Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮಾ ಪಾಲಿಸಿ ಪಡೆಯುವ ಮುಂಚೆ ಆರೋಗ್ಯ...

ವಿಮಾ ಪಾಲಿಸಿ ಪಡೆಯುವ ಮುಂಚೆ ಆರೋಗ್ಯ ಸಮಸ್ಯೆ ಬಹಿರಂಗಪಡಿಸಿದ್ದಲ್ಲಿ ಕಂಪೆನಿ ಕ್ಲೇಮ್ ನಿರಾಕರಿಸುವಂತಿಲ್ಲ: ಸುಪ್ರೀಂ

ವಾರ್ತಾಭಾರತಿವಾರ್ತಾಭಾರತಿ29 Dec 2021 11:59 AM IST
share
ವಿಮಾ ಪಾಲಿಸಿ ಪಡೆಯುವ ಮುಂಚೆ ಆರೋಗ್ಯ ಸಮಸ್ಯೆ ಬಹಿರಂಗಪಡಿಸಿದ್ದಲ್ಲಿ ಕಂಪೆನಿ ಕ್ಲೇಮ್ ನಿರಾಕರಿಸುವಂತಿಲ್ಲ: ಸುಪ್ರೀಂ

ಹೊಸದಿಲ್ಲಿ,ಡಿ.29: ಸರ್ವೋಚ್ಚ ನ್ಯಾಯಾಲಯವು ಮಹತ್ವದ ತೀರ್ಪೊಂದರಲ್ಲಿ ಪಾಲಿಸಿದಾರರು ಪಾಲಿಸಿ ಅರ್ಜಿಗೆ ಸಹಿ ಮಾಡುವಾಗ ಘೋಷಿಸಿರುವ ಅನಾರೋಗ್ಯವನ್ನು ಉಲ್ಲೇಖಿಸಿ ವಿಮಾ ಕಂಪನಿಗಳು ವಿಮೆ ಹಣದ ಹಕ್ಕು ಕೋರಿಕೆಯನ್ನು ನಿರಾಕರಿಸುವಂತಿಲ್ಲ ಎಂದು ಹೇಳಿದೆ.

ಪಾಲಿಸಿದಾರರು ತನಗೆ ಗೊತ್ತಿರುವ ಎಲ್ಲ ವಾಸ್ತವಿಕ ಸಂಗತಿಗಳನ್ನು ವಿಮಾ ಕಂಪನಿಗಳಿಗೆ ಬಹಿರಂಗಗೊಳಿಸುವುದು ಅಗತ್ಯವಾಗಿದೆ ಎಂದೂ ಹೇಳಿರುವ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ ಮತ್ತು ಬಿ.ವಿ.ನಾಗರತ್ನಾ ಅವರ ಪೀಠವು, ಪಾಲಿಸಿ ಖರೀದಿದಾರರು ವಿಮೆಗೆ ಸಂಬಂಧಿಸಿದ ಎಲ್ಲ ವಿಷಯಗಳು ಮತ್ತು ಸಂದರ್ಭಗಳನ್ನು ತಿಳಿದಿರುತ್ತಾರೆ ಎಂದು ಭಾವಿಸಲಾಗುತ್ತದೆ ಎಂದು ತಿಳಿಸಿದೆ. ಪಾಲಿಸಿದಾರರು ತಮಗೆ ಗೊತ್ತಿರುವುದನ್ನು ಮಾತ್ರ ಘೋಷಿಸಬಹುದು,ಆದರೆ ಅವರ ಕರ್ತವ್ಯವು ಅವರ ವಾಸ್ತವಿಕ ಜ್ಞಾನಕ್ಕೆ ಸೀಮಿತವಾಗಿರುವುದಿಲ್ಲ,ಸಾಮಾನ್ಯ ವ್ಯವಹಾರದಲ್ಲಿ ಅವರು ತಿಳಿದುಕೊಳ್ಳಬೇಕಾದ ವಾಸ್ತವಿಕ ಸಂಗತಿಗಳಿಗೂ ವಿಸ್ತರಿಸುತ್ತದೆ ಎಂದು ಸರ್ವೋಚ್ಚ ನ್ಯಾಯಾಲಯವು ಹೇಳಿದೆ.

ವಿಮಾದಾರನ ಆರೋಗ್ಯ ಸ್ಥಿತಿಯನ್ನು ದೃಢಪಡಿಸಿಕೊಂಡು ಪಾಲಿಸಿಯನ್ನು ವಿತರಿಸಿದ ಬಳಿಕ ವಿಮಾದಾರನು ಅರ್ಜಿಯಲ್ಲಿ ಘೋಷಿಸಿರುವ ಮತ್ತು ವಿಮೆ ಹಣವನ್ನು ಕೋರಿರುವ ನಿರ್ದಿಷ್ಟ ಅಪಾಯಕ್ಕೆ ಕಾರಣವಾಗಿರುವ ಅನಾರೋಗ್ಯವನ್ನು ಉಲ್ಲೇಖಿಸಿ ವಿಮಾ ಕಂಪನಿಗಳು ಹಕ್ಕು ಕೋರಿಕೆಯನ್ನು ನಿರಾಕರಿಸುವಂತಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ಸ್ಪಷ್ಟಪಡಿಸಿದೆ.

