Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 330 ಕೋಟಿ ರೂ.ವೆಚ್ಚದಲ್ಲಿ ಉಡುಪಿ ನಗರ...

330 ಕೋಟಿ ರೂ.ವೆಚ್ಚದಲ್ಲಿ ಉಡುಪಿ ನಗರ ಯುಡಿಜಿ ಯೋಜನೆ

ಉಡುಪಿ ನಗರಸಭೆ ಸಾಮಾನ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ30 Dec 2021 7:42 PM IST
share
330 ಕೋಟಿ ರೂ.ವೆಚ್ಚದಲ್ಲಿ ಉಡುಪಿ ನಗರ ಯುಡಿಜಿ ಯೋಜನೆ

ಉಡುಪಿ, ಡಿ.30: ಉಡುಪಿ ನಗರದೊಳಗಿನ ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ಅಳವಡಿಸಲು 330 ಕೋಟಿರೂ.ಗಳ ವೆಚ್ಚದ ಯೋಜನೆ ಸಿದ್ಧವಾಗಿದ್ದು, ಈ ಬಾರಿಯ ಬಜೆಟ್‌ನಲ್ಲಿ ಅದನ್ನು ಸೇರಿಸುವುದಾಗಿ ಮುಖ್ಯಮಂತ್ರಿಗಳು ಈಗಾಗಲೇ ತಿಳಿಸಿದ್ದಾರೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಉಡುಪಿ ನಗರಸಭೆಯ ಸಾಮಾನ್ಯ ಸಭೆಗೆ ಮಾಹಿತಿ ನೀಡಿದ್ದಾರೆ.

ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್ ಅಧ್ಯಕ್ಷತೆಯಲ್ಲಿ ಇಂದು ನಗರಸಭಾ ಸತ್ಯಮೂರ್ತಿ ಸಭಾಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರೊಬ್ಬರು ಒಳಚರಂಡಿ ವ್ಯವಸ್ಥೆ ಕುರಿತಂತೆ ಎತ್ತಿದ ಪ್ರಶ್ನೆಗೆ ಅವರು ಮಾಹಿತಿಯನ್ನು ಹಂಚಿಕೊಂಡರು.

ಒಳಚರಂಡಿ ವ್ಯವಸ್ಥೆಯನ್ನು ಆಧುನಿಕಗೊಳಿಸಲಾಗುತ್ತಿದೆ. ವೆಟ್‌ವೆಲ್, ಪೈಪ್. ಎಸ್‌ಟಿಪಿ, ಮ್ಯಾನ್‌ಹೋಲ್ ಎಲ್ಲವನ್ನೂ ಹೊಸದಾಗಿ ಅಳವಡಿಸಲಾಗುವುದು. ಯೋಜನೆಯ ಡಿಪಿಆರ್ ಈಗಾಗಲೇ ಸಿದ್ಧವಾಗಿದ್ದು, ಸರಕಾರದ ಅನುಮೋದನೆಗೆ ಹೋಗಿದೆ. ಮುಂದಿನ ಬಜೆಟ್‌ನಲ್ಲಿ ಇದನ್ನು ಸೇರ್ಪಡೆಗೊಳಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದವರು ವಿವರಿಸಿದರು.

