Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುವೆಂಪು ಅವರ ಪಂಚಮಂತ್ರ ಸಾರ್ವಕಾಲಿಕ...

ಕುವೆಂಪು ಅವರ ಪಂಚಮಂತ್ರ ಸಾರ್ವಕಾಲಿಕ ಚಿಂತನೆ: ಪ್ರೊ.ಬಿ.ಪಿ. ವೀರಭದ್ರಪ್ಪ

ಕುವೆಂಪು ವಿವಿಯಲ್ಲಿ ಕುವೆಂಪು ಜನ್ಮದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ29 Dec 2021 4:08 PM IST
share
ಕುವೆಂಪು ಅವರ ಪಂಚಮಂತ್ರ ಸಾರ್ವಕಾಲಿಕ ಚಿಂತನೆ: ಪ್ರೊ.ಬಿ.ಪಿ. ವೀರಭದ್ರಪ್ಪ

ಶಂಕರಘಟ್ಟ,ಡಿ. 29: ರಾಷ್ಟ್ರಕವಿ ಕುವೆಂಪು ಅವರು ಪ್ರತಿಪಾದಿಸಿದ ಪಂಚಶೀಲ ತತ್ವ ವೈಯಕ್ತಿಕ ಮತ್ತು ಸಾಮುದಾಯಿಕ ಹಂತದಲ್ಲಿ ಸರ್ವರ ಏಳ್ಗೆಯನ್ನು ಬಯಸುವ ಶ್ರೇಷ್ಠ ಚಿಂತನೆಯಾಗಿದೆ ಎಂದು ಕುವೆಂಪು ವಿವಿ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ಕುವೆಂಪು ವಿಶ್ವವಿದ್ಯಾಲಯದಲ್ಲಿ ಬುಧವಾರ ಆಯೋಜಿಸಲಾಗಿದ್ದ ಕುವೆಂಪು ಅವರ 117ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮನುಜಮತವೇ ಮುಖ್ಯ ಎಂಬ ಆದರ್ಶ ಕ್ಷೀಣಿಸಿ ಇಂದು ಜಾತಿ, ಧರ್ಮಗಳ ಸಂಕುಚಿತತೆ ಹೆಚ್ಚಿದೆ. ಮನುಷ್ಯ ಊರು, ರಾಜ್ಯ, ದೇಶಗಳಿಗೆ ಅಂಟಿಕೊಂಡು ವಿಶ್ವಪಥವನ್ನು ಮರೆತಿದ್ದಾನೆ ಎಂದು  ವಿಷಾದಿಸಿದರು.

ಕುಲಸಚಿವೆ ಜಿ. ಅನುರಾಧ ಅವರು ಮಾತನಾಡಿ, ಕುವೆಂಪು ಅವರು ಸರ್ವ ಜನಾಂಗಗಳ ಭೌತಿಕ ಆಧ್ಯಾತ್ಮಿಕ, ಕೌಟುಂಬಿಕ ಹೀಗೆ ಸರ್ವಸ್ತರದ ಅಭಿವೃದ್ಧಿಯನ್ನು ಬಯಸಿದವರು. ಈ ದಿಶೆಯಲ್ಲಿ ತಾವು ನಡೆಯುತ್ತಿರುವ ಹಾದಿಯೆಡೆಗೆ ವಿಮರ್ಶಾತ್ಮಕ ದೃಷ್ಟಿಕೋನವನ್ನು ರೂಢಿಸಿಕೊಂಡು ಸಮನ್ವಯತೆಯ ಸೂತ್ರವನ್ನು ಜಗತ್ತಿಗೆ ನೀಡಿದವರು ಎಂದರು.

ಹಣಕಾಸು ಅಧಿಕಾರಿ ಎಸ್. ರಾಮಕೃಷ್ಣ, ಕಾರ್ಯನಿರ್ವಾಹಕ ಎಂಜಿನಿಯರ್ ರಘುಶಂಕರ್, ಡಾ. ಪಾಲಾಕ್ಷನಾಯಕ್, ಡಾ. ಶ್ರೀಶೈಲ, ಡಾ. ಎಂ. ಆರ್. ಸತ್ಯಪ್ರಕಾಶ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X