Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಡದಿ ಪುರಸಭೆ ಚುನಾವಣೆ ಫಲಿತಾಂಶ: ಹಣದ...

ಬಿಡದಿ ಪುರಸಭೆ ಚುನಾವಣೆ ಫಲಿತಾಂಶ: ಹಣದ ರಾಜಕೀಯಕ್ಕೆ ಸೋಲಾಗಿದೆ, ಜನರ ಪ್ರೀತಿಗೆ ಗೆಲುವಾಗಿದೆ ಎಂದ ಎಚ್.ಡಿಕೆ

ವಾರ್ತಾಭಾರತಿವಾರ್ತಾಭಾರತಿ30 Dec 2021 9:12 PM IST
share
ಬಿಡದಿ ಪುರಸಭೆ ಚುನಾವಣೆ ಫಲಿತಾಂಶ: ಹಣದ ರಾಜಕೀಯಕ್ಕೆ ಸೋಲಾಗಿದೆ, ಜನರ ಪ್ರೀತಿಗೆ ಗೆಲುವಾಗಿದೆ ಎಂದ ಎಚ್.ಡಿಕೆ

ಬಿಡದಿ, ಡಿ.30: ಇಲ್ಲಿನ ಪುರಸಭೆ ಚುನಾವಣೆಯಲ್ಲಿ ಹಣದ ರಾಜಕೀಯಕ್ಕೆ ಸೋಲಾಗಿದೆ. ಜನರ ಪ್ರೀತಿಗೆ ಗೆಲುವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಗುರುವಾರ ಬಿಡದಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಾಂಗ್ರೆಸ್‍ನವರು ದೊಡ್ಡಮಟ್ಟದಲ್ಲಿ ಬಿಡದಿ ಹಿಡಿಯಲು ಹೊರಟ್ಟಿದ್ದರು. ಕುಮಾರಸ್ವಾಮಿ ಇಲ್ಲಿನ ಕೇತಗಾನಹಳ್ಳಿ ಇದ್ದಾರೆ. ಅವರನ್ನು ಅಲ್ಲಿಗೇ ನೂಕುತ್ತೇವೆ ಎಂದಿದ್ದರು. ಈ ಫಲಿತಾಂಶ ಅವರಿಗೆ ಉತ್ತರ ನೀಡಿದೆ ಎಂದರು.

ಕಾಂಗ್ರೆಸ್ ಪಕ್ಷದ ಜತೆ ಸಂಸದರು, ಮಾಜಿ ಶಾಸಕರ ಜೊತೆ ದೊಡ್ಡ ಹಿಂಡಿತ್ತು. ಆದರೆ ಬಿಡದಿಯ ಮತದಾರರು ನಮಗೆ ಆರ್ಶೀವಾದ ಮಾಡಿದ್ದಾರೆ. ಈ ಫಲಿತಾಂಶ ನನಗೆ ದೊಡ್ಡಮಟ್ಟದ ಅಚ್ಚರಿ ಫಲಿತಾಂಶ ಅಲ್ಲ, ನಿರೀಕ್ಷಿತವೇ ಆಗಿತ್ತು ಎಂದು ಅವರು ತಿಳಿಸಿದರು.

ನನಗೆ ರಾಜಕೀಯ ಜನ್ಮ ಕೊಟ್ಟ ಸ್ಥಳ ಬಿಡದಿ. ಬಿಡದಿಯ ಮತದಾರರಿಗೆ ಅಭಿನಂದನೆ ತಿಳಿಸುತ್ತೇನೆ. ನಾನು ಎರಡು ದಿನ ನಮ್ಮ ಶಾಸಕರ ಜತೆ ಸೇರಿ ಪ್ರಚಾರ ಮಾಡಿದ್ದೆ. ಮುಂದಿನ 2023ರ ಚುನಾವಣೆಗೆ ಈ ಫಲಿತಾಂಶ ನನಗೆ ಮಾನಸಿಕವಾಗಿ ಶಕ್ತಿ ತುಂಬಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