ಘನತ್ಯಾಜ್ಯ ಘಟಕಕ್ಕೆ ವಿರೋಧ: ಉಡುಪಿ ನಗರಸಭಾ ವ್ಯಾಪ್ತಿಗೆ ಕುಡಿಯುವ ನೀರನ್ನು ಸರಬರಾಜು ಮಾಡಲು ನಿರ್ಮಿಸಲಾದ ಬಜೆ ಅಣೆಕಟ್ಟು ಬಳಿ ಸ್ವರ್ಣಾ ನದಿ ತಟದಲ್ಲಿ ಬೊಮ್ಮರಬೆಟ್ಟು ಗ್ರಾಮದ ಪಾಪುಜೆ ಎಂಬಲ್ಲಿ ಸುಮಾರು 1.60 ಎಕರೆ ಜಾಗವನ್ನು ಬೊಮ್ಮರಬೆಟ್ಟು ಗ್ರಾಪಂಗೆ ಘಟನ ದ್ರವ ತ್ಯಾಜ್ಯ ಘಟಕ ನಿರ್ಮಾಣಕ್ಕೆ ಮಂಜೂರು ಮಾಡಲಾಗಿದೆ. ಉಡುಪಿ ನಗರಸಭಾ ವ್ಯಾಪ್ತಿಯ ಹಾಗೂ ಪಕ್ಕದ ಗ್ರಾಪಂಗಳ ಲಕ್ಷಾಂತರ ಜನರು ಕುಡಿಯುವ ನೀರಿಗಾಗಿ ಸ್ವರ್ಣ ನದಿಯನ್ನೇ ಅವಲಂಬಿಸಿದ್ದು, ಇದೀಗ ಈ ಜಾಗದಲ್ಲಿ ಘನ ತ್ಯಾಜ್ಯ ಘಟಕ ನಿರ್ಮಾಣಗೊಂಡಲ್ಲಿ ನದಿಯ ನೀರು ಕಲುಷಿತಗೊಂಡು ಸಾರ್ವಜನಿಕರ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ ಎಂದು ಅಧ್ಯಕ್ಷೆ ಸುಮಿತ್ರಾ ನಾಯಕ್ ಸದಸ್ಯರಿಗೆ ಮಾಹಿತಿ ನೀಡಿದರು.

ಈ ವಿಷಯವನ್ನು ನಾವು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕೆಲಸ ನಿಲ್ಲಿಸುವಂತೆ ಹೇಳಿದ್ದರೂ, ಗ್ರಾಪಂನಲ್ಲಿ ನಿರ್ಣಯ ಕೈಗೊಂಡು ಅದೇ ಜಾಗದಲ್ಲಿ ಘಟಕ ನಿರ್ಮಾಣದ ಕಾಮಗಾರಿ ನಡೆಯುತ್ತಿದೆ. ಆದುದರಿಂದ ಕಾಮಗಾರಿ ಯನ್ನು ನಿಲ್ಲಿಸುವಂತೆ ಹಾಗೂ ಘಟಕ ನಿರ್ಮಾಣಕ್ಕೆ ಬೇರೆ ಸೂಕ್ತ ಜಾಗ ನೀಡುವಂತೆ ನಾವು ಜಿಲ್ಲಾಧಿಕಾರಿಗಳಿಗೆ ಮತ್ತೆ ಮನವಿ ಮಾಡಬೇಕು ಎಂದೂ ಅವರು ತಿಳಿಸಿದರು.

ಹೀಗಾಗಿ ಪಾಪುಜೆ ಪ್ರದೇಶದಲ್ಲಿ ಘನತ್ಯಾಜ್ಯ ಘಟಕ ನಿರ್ಮಾಣ ಮಾಡದಂತೆ ಹಾಗೂ ಆ ಬಗ್ಗೆ ನೀಡಿರುವ ಮಂಜೂರಾತಿಯನ್ನು ರದ್ದುಪಡಿಸುವಂತೆ ಜಿಲ್ಲಾಧಿಕಾರಿಯನ್ನು ಕೋರುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ನಗರಸಭಾ ವ್ಯಾಪ್ತಿಯಲ್ಲಿ ಕಟ್ಟಡ, ಮನೆ ನಿರ್ಮಾಣ ಕಾರ್ಯವನ್ನು ಪರವಾನಿಗೆ ಪಡೆದ ಒಂದು ವರ್ಷದೊಳಗೆ ಪೂರ್ಣಗೊಳಿಸುವಂತೆ ತಿಳಿಸಲಾಗಿದೆ. ಇಲ್ಲದಿದ್ದರೆ ಮತ್ತೆ ಪರವಾನಿಗೆ ಪಡೆಯಬೇಕಾಗಿದೆ. ಇದೊಂದು ಅಸಂವಿಧಾನಿಕ ನಿರ್ಧಾರವಾಗಿದ್ದು, ಇದನ್ನು ಹಿಂಪಡೆದು ಎರಡು ವರ್ಷಕ್ಕೆ ಏರಿಸಬೇಕೆಂದು ದೇವದಾಸ್ ಶೆಟ್ಟಿಗಾರ್ ಒತ್ತಾಯಿಸಿದರು. ಅದೇ ರೀತಿ ನವೀಕರಣ ಶುಲ್ಕ ತೆಗೆದುಕೊಳ್ಳುವ ಬಗ್ಗೆಯೂ ಅವರು ಆಕ್ಷೇಪ ವ್ಯಕ್ತಪಡಿಸಿದರು.

