೀರಿ ?  ನಮಗೊಂದು ನ್ಯಾಯ ಬೇರೆಯವರಿಗೊಂದು ನ್ಯಾಯವೆ' ಎಂದು ಪೊಲೀಸರೊಂದಿಗೆ ಪ್ರಶ್ನಿಸಿರುವುದಾಗಿ ತಿಳಿದುಬಂದಿದೆ. ನಂತರ ಪೊಲೀಸರು ಗುಂಪು ಚದುರಿಸಲು ಲಘು ಲಾಠಿ ಚಾರ್ಜ್ ಮಾಡಿದ್ದು,  ಸ್ಥಳದಲ್ಲಿದ್ದ ಮೂವರನ್ನು ವಶಕ್ಕೆ ಪಡೆದಿರುವುದಾಗಿ ದೂರಲಾಗಿದೆ. ಘಟನೆಯನ್ನು ಖಂಡಿಸಿದ ಕೊರಗ ಸಮುದಾಯದವರು ರಾತ್ರಿ ಕೋಟ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ವಶಪಡಿಸಿಕೊಂಡವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.

ಕೊರಗ ಸಮುದಾಯದ ಮುಖಂಡ ಗಣೇಶ್ ಕುಂಬಾಸಿ ಹಾಗೂ ಹಲವರೊಂದಿಗೆ ಮಾತುಕತೆ ನಡೆಸಿ, ಸಾರ್ವಜನಿಕ ಶಾಂತಿಭಂಗ ಆರೋಪದಲ್ಲಿ ಕೇಸು ದಾಖಲಿಸಿ,  ವಶಕ್ಕೆ ಪಡೆದವರನ್ನು ಬಿಡುಗಡೆ ಮಾಡಿ ಪೊಲೀಸರು ಪ್ರಕರಣವನ್ನು ಇತ್ಯರ್ಥಗೊಳಿಸಿದರು ಎಂದು ತಿಳಿದುಬಂದಿದೆ.

ಈ ಸಂದರ್ಭ ಲಾಠಿ ಚಾರ್ಜ್ ನಿಂದ ಹಲವರಿಗೆ ಗಾಯವಾಗಿದ್ದು, ಗಾಯಗೊಂಡವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಿಳೆಯಿಂದ ದೂರು:

'ಎಲ್ಲರೂ ಮೆಹಂದಿ ಸಂಭ್ರಮದಲ್ಲಿ ಇದ್ದಾಗ ಏಕಾಏಕಿ  ಪೊಲೀಸರು ಬಂದು ಡಿಜೆ ಬಂದ್ ಮಾಡಿ ಕಾರ್ಯಕ್ರಮವನ್ನು ನಿಲ್ಲಿಸುವಂತೆ ಹೇಳಿದರು. ವಿಷೆಯ ಕೇಳುದರೊಳಗೆ ಅಲ್ಲಿದ್ದ ಹೆಂಗಸರು ಮಕ್ಕಳನ್ನು ನೋಡದೆ ಎಲ್ಲರಿಗೂ ಲಾಠಿಯಿಂದ ಹೊಡೆಯಲು ಪ್ರಾರಂಭಿಸಿದರು. ಅಷ್ಟೇ ಅಲ್ಲದೆ ಮದುಮಗನಿಗೂ ಸಹ ಹಲ್ಲೆ ಮಾಡಲಾಯಿತು. ಇದರಿಂದ ಮದುಮಗನ ಬೆರಳಿಗೆ ಪೆಟ್ಟಾಗಿರುತ್ತದೆ.  ಹೆಂಗಸರಿಗೆ ಲಾಠಿಯಿಂದ ಹೊಡೆದು ಹಲ್ಲೆ ಮಾಡಲಾಗಿದೆ, ಯಾವುದೇ ಮಹಿಳಾ ಪೊಲೀಸ್ ಇಲ್ಲದೆ ಮನೆಗೆ ನುಗ್ಗಿದ್ದಾರೆ' ಎಂದು ಅವರು ಆರೋಪಿಸಿದ್ದು, ನಮಗೆ  ನ್ಯಾಯ ಬೇಕು ಎಂದು ಒತ್ತಾಯಿಸಿದ್ದಾರೆ.

ಬ್ರಹ್ಮಾವರ ವೃತ್ತ ನಿರೀಕ್ಷಕರಾದ ಅನಂತ ಪದ್ಮನಾಭ ಮಾತನಾಡಿ, ಈ ಪ್ರಕರಣದ ಬಗ್ಗೆ  ಸಂಪೂರ್ಣ ತನಿಖೆ  ನಡೆಸಿ ಕೊರಗ ಸಮುದಾಯದವರಿಗೆ ನ್ಯಾಯ ಒದಗಿಸುತ್ತೇನೆ. ಅಲ್ಲದೆ ಯಾರು ತಪ್ಪಿತಸ್ಥ ಇದ್ದಾರೆ ಅವರ ಮೇಲೆ ಕ್ರಮ ಕೈ ಗೊಳ್ಳುತ್ತೇನೆ ಎಂದು ಮಾಧ್ಯಮರೊಂದಿಗೆ ತಿಳಿಸಿದ್ದಾರೆ.

