Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ...

ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ, ಪತ್ರಕರ್ತರ ಸಂಘದ ಕೊಡುಗೆ ಅನನ್ಯ: ವೇದವ್ಯಾಸ ಕಾಮತ್

ಪತ್ರಕರ್ತರ ಜಿಲ್ಲಾ ಸಮ್ಮೇಳನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ28 Dec 2021 2:49 PM IST
share
ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ, ಪತ್ರಕರ್ತರ ಸಂಘದ ಕೊಡುಗೆ ಅನನ್ಯ: ವೇದವ್ಯಾಸ ಕಾಮತ್

ಮಂಗಳೂರು : ಸ್ವಾಸ್ಥ್ಯ ಸಮಾಜದ ನಿರ್ಮಾಣದಲ್ಲಿ ಪತ್ರಕರ್ತರ ಮತ್ತು ಪತ್ರಕರ್ತರ ಸಂಘದ ಪಾತ್ರ ಅನನ್ಯವಾದುದು ಎಂದು ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಜಿಲ್ಲಾ ಪತ್ರಕರ್ತರ ಸಮ್ಮೇಳನ 'ಸಾಧನೆ ಸಂಭ್ರಮ-2021'ನ್ನು ಉದ್ಘಾಟಿಸಿ ಅವರು ಮಾತನಾಡಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ  ಮಾದರಿಯಾಗಿ ಕೆಲಸ ಮಾಡುತಿದೆ. ಪತ್ರಕರ್ತರ ಸಂಘದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಲವು ಮಂದಿ ಜನ ಪ್ರತಿನಿಧಿಗಳಿಗೆ, ಸರಕಾರಕ್ಕೆ ಪ್ರೇರಣೆಯಾಗಿದೆ. ಬ್ರಾಂಡ್ ಮಂಗಳೂರು ಎಂಬ ಆಶಯದೊಂದಿಗೆ ಅಪೂರ್ವ ಮಾದರಿಯನ್ನು ನೀಡಿದೆ ಎಂದು ಹೇಳಿದರು. ಕೊರೋನ ಸಂದರ್ಭದಲ್ಲಿ ಜೀವದ ಹಂಗು ತೊರೆದು ಪತ್ರಕರ್ತರು ಅಭೂತಪೂರ್ವವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಅವರು ಹೇಳಿದರು‌. ಕಾರ್ಮಿಕ ಇಲಾಖೆ ನೀಡುವ ಕಿಟ್ ವಿತರಣೆಯನ್ನು  ಅವರು ನೆರವೇರಿಸಿದರು.

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್  ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು. ಮುಖ್ಯ ಅತಿಥಿಯಾಗಿದ್ದ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಮಾತನಾಡಿ ಕನ್ನಡ ನಾಡು, ನುಡಿ, ಜಲ, ನೆಲ ಭಾಷೆಯ ಬಗ್ಗೆ ಅಭಿಮಾನ ಯಾವತ್ತೂ ಕಡಿಮೆ ಆಗಬಾರದು. ನೆಲ, ಜಲ, ನಾಡು ನುಡಿಯ ಬೆಳವಣಿಗೆ ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು. ಸಿರಿಗನ್ನಡಂ ಗೆಲ್ಗೆ ಹಾಡನ್ನು ಹಾಡುವ  ಮೂಲಕ ಅವರು ಸಮಾರಂಭಕ್ಕೆ ಶುಭ ಹಾರೈಸಿದರು.

ಜಿಲ್ಲಾ ಸಂಘದ ಮೂರು ವರ್ಷಗಳ ಪ್ರಗತಿಯ ವಿವರಗಳನ್ನು ಒಳಗೊಂಡ ವಿಶೇಷ ಸಂಚಿಕೆ 'ಸಾಧನೆ' ಯನ್ನು ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಬಿಡುಗಡೆ ಮಾಡಿದರು.

ಮನೋಹರ ಪ್ರಸಾದರ ಕೃತಿ ಭಾವಚಿತ್ರ ಯಾನವನ್ನು  ಕರಾವಳಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಗಣೇಶ್ ರಾವ್ ಬಿಡುಗಡೆಗೊಳಿಸಿ ಮಾತನಾಡಿದರು. ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಮಡಪ್ಪಾಡಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಿದರು.

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಕುತ್ಲೂರು ಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ ವಿತರಣೆಯನ್ನು ಮಾಡಿದರು.

ಪತ್ರಿಕಾಭವನ ಟ್ರಸ್ಟ್ ಮಾಜಿ ಅಧ್ಯಕ್ಷ ಆನಂದ ಶೆಟ್ಟಿ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಆರಿಫ್ ಪಡುಬಿದ್ರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಬಾಳ ಜಗನ್ಬಾಥ ಶೆಟ್ಟಿ ಸ್ವಾಗತಿಸಿ ದ.ಕ‌‌.ಜಿಲ್ಲಾ ಕಾರ್ಯನಿರತ  ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಸಂಘದ ಮಾಜಿ ಅಧ್ಯಕ್ಷ ಪಿ.ಬಿ. ಹರೀಶ್ ರೈ ಕಾರ್ಯಕ್ರಮ ನಿರೂಪಿಸಿದರು.

ಉದ್ಘಾಟನಾ ಸಮಾರಂಭದ ಮೊದಲು ಜಿಲ್ಲೆಯಿಂದ ಪ್ರಕಟವಾಗುವ ದಿನಪತ್ರಿಕೆಗಳು ಸೇರಿದಂತೆ ಪ್ರಮುಖ ಪತ್ರಿಕೆಗಳ ಪ್ರತಿಗಳು, ಪುಸ್ತಕಗಳಿಂದ ತುಂಬಿದ  ಪಲ್ಲಕಿಯೊಂದಿಗೆ ಅತಿಥಿ ಗಣ್ಯರನ್ನು ಸಭಾಂಗಣದೊಳಕ್ಕೆ ಮೆರವಣಿಗೆ ಯಲ್ಲಿ ಸ್ವಾಗತಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X