ಪರವಾನಿಗೆಯ ಅವಧಿಯನ್ನು ಒಂದು ವರ್ಷದಿಂದ ಎರಡು ವರ್ಷಕ್ಕೆ ಹೆಚ್ಚಿಸುವಂತೆ ನಿರ್ಣಯ ಮಾಡಿ ಸರಕಾರಕ್ಕೆ ಕಳುಹಿಸಬಹುದು ಎಂದು ಶಾಸಕರು ಸಲಹೆ ನೀಡಿದರು.

ಪರವಾನಿಗೆಯ ಅವಧಿಯನ್ನು ಒಂದು ವರ್ಷದಿಂದ ಎರಡು ವರ್ಷಕ್ಕೆ ಹೆಚ್ಚಿಸುವಂತೆ ನಿರ್ಣಯ ಮಾಡಿ ಸರಕಾರಕ್ಕೆ ಕಳುಹಿಸಬಹುದು ಎಂದು ಶಾಸಕರು ಸಲಹೆ ನೀಡಿದರು. ಕಾಂಗ್ರೆಸ್ ಸದಸ್ಯೆ ಅಮೃತ ಕೃಷ್ಣಮೂರ್ತಿ ಮಾತನಾಡಿ, ನಗರದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಒಡೆದರೆ, ಅದನ್ನು ರಿಪೇರಿ ಮಾಡುವವರು ಯಾರೂ ಇರುವುದಿಲ್ಲ. ನಗರಸಭೆಯಲ್ಲಿ ಏನೇ ಕೇಳಿದರೂ ಸರ್ವರ್ ಸಮಸ್ಯೆ ಎಂದು ಉತ್ತರಿಸುತ್ತಾರೆ. ಸರ್ವರ್ ರಿಪೇರಿ ಆಗುವುದು ಯಾವಾಗ ಎಂದು ಪ್ರಶ್ನಿಸಿದರು. ವಾರಾಹಿ ಯೋಜನೆಯ ಅನುಷ್ಠಾನದಿಂದಾಗಿ ಈಗ ಪೈಪ್‌ಲೈನ್ ರಿಪೇರಿ ಗೊಂದಲಮಯವಾಗಿದೆ ಎಂದು ದೂರಿದರು.

ಟ್ರಾಫಿಕ್ ಜಾಮ್ ಪ್ರಸ್ತಾಪ: ಕಳೆದ ಕೆಲವು ಸಮಯದಿಂದ ನಗರಾದ್ಯಂತ ವಾಹನಗಳಲ್ಲಿ ಸಂಚರಿಸುವುದೇ ಕಷ್ಟವಾಗಿದೆ. ಅದರಲ್ಲೂ ಕಲ್ಸಂಕದಲ್ಲಿ ಪದೇ ಪದೇ ಟ್ರಾಪಿಕ್ ಜಾಮ್ ಆಗುತ್ತಿದೆ. ಅಲ್ಲಿರುವ ಪೊಲೀಸರು ಹೆಲ್ಮೆಟ್ ಹಾಕದವರನ್ನು ಹಿಡಿಯಲು ಆಸಕ್ತಿ ತೋರುತ್ತಾರೆಯೇ ಹೊರತು ಟ್ರಾಫಿಕ್ ಜಾಮ್‌ನ್ನು ತೆರವುಗೊಳಿಸಲು ಉತ್ಸಾಹ ತೋರುವುದಿಲ್ಲ ಎಂದು ಪ್ರಭಾಕರ ಪೂಜಾರಿ ದೂರಿದರು.

