ಡಿ.30: ಮೂಡುಬಿದಿರೆಯಲ್ಲಿ ಕಾನೂನು ಸೇವಾ ಶಿಬಿರ
ಮಂಗಳೂರು, ಡಿ.29: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ದ.ಕ. ಜಿಲ್ಲಾಡಳಿತ, ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಮೂಡುಬಿದ್ರಿಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಭವನದಲ್ಲಿ ಡಿ.30ರ ಪೂ.11ಕ್ಕೆ ಕಾನೂನು ಸೇವಾ ಶಿಬಿರದ ಉದ್ಘಾಟನೆ ನಡೆಯಲಿದೆ.
ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಶಿಬಿರ ಉದ್ಘಾಟಿಸುವರು. ಅತಿಥಿಗಳಾಗಿ ಹೈಕೋರ್ಟ್‌ನ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ನ್ಯಾ.ಬಿ. ವೀರಪ್ಪಭಾಗವಹಿಸುವರು.
ರಾಜ್ಯ ಹೈಕೋರ್ಟ್‌ನ ನ್ಯಾಯಮೂರ್ತಿ ಹಾಗೂ ದ.ಕ. ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ನ್ಯಾ. ಕೆ. ಸೋಮಶೇಖರ್ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮುರಳೀಧರ ಪೈ.ಬಿ., ಹೈಕೋರ್ಟ್ ರಿಜಿಸ್ಟ್ರಾರ್ ಟಿ.ಜಿ. ಶಿವಶಂಕರೇಗೌಡ, ಜಿಲ್ಲಾಧಿಕಾರಿಡಾ. ರಾಜೇಂದ್ರ ಕೆ.ವಿ., ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್. ಶಶಿಧರ ಶೆಟ್ಟಿ, ಮೂಡುಬಿದಿರೆ ವಕೀಲರ ಸಂಘದ ಅಧ್ಯಕ್ಷ ಎಂ.ಸುಬ್ರಹ್ಮಣ್ಯ ತಂತ್ರಿ, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷಡಾ.ಎಂ.ಮೋಹನ್ ಆಳ್ವಾ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.