ದಲಿತ ಸಂಘರ್ಷದ ಮುಖಂಡ  ಶಾಮ್ ಸುಂದರ್ ತೆಕ್ಕಟ್ಟೆ ಮಾತನಾಡಿ, ಕೋಟತಟ್ಟು ಕೊರಗ ಕಾಲನಿಯದಲ್ಲಿ ರಾಜೇಶ್ ಅವರ ಮೆಹಂದಿ ಕಾರ್ಯಕ್ರಮದಲ್ಲಿ ಡಿಜೆ ಹಾಕಿದ್ದರಿಂದ ಬಂದ್ ಮಾಡುವಂತೆ ಕೋಟ ಠಾಣಾಧಿಕಾರಿ ಹಾಗೂ ಸಿಬ್ಬಂದಿ ಹೆಂಗಸು, ಮಕ್ಕಳು ನೋಡದೆ  ಏಕಾಏಕಿ ಲಾಠಿ ಚಾರ್ಜ್ ಮಾಡಿ ಹಲ್ಲೆ ಮಾಡಿದ್ದಾರೆ. ಇದರಿಂದ ಹಲವರಿಗೆ ಗಾಯಗಳಾಗಿದೆ. ಈ ಹಲ್ಲೆಯನ್ನು ದಲಿತ ಸಂಘರ್ಷ ಸಮಿತಿ ಬಲವಾಗಿ ಖಂಡಿಸುತ್ತದೆ. ಅಲ್ಲದೆ ಠಾಣಾಧಿಕಾರಿಯನ್ನು ಅಮಾನತುಗೊಳಿಸಿ ತಪ್ಪಿತಸ್ಥ ಪೊಲೀಸರ   ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೇಳಿಕೊಂಡರು.

ಠಾಣಾಧಿಕಾರಿ ಸಂತೋಷ್ ಬಿ ಪಿ ಅವರು ಮಾತನಾಡಿ, ಮೆಹಂದಿ ಕಾರ್ಯಕ್ರಮಕ್ಕೆ ನಾವು ಅಡ್ಡಿ ಪಡಿಸಿಲ್ಲ. ಡಿಜೆ ಶಬ್ದದಿಂದ ತೊಂದರೆ ಆಗುತ್ತಿದೆ ಎಂದು ಸ್ಥಳೀಯರಿಂದ ದೂರು ಬಂದ ಹಿನ್ನೆಲೆಯಲ್ಲಿ ನಮ್ಮ ಸಿಬ್ಬಂದಿಗಳನ್ನು ಕಳಿಸಿ ಸಂಗೀತದ ಡಿಜೆಯ ಸೌಂಡ್ ಕಡಿಮೆ ಮಾಡಲು ಸೂಚಿಸಿದ್ದೇವೆ. ಅದಕ್ಕೆ ಯಾವುದೇ ಪ್ರತಿಕ್ರಿಯೆ ಮಾಡದಿದ್ದಾಗ ನಾನು ಸಿಬ್ಬಂದಿಗಳೊಂದಿಗೆ ತೆರಳಿ ಡಿಜೆ ಬಂದ್ ಮಾಡಲು ವಿನಂತಿಸಿದ್ದೆ. ಅದಕ್ಕೆ ಕೆಲವರು ಉಡಪೆ ಉತ್ತರ ನೀಡಿ ಬಂದ್ ಮಾಡಲ್ಲ ಏನು ಬೇಕಾದ್ರು ಮಾಡಿಕೊಳ್ಳಿ ಅಂತ  ಹೇಳಿದರು. ಅದಕ್ಕೆ ಅವರನ್ನು ವಶಕ್ಕೆ ಪಡೆಯುವಾಗ ಜನರು ತಲ್ಲಾಟ ಮಾಡಿದ್ದಾರೆ.  ಅದು ಬಿಟ್ಟು ಯಾವುದೇ ಪೊಲೀಸ್ ದೌರ್ಜನ್ಯ ನಡೆದಿಲ್ಲ ಎಂದು ಹೇಳಿದರು.

ಸಾಲಿಡಾರಿಟಿ ಉಡುಪಿ ಖಂಡನೆ

ಕೊರಗ ಸಮುದಾಯದ ಮನೆಯಲ್ಲಿ ನಡೆದ ಮೆಹೆಂದಿ ಕಾರ್ಯಕ್ರಮದಲ್ಲಿ ಲಾಠಿಚಾರ್ಜ್ ಆರೋಪ ಕೇಳಿಬಂದಿತು ಈ ಕೂಡಲೇ ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಉಡುಪಿ ಜಿಲ್ಲಾ ಸಂಚಾಲಕ ಯಾಸೀನ್ ಕೋಡಿಬೆಂಗ್ರೆ ಆಗ್ರಹಿಸಿದ್ದಾರೆ.

