Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶಾದ್ಯಂತ 12,500 ವಿದ್ಯಾರ್ಥಿಗಳ...

ದೇಶಾದ್ಯಂತ 12,500 ವಿದ್ಯಾರ್ಥಿಗಳ ಆತ್ಮಹತ್ಯೆ: ಎಚ್.ಡಿ.ಕುಮಾರಸ್ವಾಮಿ ಕಳವಳ

ವಾರ್ತಾಭಾರತಿವಾರ್ತಾಭಾರತಿ28 Dec 2021 7:20 PM IST
share
ದೇಶಾದ್ಯಂತ 12,500 ವಿದ್ಯಾರ್ಥಿಗಳ ಆತ್ಮಹತ್ಯೆ: ಎಚ್.ಡಿ.ಕುಮಾರಸ್ವಾಮಿ  ಕಳವಳ

ಬೆಂಗಳೂರು, ಡಿ.28: ದಿನಪತ್ರಿಕೆಯೊಂದರಲ್ಲಿ ಇಂದು ಪ್ರಕಟವಾಗಿರುವ ಈ ವರದಿ ಅತ್ಯಂತ ಕಳವಳಕಾರಿ. ಕರ್ನಾಟಕವೂ ಸೇರಿ ದೇಶಾದ್ಯಂತ 12,500 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ವರದಿ ಓದಿ ನನಗೆ ತೀವ್ರ ಆಘಾತ ಉಂಟಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್‍ಗಳನ್ನು ಮಾಡಿರುವ ಅವರು, ವೃತ್ತಿಪರ ಶಿಕ್ಷಣ ಪಡೆಯುತ್ತಿರುವ ಕೆಲ ಶಿಕ್ಷಣಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ದೇಶಕ್ಕೆ ಶೋಭೆ ತರುವ ವಿಚಾರವಲ್ಲ. ಕೋವಿಡ್ ಮತ್ತಿತರೆ ಸಮಸ್ಯೆಗಳಿಂದ ಕರ್ನಾಟಕ ಸೇರಿ 6 ರಾಜ್ಯಗಳಲ್ಲಿ ವಿದ್ಯಾರ್ಥಿಗಳು ಮೃತ್ಯುಪಾಶಕ್ಕೆ ತುತ್ತಾಗಿರುವುದು ನಮ್ಮ ಶಿಕ್ಷಣ ವ್ಯವಸ್ಥೆಗೆ ಹಿಡಿದ ಕನ್ನಡಿ ಎಂದು ಕಿಡಿಗಾರಿದ್ದಾರೆ.

ಸಾಮಾಜಿಕ, ಆರ್ಥಿಕ ಸಮಸ್ಯೆಗಳಿಂದ ಕಂಗೆಟ್ಟ ವಿದ್ಯಾರ್ಥಿಗಳು ಸಕಾಲಕ್ಕೆ ನೆರವು ಸಿಗದೇ ನೊಂದು-ಬೆಂದು ಜೀವವನ್ನು ಕೊನೆ ಮಾಡಿಕೊಳ್ಳುವ ಅಪಾಯಕಾರಿ ನಿರ್ಧಾರಕ್ಕೆ ಬರುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಇಂತಹ ವಿದ್ಯಾರ್ಥಿಗಳ ನೆರವಿಗೆ ತಕ್ಷಣ ಧಾವಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಒಂದೆಡೆ ಭಾರತವು ವಿಶ್ವಗುರುವಾಗಬೇಕು ಎನ್ನುವವರು, ಇನ್ನೊಂದೆಡೆ ಉನ್ನತ ಶಿಕ್ಷಣವನ್ನು ಉಳ್ಳವರ ಪಾಲು ಮಾಡುತ್ತಿದ್ದಾರೆ. ಇವತ್ತಿನ ವ್ಯವಸ್ಥೆ ಮತ್ತು ಸರಕಾರಗಳ ನೀತಿಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿವೆ ಎಂದು ಅವರು ಟೀಕಿಸಿದ್ದಾರೆ.

ಉನ್ನತ ಶಿಕ್ಷಣ ಹಣವಂತರ ಕಪಿಮುಷ್ಠಿಯಲ್ಲಿ ಸಿಲುಕಿದ್ದರೆ, ಪೋಷಕರು ಮತ್ತು ವಿದ್ಯಾರ್ಥಿಗಳು ಅಂತಹ ಶಿಕ್ಷಣಸಾಲದ ಸುಳಿಯಲ್ಲಿ ಸಿಲುಕಿ ನರಳುತ್ತಿದ್ದಾರೆ. ನನ್ನ ಕಳಕಳಿಯ ಮನವಿ ಇಷ್ಟೇ, ಸಮಸ್ಯೆಗಳಿವೆ ಎಂದು ಜೀವ ತೆಗೆದುಕೊಳ್ಳುವುದು ಬೇಡ. ಅಂತ ತಪ್ಪು ನಿರ್ಧಾರಕ್ಕೆ ಮುನ್ನ ನಿಮಗೆ ಜನ್ಮ ಕೊಟ್ಟವರನ್ನು ಮರೆಯಬಾರದು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಇಂಥ ದುಡುಕಿನ ನಿರ್ಧಾರಕ್ಕೆ ಬರಬಾರದು ಎಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

@Vijaykarnataka ಪತ್ರಿಕೆಯಲ್ಲಿ ಇಂದು ಪ್ರಕಟವಾಗಿರುವ ಈ ವರದಿ ಅತ್ಯಂತ ಕಳವಳಕಾರಿ. ಕರ್ನಾಟಕವೂ ಸೇರಿ ದೇಶಾದ್ಯಂತ 12,500 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ವರದಿ ಓದಿ ನನಗೆ ತೀವ್ರ ಆಘಾತ ಉಂಟಾಗಿದೆ. 1/6 pic.twitter.com/80wKB2kzvd

— H D Kumaraswamy (@hd_kumaraswamy) December 28, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X