Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಬಗ್ಗೆ...

ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಬಗ್ಗೆ ಅರಿವು ಮೂಡಿಸಿ: ಉಡುಪಿ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ29 Dec 2021 10:14 PM IST
share
ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಬಗ್ಗೆ ಅರಿವು ಮೂಡಿಸಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಡಿ.29: ಮಾನ್ಯುಯಲ್ ಸ್ಕ್ಯಾವೆಂಜರ್ ಪದ್ಧತಿಯು ಅತ್ಯಂತ ಹೇಯ ಪದ್ಧತಿಯಾಗಿದ್ದು, ಈ ಬಗ್ಗೆ ಜಿಲ್ಲೆಯ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾಲೋನಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆ ನೀಡಿದ್ದಾರೆ.

ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ಹಾಲ್‌ನಲ್ಲಿ ನಡೆದ ಮಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮದ ಜಿಲ್ಲಾ ಮಟ್ಟದ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

 ಜಿಲ್ಲೆಯ ಪರಿಶಿಷ್ಠ ಜಾತಿ ಮತ್ತು ಪಂಗಡದ ಕಾಲೋನಿಗಳ ಜನರನ್ನು ಮಾನ್ಯುಯಲ್ ಸ್ಕ್ಯಾವೆಂಜರ್ ಕೆಲಸಕ್ಕೆ ಬಳಸಿಕೊಳ್ಳುವ ಸಂಭವವಿದ್ದು, ಈ ಕಾರ್ಯವನ್ನು ಮಾಡದ ಬಗ್ಗೆ ಅಲ್ಲಿನ ಸಾರ್ವಜನಿಕರಿಗೆ ಬೀದಿ ನಾಟಕ ಸೇರಿದಂತೆ ವಿವಿಧ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸಿರುವ ಸಮುದಾಯ ಭವನಗಳು ಮತ್ತು ಕಟ್ಟಡಗಳ ಬಳಿ ಜಾಗೃತಿ ಮೂಡಿಸುವ ಜಾಹಿರಾತು ಫಲಕಗಳನ್ನು ಅಳವಡಿ ಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಶೌಚಾಲಯಗಳ ನಿರ್ವಹಣೆಗೆ ಸಕ್ಕಿಂಗ್ ಯಂತ್ರಗಳನ್ನು ಬಳಸುವಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಮಾನ್ಯುಯಲ್ ಸ್ಕ್ಯಾವೆಂಜರ್‌ಗಳ ಸಮೀಕ್ಷೆಯನ್ನು ನಡೆಸಲಾಗಿದ್ದು, ಯಾರೂ ಪತ್ತೆಯಾಗಿರುವುದಿಲ್ಲ. ಈಗಾಗಲೇ ಯಾರಾದರೂ ಮಾನ್ಯುಯಲ್ ಸ್ಕ್ಯಾವೆಂಜರ್ ಕಾರ್ಯವನ್ನು ನಿರ್ವಹಿಸಿದ್ದಲ್ಲಿ ಅವರ ವಿವರಗಳನ್ನು ಸಂಗ್ರಹಿಸಿ, ಅವರಿಗೆ ಸೂಕ್ತ ಪುನರ್ವಸತಿ ಸೌಲಭ್ಯಗಳನ್ನು ಒದಗಿಸುವಂತೆ ಹಾಗೂ ಅಂತಹ ವ್ಯಕ್ತಿಗಳಿಗೆ ಸಕ್ಕಿಂಗ್ ವಾಹನಗಳನ್ನು ಖರೀದಿಸಲು ಧನಸಹಾಯ ಮತ್ತಿತರ ಸೌಲಭ್ಯಗಳನ್ನು ಒದಗಿಸುವಂತೆ ತಿಳಿಸಿದರು.

ಕೊಂಕಣ ರೈಲ್ವೆಯಲ್ಲಿ ಯಾವುದೇ ಮಾನ್ಯುಯಲ್ ಸ್ಕ್ಯಾವೆಂಜರ್‌ಗಳು ಕಾರ್ಯ ನಿರ್ವಹಿಸುತ್ತಿಲ್ಲ. ಸಫಾಯಿ ಕರ್ಮಚಾರಿಗಳು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು, ಅವರಿಗೆ ಸಮವಸ್ತ್ರ, 2 ಡೋಸ್ ಕೋವಿಡ್ ಲಸಿಕೆ, ಎಲ್ಲಾ ರೀತಿಯ ಅಗತ್ಯ ಸುರಕ್ಷಾ ಉಪಕರಣಗಳನ್ನು ಒದಗಿಸಲಾಗಿದೆ ಎಂದು ಕೊಂಕಣ ರೈಲ್ವೆಯ ಸಾರ್ವಜನಿಕ ಸಂಪರ್ಕಾಧಿಾರಿ ಸುಧಾ ಕೃಷ್ಣಮೂರ್ತಿ ತಿಳಿಸಿದರು.

ಮಾನ್ಯುಯಲ್ ಸ್ಕ್ಯಾವೆಂಜರ್‌ಗಳನ್ನು ಬಳಸುವುದೂ ಸಹ ಶಿಕ್ಷಾರ್ಹ ಅಪರಾಧವಾಗಿದ್ದು, ಈ ಬಗ್ಗೆ ಸಾರ್ವಜನಿಕರು ಅರಿವು ಹೊಂದಿರಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ಜಿಪಂನ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಎಎಸ್ಪಿ ಕುಮಾರ ಚಂದ್ರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತಾ ಮಡ್ಲೂರು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X