ಕೋಟ ತಟ್ಟುವಿನ ಕೊರಗ ಕಾಲನಿಯಲ್ಲಿ ಮೆಹೆಂದಿ ಕಾರ್ಯಕ್ರಮ ನಡೆಯುತ್ತಿರುವಾಗ ಪೊಲೀಸರು ಏಕಾಏಕಿ ನುಗ್ಗಿ ಲಾಠಿಚಾರ್ಜ್ ನಡೆಸಿದ ಆರೋಪ ಇದೆ. ದುರ್ಬಲ ಸಮುದಾಯದ ವಿರುದ್ಧದ ಈ ರೀತಿಯ ವರ್ತನೆಯನ್ನು ಸಾಲಿಡಾರಿಟಿ ಯೂತ್'ಮೂವ್ಮೆಂಟ್ ತೀವ್ರವಾಗಿ ಖಂಡಿಸುತ್ತದೆ. ಸಬ್ ಇನ್ಸ್‌ಪೆಕ್ಟರ್ ಸಂತೋಷ್ ಮತ್ತು ಸಿಬ್ಬಂದಿ ಸೇರಿ ಈ ರೀತಿಯ ವರ್ತನೆ ಮಾಡಿರುವ ಕುರಿತು ಆರೋಪ ಕೇಳಿ ಬಂದಿದೆ. ಅದರೊಂದಿಗೆ ಕೊರಗ ಸಮುದಾಯದ ನಾಯಕ ಗಣೇಶ್ ಅವರಿಗೂ ತೀವ್ರವಾಗಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು ಈ ಕುರಿತು ಕೂಡಲೇ ಸರಕಾರ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಸಾಲಿಡಾರಿಟಿ ಯೂತ್'ಮೂವ್ಮೆಂಟ್ ಆಗ್ರಹಿಸಿದೆ.

ಕೋಟ ತಟ್ಟು ಕೊರಗ ಸಮೂದಾಯದವರ ಮನೆಯಲ್ಲಿ ನಡೆದ ಮೆಹಂದಿ ಕಾರ್ಯಕ್ರಮಕ್ಕೆ ಏಕಾಏಕೀ ನುಗ್ಗಿ ಹೆಣ್ಣು ಮಕ್ಕಳಿಗೆ, ಮದುಮಗನಿಗೆ ಮತ್ತು ಇತರರಿಗೆ ಲಾಠಿ ಚಾರ್ಜ್ ಮಾಡಿ ಬೆದರಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕೋಟಾ ಠಾಣಾಧಿಕಾರಿ ಸಂತೋಷ್ ಮತ್ತು ಅವರೊಂದಿಗೆ ಲಾಠಿ ಚಾರ್ಜ್ ಮಾಡಿದ ಕೋಟ ಠಾಣೆ ಸಿಬ್ಬಂದಿಯನ್ನು ಈ ಕೂಡಲೇ ಅಮಾನತು ಮಾಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ ಮಾಸ್ತರ್ ಆಗ್ರಹಿಸಿದ್ದಾರೆ. ಈ ಕೂಡಲೇ ಅಮಾನತು ಮಾಡದಿದ್ದರೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದಿದ್ದಾರೆ. 

 ಉಡುಪಿ ಮುಸ್ಲಿಂ ಒಕ್ಕೂಟದಿಂದ ಖಂಡನೆ

ಕೋಟತಟ್ಟು ಬಾರಿಕೆರೆಯಲ್ಲಿ ಕೊರಗ ಸಮುದಾಯದ ರಾಜೇಶ್ ಎನ್ನುವವರ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರು ನಡೆಸಿದಂತಹ  ಲಾಠಿ ಚಾರ್ಜ್ ನ್ನು ಉಡುಪಿ ಮುಸ್ಲಿಂ ಒಕ್ಕೂಟವು ಬಲವಾಗಿ ಖಂಡಿಸುತ್ತದೆ. ಅಲ್ಲದೆ  ತಪ್ಪಿಸ್ಥತ  ಪೊಲೀಸರ ಮೇಲೆ ಕಾನೂನು ಕ್ರಮ ಕೈ ಗೊಂಡು    ಕೊರಗ ಸಮುದಾಯದಕ್ಕೆ ನ್ಯಾಯ ಒದಗಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಎಸ್ ಪಿ ಕಚೇರಿ ಮುಂದೆ ಧರಣಿ ಮಾಡುದಾಗಿ  ಉಡುಪಿ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೋಟ ಇಬ್ರಾಹಿಂ ಸಾಹೇಬ್ ತಿಳಿಸಿದ್ದಾರೆ.

''ಘಟನೆಯ ಕುರಿತಂತೆ ಡಿವೈಎಸ್ಪಿಯಿಂದ ಮಾಹಿತಿ ಕೇಳಿದ್ದು, ವರದಿ ಬಂದ ತಕ್ಷಣ ಮುಂದಿನ ಕ್ರಮಕೈಗೊಳ್ಳಲಾಗುವುದು''.
– ವಿಷ್ಣುವರ್ಧನ್, ಎಸ್ಪಿ

ಉಡುಪಿ ಜಿಲ್ಲೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X