Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೆನ್ಲಾಕ್ ಆಸ್ಪತ್ರೆಯಲ್ಲಿ ಡಯಾಲಿಸಿಸ್...

ವೆನ್ಲಾಕ್ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಯಂತ್ರದ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ28 Dec 2021 10:40 PM IST
share

ಮಂಗಳೂರು, ಡಿ. 28: ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಕೊಡುಗೆಯಾಗಿ ನೀಡಲಾದ 13 ಲಕ್ಷ ರೂ.ವೆಚ್ಚದ 2 ಡಯಾಲಿಸಿಸ್ ಯಂತ್ರಗಳನ್ನು ಸೋಮವಾರ ಉದ್ಘಾಟಿಸಲಾಯಿತು.

ಧರ್ಮಸ್ಥಳ ಕ್ಷೇತ್ರದ ಡಿ. ಹರ್ಷೇಂದ್ರ ಕುಮಾರ್ ವೆನ್ಲಾಕ್ ಆಸ್ಪತ್ರಗೆ ಡಯಾಲಿಸಿಸ್ ಯಂತ್ರಗಳನ್ನು ಕೊಡುಗೆಯಾಗಿ ನೀಡಿದ ಬಗ್ಗೆ ಒಡಂಬಡಿಕೆಯ ಪತ್ರವನ್ನು ವೆನ್ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸದಾಶಿವ ಶಾನುಬೋಗ್‌ ರಿಗೆ ಹಸ್ತಾಂತರಿಸಿದರು. ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು.

ಆಸ್ಪತ್ರೆಗಳಲ್ಲಿ ರೋಗಿಗಳ ಆರೈಕೆಗಾಗಿ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದ ಡಿ. ಹರ್ಷೇಂದ್ರ ಕುಮಾರ್, ಕ್ಷೇತ್ರದ ವತಿಯಿಂದ ನೀಡಲಾಗಿರುವ ಡಯಾಲಿಸಿಸ್ ಯಂತ್ರಗಳನ್ನು ಸುಸೂತ್ರವಾಗಿ ನಿರ್ವಹಣೆ ಮಾಡಿಕೊಂಡು ಬರುವ ಜವಾಬ್ದಾರಿಯನ್ನು ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ನಿರ್ವಹಿಸಬೇಕು ಎಂದರು.

ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡಿ ವೆನ್ಲಾಕ್ ಆಸ್ಪತ್ರೆಯಲ್ಲಿ 900 ಹಾಸಿಗೆಗಳಿದ್ದು, ಖಾಸಗಿ ಆಸ್ಪತ್ರೆಗೆ ಸಮಾನವಾದ ವೈದ್ಯಕೀಯ ಸೇವಾ ಸೌಲಭ್ಯಗಳು ಇಲ್ಲಿ ಲಭಿಸುತ್ತಿವೆ. ಕೊರೋನ ಸಾಂಕ್ರಾಮಿಕ ಬರುವ ಮೊದಲು ಇಲ್ಲಿ 12 ಐಸಿಯು ಘಟಕಗಳಿದ್ದರೆ ಈಗ 150 ಕ್ಕೂ ಮಿಕ್ಕಿ ಐಸಿಯು ಘಟಕಗಳಿವೆ. ಆಕ್ಸಿಜನ್ ಬೆಡ್‌ಗಳೂ ಇವೆ ಎಂದರು.

16 ಡಯಾಲಿಸಿಸ್ ಯಂತ್ರಗಳು

ವೆನ್ಲಾಕ್ ಆಸ್ಪತ್ರೆಯಲ್ಲಿ 2015ರಿಂದ ಡಯಾಲಿಸಿಸ್ ಘಟಕ ಕಾರ್ಯನಿರ್ವಹಿಸುತ್ತಿದೆ. 2017ರಿಂದ ಇದು ಕೊಲ್ಕತ್ತಾದ ಸಂಜೀವಿನಿ ಸಂಸ್ಥೆಯಿಂದ ನಿರ್ವಹಣೆಯಾಗುತ್ತಿದ್ದು, ಪ್ರಸ್ತುತ ಧರ್ಮಸ್ಥಳ ಕ್ಷೇತ್ರ ನೀಡಿದ 2 ಯಂತ್ರಗಳು ಸೇರಿದಂತೆ ಒಟ್ಟು 16 ಯಂತ್ರಗಳಿವೆ. ಇನ್ನೂ 2 ಯಂತ್ರಗಳನ್ನು ಅಳವಡಿಸಲು ಸ್ಥಳಾವಕಾಶವಿದೆ. ತಿಂಗಳಲ್ಲಿ 1800 ಡಯಾಲಿಸಿಸ್‌ಗಳು ನಡೆಯುತ್ತಿವೆ. ಬೇಡಿಕೆಯನ್ನು ಪೂರ್ತಿಯಾಗಿ ಈಡೇರಿಸಲು ಸಾಧ್ಯವಾಗದೆ ಸುಮಾರು 50 ರಷ್ಟು ಮಂದಿ ವೈಟಿಂಗ್ ಲಿಸ್ಟ್‌ನಲ್ಲಿ ಕಾಯುತ್ತಿರುತ್ತಾರೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸದಾಶಿವ ಶಾನುಬೋಗ್ ಹೇಳಿದರು.

ಆಸ್ಪತ್ರೆಯ ಆರ್‌ಎಂಒ ಡಾ. ಸುಧಾಕರ್, ಉಜಿರೆ ಎಸ್‌ಡಿಎಂ ಆಸ್ಪತ್ರೆಯ ನಿರ್ದೇಶಕ ಜನಾರ್ದನ, ವೈದ್ಯಕೀಯ ಅಧೀಕ್ಷಕ ಡಾ. ರಂಜನ್, ಕಾರ್ಪೊರೇಟರ್ ಮನೋಹರ್ ಶೆಟ್ಟಿ ಉಪಸ್ಥಿತರಿದ್ದರು.

ವೆನ್ಲಾಕ್ ಆಸ್ಪತ್ರೆಯ ಮೂತ್ರ ರೋಗ ತಜ್ಞ ಡಾ. ಸದಾನಂದ ಪೂಜಾರಿ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X