Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರ್ಣಾಟಕ ಬ್ಯಾಂಕ್ ಭಟ್ಕಳ ಶಾಖೆಯ 46ನೇ...

ಕರ್ಣಾಟಕ ಬ್ಯಾಂಕ್ ಭಟ್ಕಳ ಶಾಖೆಯ 46ನೇ ವಾರ್ಷಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ28 Dec 2021 11:13 PM IST
share
ಕರ್ಣಾಟಕ ಬ್ಯಾಂಕ್ ಭಟ್ಕಳ ಶಾಖೆಯ 46ನೇ ವಾರ್ಷಿಕೋತ್ಸವ

ಭಟ್ಕಳ : ಕರ್ಣಾಟಕ ಬ್ಯಾಂಕ್ ತಂತ್ರಜ್ಞಾನದಲ್ಲಿ ಮುಂದೆ ಇದ್ದು ಈಗಾಗಲೇ ನಾವು 2020-24ಕ್ಕೆ ಅಗತ್ಯವಾದ ತಂತ್ರಜ್ಞಾನದ ಅವಿಷ್ಕಾರದಲ್ಲಿದ್ದೇವೆ ಎಂದು ಕರ್ಣಾಟಕ ಬ್ಯಾಂಕ್ ಸಹಾಯಕ ಪ್ರಧಾನ ವ್ಯವಸ್ಥಾಪಕ ರಾಜಗೋಪಾಲ ಅವರು ಹೇಳಿದರು. 

ಅವರು ಕರ್ಣಾಟಕ ಬ್ಯಾಂಕ್ ಭಟ್ಕಳ ಶಾಖೆಯ 46ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. 

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಇಂದು ಹೊಸ ಹೊಸ ತಂತ್ರಜ್ಞಾನಗಳ ಅಳವಡಿಕೆಯು ಅನಿವಾರ್ಯವಾಗಿದೆ. ನಮ್ಮ ಬ್ಯಾಂಕು ಬಹಳ ಹಿಂದೆಯೇ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದೆ ಎಂದ ಅವರು ಭಟ್ಕಳ ಶಾಖೆಯು ನಡೆದು ಬಂದ ಕುರಿತು ವಿವರಿಸುತ್ತಾ ಗ್ರಾಹಕರ ಸಹಕಾರದಿಂದ ಬ್ಯಾಂಕು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. 

ಗ್ರಾಹಕರ ಅನೇಕ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಬ್ಯಾಂಕು ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಕೆಲವೊಂದು ಸಾಲದ ಬಡ್ಡಿದರವನ್ನು ಕಡಿಮೆ ಇಟ್ಟಿದೆ. ಗ್ರಾಹಕರ ವ್ಯವಹಾರವನ್ನು ನೋಡಿಕೊಂಡು ಬಡ್ಡಿದರಲ್ಲಿ ಸ್ವಲ್ಪ ವ್ಯತ್ಯಾಸವನ್ನು ಕೂಡಾ ಮಾಡಿಕೊಡಲು ಬ್ಯಾಂಕು ತಯಾರಿದೆ ಎಂದೂ ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು ಮಾತನಾಡಿದ ಶ್ರೀ ಕುಟುಮೇಶ್ವರ ಸೌಹಾರ್ಧ ಸಹಕಾರಿಯ ಅಧ್ಯಕ್ಷ ರಾಮಾ ಖಾರ್ವಿ ಬ್ಯಾಂಕ್ ಬೆಳವಣಿಗೆಗೆ ಗ್ರಾಹಕರು ನೀಡುವ ಸಹಕಾರ ಕಾರಣ. ಇಲ್ಲಿನ ಶಾಖೆಯು ಅತ್ಯಂತ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದು ಸಿಬ್ಬಂದಿಗಳ ಉತ್ತಮ ಸೇವೆಯಿಂದ ತಾಲೂಕಿನಲ್ಲಿ ಗ್ರಾಹಕರನ್ನು ಸೆಳೆದುಕೊಳ್ಳುವತ್ತ ಯಶಸ್ವಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಬ್ಯಾಂಕಿನ ನಿವೃತ್ತ ಶಾಖಾಧಿಕಾರಿ ತಿಮ್ಮಪ್ಪಯ್ಯ ಶಿರೂರು ಅವರು ಮಾತನಾಡಿ ಕರ್ಣಾಟಕ ಬ್ಯಾಂಕ್ ನಡೆದು ಬಂದ ದಾರಿಯನ್ನು ವಿವರಿಸುತ್ತಾ, ಭಟ್ಕಳ ಶಾಖೆಯ ಆರಂಭದಿಂದ ಇಲ್ಲಿಯ ತನಕದ ಬೆಳವಣಿಗೆಯನ್ನು ವಿವರಿಸಿದರು. ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಬ್ಯಾಂಕಿನ ಶಾಖೆಯನ್ನು ಗಣಕೀಕೃತಗೊಳಿಸಿದ್ದನ್ನು ಸ್ಮರಿಸಿದ ಅವರು ಗ್ರಾಹಕರ ಸಹಕಾರದಿಂದ ಶಾಖೆ 46 ವರ್ಷಗಳ ಕಾಲ ಬೆಳೆದು ಬಂದಿದ್ದು ಪ್ರೌಢಾವಸ್ಥೆಯಲ್ಲಿದೆ ಎಂದರು.

ಗ್ರಾಹಕರುಗಳಾದ ಗುತ್ತಿಗೆದಾರ ಟಿ.ಡಿ. ನಾಯ್ಕ, ಎಂ.ಜಿ. ಎಂಟರ್‍ಪ್ರೈಸಸ್ ಮಾಲಕ ಪರಮೇಶ್ವರ ಭಟ್ಟ, ನ್ಯಾಯವಾದಿ ಜೆ.ಡಿ. ಭಟ್ಟ, ಹೋಟೆಲ್ 4ಸೀಸನ್ ಪಾಲುದಾರ  ನರೇಶ ಶೆಟ್ಟಿ, ಹಿರಿಯ ಗ್ರಾಹಕ ಹಾಗೂ ಕಟ್ಟಡದ ಮಾಲಿಕ ರಾಧಾಕೃಷ್ಣ ಭಟ್ಟ, ಕಡವಿನಕಟ್ಟೆ ಶ್ರೀ ದುರ್ಗಾಪರಮೇಶ್ವರಿ ದೇವಾಯಲದ ಕಾರ್ಯದರ್ಶಿ ಪ್ರಕಾಶ ಎನ್. ಭಟ್ಟ ಸಾಲೆಮನೆ ಮುಂತಾದವರು ಮಾತನಾಡಿದರು.

ಶಾಖೆಯ ಪ್ರಬಂಧಕ ಸುನಿಲ್ ಪೈ, ಹಿಂದಿನ ಶಾಖಾಧಿಕಾರಿ ವಿನಾಯಕ ಮೊಗೇರ, ಸಿಬ್ಬಂದಿಗಳು, ಬ್ಯಾಂಕಿನ ಚಾನಲ್ ಪಾರ್ಟನರ್ ಎಲ್.ಐ.ಸಿ. ಶಾಖಾಧಿಕಾರಿ ಗುರುದತ್ತ ನಾಯಕ, ಭಾರತಿ ಎಕ್ಸಾದ ರಘುನಂದನ್ ಮುಂತಾದವರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X