ರಾಜ್ಯದ ವಿಜಯಪುರ, ರಾಯಚೂರು, ಶಿರಾ ಮತ್ತಿತರೆ ಕಡೆ ನಮ್ಮವರು ಗೆದ್ದಿದ್ದಾರೆ. ಶಿರಾದಲ್ಲಿ ಜೆಡಿಎಸ್ ಮುಳುಗಿತು ಅನ್ನುತ್ತಿದ್ದರು. ಜನ ಇವತ್ತು ಅಲ್ಲಿಯೂ ಉತ್ತರ ನೀಡಿದ್ದಾರೆ. ಉಪ ಚುನಾವಣೆಗಳು ಬೇರೆ, ಸಾರ್ವತ್ರಿಕ ಚುನಾವಣೆಗಳು ಬೇರೆ. 2023ರಲ್ಲಿ ಜೆಡಿಎಸ್ ಏನು ಎಂದು ಜನರೇ ಉತ್ತರ ಕೊಡುತ್ತಾರೆ. ಕಾಂಗ್ರೆಸ್‍ನವರು ಮೇಲುಗೈ ಸಾಧಿಸಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಚಿಕ್ಕಮಗಳೂರಿನಲ್ಲಿ ನಮ್ಮನ್ನು ಬಿಟ್ಟು ಬೇರೆಯವರು ಅಧಿಕಾರ ಮಾಡಲು ಆಗಲ್ಲ. ಅಲ್ಲಿನ ನಗರಸಭೆಯಲ್ಲಿ ನಮ್ಮ ಬೆಂಬಲ ಇದ್ದವರಿಗೆ ಅಧಿಕಾರ ಸಿಗುತ್ತದೆ. ರಾಜ್ಯದ ಹಲವಾರು ಕ್ಷೇತ್ರದಲ್ಲಿ ನಮ್ಮ ಬೆಂಬಲ ಬೇಕೆಬೇಕು, ಅದೇ ಪರಿಸ್ಥಿತಿ ಅನೇಕ ಕಡೆ ಇದೆ. ಕರಾವಳಿಯಲ್ಲಿಯೂ ನಮಗೆ ಒಂದು ಸ್ಥಾನ ಸಿಕ್ಕಿದೆ, ಅಲ್ಲಿ ನಮ್ಮ ನೆಲೆ ಇರಲಿಲ್ಲ. ನಾವು ಆರ್ಥಿಕವಾಗಿ ಶಕ್ತಿ ತುಂಬಿಲ್ಲ, ಆದರೂ ಕಾರ್ಯಕರ್ತರೇ ಹೋರಾಟ ಮಾಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

2022 ನಮ್ಮ ಪಕ್ಷದ ಸಂಘಟನಾ ವರ್ಷ: 2023ರ ಚುನಾವಣೆಗೆ ನಾವು ತಯಾರಿ ನಡೆಸುತ್ತಿದ್ದೇವೆ. ರಾಜಕೀಯ ವಿಶ್ಲೇಷಕರ ನಿರೀಕ್ಷೆ ಬದಲಾಗಲಿದೆ ಎನ್ನುವುದು ನನ್ನ ಅಚಲ ವಿಶ್ವಾಸ. ಸಂಕ್ರಾಂತಿಯಿಂದ ನಾನು ಒಂದು ದಿನವೂ ಬಿಡುವು ತೆಗೆದುಕೊಳ್ಳುವುದಿಲ್ಲ. 123 ಸ್ಥಾನಗಳ ಗುರಿ ತಲುಪಲು ಪಕ್ಷ ಸಂಘಟನೆ ಮಾಡುತ್ತೇವೆ. ಯಾರು ಎಷ್ಟೇ ಲಘುವಾಗಿ ಮಾತನಾಡಲಿ. ಅದಕ್ಕೆಲ್ಲ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮದೇ ಆದ ರೀತಿಯಲ್ಲಿ ಪಕ್ಷ ಸಂಘಟನೆ ಪ್ರಾರಂಭಿಸುತ್ತೇವೆ ಎಂದು ಕುಮಾರಸ್ವಾಮಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X