ಮಂಗಳೂರು: ಡಿ. 30-31ರಂದು ವಿದ್ಯುತ್ ವ್ಯತ್ಯಯ
ಮಂಗಳೂರು, ಡಿ. 29: ನಗರದ ಬೈಕಂಪಾಡಿ ಉಪಕೇಂದ್ರದಿಂದ ಹೊರಡುವ ಸುರತ್ಕಲ್ ಇಂಡಸ್ಟ್ರೀಯಲ್ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಹಾಗಾಗಿ ಡಿ.30ರ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಸುರತ್ಕಲ್, ಕಾನ, ತಡಂಬೈಲ್, ಕಾಟಿಪಳ್ಳ, ಕುತ್ತೆತ್ತೂರು, ಚೇಳಾರು, ಮುಕ್ಕ, ಸಸಿಹಿತ್ಲು, ಬಿಎಎಸ್‌ಎಫ್, ಎಚ್‌ಪಿಸಿಎಲ್, ಸ್ಟೀಲ್ ಬ್ಯಾರೆಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ಡಿ.31ರಂದು ನಗರದ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ ಮೋಟಾರ್ ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿಒಎಸ್ ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಹಾಗಾಗಿ ಡಿ.31ರ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ನಗರದ ನೆಹರೂ ಮೈದಾನ 3 ಹಾಗೂ 4ನೇ ಕ್ರಾಸ್, ಬೀಬಿ ಅಲಾಬಿ ರಸ್ತೆ, ರಾವ್ ಆ್ಯಂಡ್ ರಾವ್ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂನ ಪ್ರಕಟನೆ ತಿಳಿಸಿದೆ.
Next Story





