ಮಂಗಳೂರು: ನ್ಯಾಯಾಧೀಶರ ವಸತಿ ಗೃಹಗಳ ನಿರ್ಮಾಣಕ್ಕೆ ಶಿಲಾನ್ಯಾಸ

ಮಂಗಳೂರು, ಡಿ.29: ನಗರದ ಹ್ಯಾಟ್ ಹಿಲ್ ಬಳಿ ನ್ಯಾಯಾಧೀಶರ ವಸತಿಗೃಹಗಳ ನಿರ್ಮಾಣಕ್ಕೆ (ಬ್ಲಾಕ್-ಬಿ) ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಬುಧವಾರ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭ ರಾಜ್ಯ ಹೈಕೋರ್ಟ್‌ನ ನ್ಯಾಯಾಧೀಶ ಹಾಗೂ ದ.ಕ. ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಕೆ. ಸೋಮಶೇಖರ್, ಹೈಕೋರ್ಟ್‌ನ ನ್ಯಾಯಮೂರ್ತಿ ಮುೂಹಮ್ಮದ್ ನವಾಜ್, ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಶಿವಶಂಕರೇ ಗೌಡ, ದ.ಕ. ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಮುರಳೀಧರ್ ಪೈ. ಬಿ. ಮತ್ತಿತರರು ಉಪಸ್ಥಿತರಿದ್ದರು.
Next Story