ಇತ್ತೀಚಿನ ದಿನಗಳಲ್ಲಿ ನಗರದ ಕಲ್ಸಂಕ, ಕರಾವಳಿ ಜಂಕ್ಷನ್, ಅಂಬಲಪಾಡಿ ಜಂಕ್ಷನ್, ಟೈಗರ್ ಸರ್ಕಲ್, ತ್ರಿವೇಣಿ ಸರ್ಕಲ್ ಮುಂತಾದ ಕಡೆ ಪದೇ ಪದೇ ಟ್ರಾಫಿಕ್ ಜಾಮ್ ಆಗುತ್ತಿದೆ. ಅಲ್ಲೆಲ್ಲಾ ಆಧುನಿಕ ಸಿಗ್ನಲ್ ವ್ಯವಸ್ಥೆ ಶೀಘ್ರವೇ ಅನುಷ್ಠಾನಗೊಳ್ಳಲಿದೆ.ಜನವರಿ ಕೊನೆಯೊಳಗೆ ಎಲ್ಲ ಸರಿಯಾಗುತ್ತದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದರು.

ಮಲ್ಪೆ-ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಮಂಜೂರಾತಿ ದೊರಕಿದ್ದು, ವ್ಯವಸ್ಥಿತ ರೀತಿಯಲ್ಲಿ ಕೆಲಸ ನಡೆಯಲಿ ಎಂದು ಸುಂದರ ಕಲ್ಮಾಡಿ ತಿಳಿಸಿದರು. ಮಲ್ಪೆಯಿಂದ ಕರಾವಳಿ ಬೈಪಾಸ್‌ವರೆಗೆ ಭೂಸಾಧೀನಕ್ಕಾಗಿ ಕುಂದಾಪುರ ಎಸಿಯವರನ್ನು ಭೂಸ್ವಾಧೀನಾಧಿಕಾರಿಯಾಗಿ ನೇಮಿಸಲು ಒತ್ತಾಯಿಸಬೇಕು ಎಂದು ಶಾಸಕರು ತಿಳಿಸಿದರು. ಇಲ್ಲದಿದ್ದರೆ ಪರ್ಕಳದಂಥ ಅವ್ಯವಸ್ಥೆ ಇಲ್ಲೂ ನಿರ್ಮಾಣಗೊಳ್ಳಬಹುದು ಎಂದರು.

ಉಡುಪಿಯಲ್ಲಿ ಪರ್ಯಾಯಕ್ಕೆ ಪೂರ್ವಭಾವಿಯಾಗಿ ವಿವಿಧ ರಸ್ತೆಗಳ ನವೀಕರಣಕ್ಕೆ ಲೋಕೋಪಯೋಗಿ ಇಲಾಖೆಯ ಮೂಲಕ 16 ಕೋಟಿ ರೂ.ಗಳ ಯೋಜನೆ ರೂಪಿಸಲಾಗಿದ್ದು, ಕಾಮಗಾರಿ ಪ್ರಾರಂಭಿಸಲಾಗಿದೆ ಎಂದು ರಘುಪತಿ ಭಟ್ ತಿಳಿಸಿದರು. ಕೆಲವು ಕಡೆ ನಡೆಯುತ್ತಿರುವ ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂದು ರಮೇಶ್ ಕಾಂಚನ್ ದೂರಿದರು.

ಸಭೆಯಲ್ಲಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಸಾಲ್ಯಾನ್, ಪೌರಾಯುಕ್ತ ಡಾ.ಉದಯ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X