ಕುಂದಾಪುರ: ಯುವತಿಗೆ ಚೂರಿಯಿಂದ ಇರಿದು ಆತ್ಮಹತ್ಯೆ ಮಾಡಿಕೊಂಡ ಯುವಕ

ಕುಂದಾಪುರ, ಡಿ.29: ಶಿರಿಯಾರ ರಾಮಮಂದಿರದ ಬಳಿ ಯುವಕನೊಬ್ಬ ಯುವತಿಗೆ ಚೂರಿಯಿಂದ ಇರಿದು ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ವೇಳೆ ನಡೆದಿದೆ.
ರಿಕ್ಷಾ ಚಾಲಕ ರಾಘವೇಂದ್ರ ಕುಲಾಲ್ (35) ಎಂಬಾತ ಯುವತಿಗೆ ಚೂರಿಯಿಂದ ಇರಿದು ಬಳಿಕ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಇಂದು ಸಂಜೆ ಶಿರಿಯಾರ ರಾಮಂದಿರ ಬಳಿ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಬಳಿಕ ಹಾರ್ಯಾಡಿ ಬಳಿ ತಾನೂ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
Next Story





