ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ: ಸಿಎಂ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಮುಖಭಂಗ

ಹಾವೇರಿ: ರಾಜ್ಯದ 5 ನಗರಸಭೆಗಳು ಸೇರಿ ಅವಧಿಪೂರ್ಣಗೊಂಡಿರುವ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಸೋಮವಾರ ನಡೆದಿರುವ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಕ್ಷೇತ್ರ ಹಾವೇರಿಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮತಕ್ಷೇತ್ರ ಶಿಗ್ಗಾವಿ-ಸವಣೂರ ವ್ಯಾಪ್ತಿಯ ಬಂಕಾಪುರ ಪುರಸಭೆ ಮತ್ತು ಹಾವೇರಿ ತಾಲೂಕಿನ ಗುತ್ತಲ ಪಟ್ಟಣ ಪಂಚಾಯತ್ ನಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು, ಅಧಿಕಾರದ ಗದ್ದುಗೇರಲು ಸ್ಪಷ್ಟ ಬಹುಮತ ಪಡೆದಿದೆ.
ಬಂಕಾಪುರ ಪುರಸಭೆಯಲ್ಲಿ ಒಟ್ಟು23 ಸ್ಥಾನಗಳಿದ್ದು, ಕಾಂಗ್ರೆಸ್ -14, ಬಿಜೆಪಿ -7, ಪಕ್ಷೇತರ -2 ಸ್ಥಾನ ಪಡೆದಿದೆ.
ಗುತ್ತಲ ಪಟ್ಟಣ ಪಂಚಾಯತ್ ನ ಒಟ್ಟು 18 ಸ್ಥಾನಗಳ ಪೈಕಿ ಕಾಂಗ್ರೆಸ್ -11, ಬಿಜೆಪಿ -6, ಪಕ್ಷೇತರ -1 ಸ್ಥಾನ ಪಡೆದಿದ್ದು, ಬಿಜೆಪಿಗೆ ತೀವ್ರ ಮುಖಭಂಗವಾಗಿದೆ.
Next Story