ತಾನು ಅಮೆರಿಕದಲ್ಲಿದ್ದಾಗ ಮಾಡಿದ್ದ ವೈದ್ಯಕೀಯ ವೆಚ್ಚಗಳ ಪಾವತಿಯನ್ನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದ ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ (ಎನ್‌ಸಿಡಿಆರ್‌ಸಿ)ದ ಆದೇಶವನ್ನು ಪ್ರಶ್ನಿಸಿ ಮನಮೋಹನ ನಂದಾ ಎನ್ನುವವರು ಸಲ್ಲಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಈ ತೀರ್ಪು ಹೊರಬಿದ್ದಿದೆ.

ಅಮೆರಿಕಕ್ಕೆ ಪ್ರಯಾಣಿಸಲು ಉದ್ದೇಶಿಸಿದ್ದ ನಂದಾ ಯುನೈಟೆಡ್ ಇಂಡಿಯಾ ಇನ್ಶೂರನ್ಸ್ ಕಂಪನಿಯಿಂದ ಸಾಗರೋತ್ತರ ಮೆಡಿಕ್ಲೇಮ್ ವ್ಯವಹಾರ ಮತ್ತು ರಜಾ ಪಾಲಿಸಿಯನ್ನು ಖರೀದಿಸಿದ್ದರು.

ಸ್ಯಾನ್‌ಫ್ರಾನ್ಸಿಸ್ಕೋ ವಿಮಾನ ನಿಲ್ದಾಣವನ್ನು ತಲುಪಿದಾಗ ಹೃದಯಾಘಾತಕ್ಕೆ ಗುರಿಯಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಆ್ಯಂಜಿಯೊಪ್ಲಾಸ್ಟಿ ನಡೆಸಿದ್ದ ವೈದ್ಯರು ಹೃದಯ ನಾಳಗಳಲ್ಲಿಯ ತಡೆಗಳನ್ನು ನಿವಾರಿಸಲು ಮೂರು ಸ್ಟೆಂಟ್‌ಗಳನ್ನು ಅಳವಡಿಸಿದ್ದರು.

ತಾನು ಅಧಿಕ ಕೊಲೆಸ್ಟ್ರಾಲ್ ಮತ್ತು ಮಧುಮೇಹದ ಇತಿಹಾಸವನ್ನು ಹೊಂದಿದ್ದೇನೆ ಮತ್ತು ವಿಮೆ ಪಾಲಿಸಿಯನ್ನು ಖರೀದಿಸುವಾಗ ಇದನ್ನು ಘೋಷಿಸಿರಲಿಲ್ಲ ಎಂಬ ಕಾರಣವನ್ನು ನೀಡಿ ತನಗೆ ಚಿಕಿತ್ಸಾ ವೆಚ್ಚಗಳನ್ನು ಮರುಪಾವತಿಸಲು ಕಂಪನಿಯು ನಿರಾಕರಿಸಿದೆ ಎಂದು ನಂದಾ ಅರ್ಜಿಯಲ್ಲಿ ತಿಳಿಸಿದ್ದರು.

ದೂರುದಾರರು ಸ್ಟಾಟಿನ್ ಔಷಧಿಯನ್ನು ಸೇವಿಸುತ್ತಿದ್ದರು ಮತ್ತು ಮೆಡಿಕ್ಲೇಮ್ ಪಾಲಿಸಿಯನ್ನು ಖರೀದಿಸುವಾಗ ಇದನ್ನು ಬಹಿರಂಗಗೊಳಿಸಿರಲಿಲ್ಲ,ತನ್ನ ಆರೋಗ್ಯ ಸ್ಥಿತಿಯನ್ನು ಸಂಪೂರ್ಣವಾಗಿ ಬಹಿರಂಗ ಪಡಿಸಬೇಕಾದ ತನ್ನ ಕರ್ತವ್ಯದಲ್ಲಿ ಅವರು ವಿಫಲರಾಗಿದ್ದಾರೆ ಎಂದು ಎನ್ಸಿಡಿಆರ್ಸಿ ತನ್ನ ಆದೇಶದಲ್ಲಿ ಹೇಳಿತ್ತು.

ಆದಾಗ್ಯೂ,ಯುನೈಟೆಡ್ ಇಂಡಿಯಾ ಇನ್ಶೂರನ್ಸ್ ಕಂಪನಿಯ ನಿರಾಕರಣೆಯು ಕಾನೂನಿಗೆ ಅನುಗುಣವಾಗಿಲ್ಲ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯವು, ನಿರೀಕ್ಷಿಸಿರದ ಮತ್ತು ಸನ್ನಿಹಿತವಾಗಿರದ ಹಾಗೂ ಸಾಗರೋತ್ತರದಲ್ಲಿ ಸಂಭವಿಸಬಹುದಾದ ದಿಢೀರ್ ಅನಾರೋಗ್ಯ ಅಥವಾ ಅಸ್ವಸ್ಥತೆಗೆ ಸಂಬಂಧಿಸಿದಂತೆ ನಷ್ಟ ಪರಿಹಾರವನ್ನು ಪಡೆಯುವುದು ಮೆಡಿಕ್ಲೇಮ್ ಪಾಲಿಸಿಯ ಖರೀದಿಯ ಉದ್ದೇಶವಾಗಿದೆ ಎಂದು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X