Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುವೆಂಪುರ ವಿಶ್ವಮಾನವ ಸಂದೇಶ ನಿತ್ಯಸತ್ಯ:...

ಕುವೆಂಪುರ ವಿಶ್ವಮಾನವ ಸಂದೇಶ ನಿತ್ಯಸತ್ಯ: ಉಡುಪಿ ಡಿಸಿ ಕೂರ್ಮಾರಾವ್

ವಾರ್ತಾಭಾರತಿವಾರ್ತಾಭಾರತಿ29 Dec 2021 10:08 PM IST
share
ಕುವೆಂಪುರ ವಿಶ್ವಮಾನವ ಸಂದೇಶ ನಿತ್ಯಸತ್ಯ: ಉಡುಪಿ ಡಿಸಿ ಕೂರ್ಮಾರಾವ್

ಉಡುಪಿ, ಡಿ.29: ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ಸಂದೇಶ ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿದ್ದು, ನಿತ್ಯಸತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಅಭಿಪ್ರಾಯಪಟ್ಟಿದ್ದಾರೆ.

ಬುಧವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ಹಾಲ್‌ನಲ್ಲಿ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ, ರಾಷ್ಟ್ರಕವಿ ಕುವೆಂಪುರ ಜನ್ಮದಿನದ ಅಂಗವಾಗಿ ನಡೆದ ವಿಶ್ವ ಮಾನವ ದಿನಾಚರಣೆ ಕಾರ್ಯ ಕ್ರಮದಲ್ಲಿ ಕುವೆಂಪು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಪ್ರತಿಯೊಂದು ಮಗುವು ಹುಟ್ಟುತ್ತಲೇ ವಿಶ್ವ ಮಾನವನಾಗಿರುತ್ತದೆ.ಮುಂದೆ ಬೆಳೆಯುತ್ತಾ ಹೋದಂತೆ ಜಾತಿ, ಅಂತಸ್ತು ಮುಂತಾದ ಭೇಧ-ಭಾವಗಳ ಮೂಲಕ ಅವನನ್ನು ನಾವು ಅಲ್ಪಮಾನವನನ್ನಾಗಿ ಮಾಡುತ್ತೇವೆ. ಅದರೆ ಅವನನ್ನು ವಿಶ್ವ ಮಾನವನನ್ನಾಗಿಯೇ ಇರಲು ಬಿಡಬೇಕು ಎಂಬುದು ಕುವೆಂಪು ಅವರ ವಿಶ್ವ ಮಾನವ ಸಂದೇಶ. ಯಾವುದೇ ಭೇಧ-ಭಾವ ತೋರದೇ ಪ್ರತಿಯೊಬ್ಬರಿಗೂ ಶಿಕ್ಷಣವನ್ನು ನೀಡುವ ಮೂಲಕ ವಿದ್ಯೆಯಿಂದ ಅಲ್ಪ ಮಾನವ ನನ್ನು ವಿಶ್ವ ಮಾನವರನ್ನಾಗಿ ಮಾಡಲು ಸಾಧ್ಯವಿದ್ದು, ಎಲ್ಲಾ ಶಾಲಾ- ಕಾಲೇಜುಗಳಲ್ಲಿ ಪ್ರತಿ ನಿತ್ಯ ಕುವೆಂಪು ಅವರ ಸಂದೇಶಗಳು ಎಲ್ಲಾ ವಿದ್ಯಾರ್ಥಿ ಗಳಿಗೂ ತಲುಪಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಕೋವಿಡ್-19ರ ಈ ಅವಧಿಯಲ್ಲಿ ಕುವೆಂಪು ಅವರ ವಿಶ್ವ ಮಾನವ ಸಂದೇಶ ಅತ್ಯಂತ ಪ್ರಸ್ತುತವಾಗಿದ್ದು, ವಿಶ್ವದ ಯಾವುದೋ ಮೂಲೆಯಲ್ಲಿ ಕೋವಿಡ್-19 ಉಲ್ಬಣಗೊಂಡಿದೆ ಎಂದು ನಾವು ಇಲ್ಲಿ ಕೋವಿಡ್ ನಿಯಮಗಳ ಪಾಲನೆ ಮಾಡದೇ ಇರಬಾರದು. ಪ್ರತಿಯೊಬ್ಬರೂ ಕೋವಿಡ್ ಸಮುಚಿತ ವರ್ತನೆಯನ್ನು ಪಾಲಿಸುವ ಮೂಲಕ ಇಡೀ ವಿಶ್ವದಿಂದ ಕೋವಿಡ್-19 ನಿರ್ಮೂಲನೆ ಗೊಳಿಸಲು ಹೋರಾಡಿದಲ್ಲಿ ಜಯ ಸಾಧ್ಯವಾಗಲಿದೆ. ಕುವೆಂಪು ಅವರ ಜೀವನ ಮತ್ತು ಸಂದೇಶ ಎಲ್ಲರಿಗೂ ಸದಾ ದಾರಿ ದೀಪವಾಗಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಕುವೆಂಪು ಕುರಿತು ವಿಶೇಷ ಉಪನ್ಯಾಸ ನೀಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಕುವೆಂಪು ಅವರು 20ನೇ ಶತಮಾನದ ದೈತ್ಯ ಪ್ರತಿಭೆ. ಅವರ ವಿಶ್ವ ಮಾನವ ಪ್ರಜ್ಞೆ ಎಲ್ಲೆಡೆ ಮೂಡಬೇಕು. ಜಿಲ್ಲಾ ಕ.ಸಾ.ಪ ವತಿಯಿಂದ ಕುವೆಂಪು ಕುರಿತು ಕಿರು ಪುಸ್ತಕ ಗಳನ್ನು ಮುದ್ರಿಸಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ವಿತರಿಸುವ ಯೋಜನೆ ಇದೆ ಎಂದರು.

ಜಿಲ್ಲೆಯಲ್ಲಿ ಹೆಸರಿಡದ ಅನೇಕ ರಸ್ತೆಗಳಿದ್ದು, ಅವುಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಮತ್ತು ಪ್ರಸಿದ್ಧ ಕವಿಗಳ ಹೆಸರುಗಳನ್ನು ಇಡಬೇಕು. ಪ್ರತೀ ಮನೆಯಲ್ಲೂ ಮಕ್ಕಳಲ್ಲಿ ಕನ್ನಡ ಪ್ರೇಮ ಬೆಳೆಸಬೇಕು. ಕುವೆಂಪು ಶತಮಾನೋತ್ಸವ ಶಾಲೆಗಳಲ್ಲಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಬೇಕು. ಕುವೆಂಪು ಅವರ ದಿನಚರಿ ನೆನಪಿನ ದೋಣಿಯಲ್ಲಿ ಕೃತಿಯನ್ನು ಪ್ರತಿಯೊಬ್ಬರೂ ಓದುವುದರ ಮೂಲಕ ಅವರ ಜೀವನವ್ನು ಅರಿಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕಲಾವತಿ ದಯಾನಂದ್ ಅವರಿಂದ ಕುವೆಂಪು ಅವರ ಗೀತ ಗಾಯನ ಕಾರ್ಯಕ್ರಮ ನಡೆಯಿತು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X