ಕಾಪು ಪುರಸಭೆ ಚುನಾವಣೆ ಬಿಜೆಪಿ ಗೆಲುವು ಐತಿಹಾಸಿಕ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ, ಡಿ.30: ಕಾಪು ಪುರಸಭೆ ಚುನಾವಣೆಯ 23 ಸ್ಥಾನಗಳಲ್ಲಿ 12 ಅಭ್ಯರ್ಥಿಗಳು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಗಳಿಸಿರುವ ಬಿಜೆಪಿ ಗೆಲುವು ಐತಿಹಾಸಿಕ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹರ್ಷ ವ್ಯಕ್ತ ಪಡಿಸಿದ್ದಾರೆ.
ಕಾಪುವನ್ನು ಮಾದರಿ ಪುರಸಭೆಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕುಡಿಯುವ ನೀರು, ಒಳಚರಂಡಿ, ತ್ಯಾಜ್ಯ ನಿರ್ವಹಣೆ, ದಾರಿದೀಪ, ಮೀನು ಮಾರುಕಟ್ಟೆ ಮುಂತಾದ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ವಿಶೇಷ ಒತ್ತು ನೀಡಿ ಮುಂದಿನ 5 ವರ್ಷಗಳಲ್ಲಿ ನವ ಕಾಪು ನಿರ್ಮಾಣದ ಸಂಕಲ್ಪದೊಂದಿಗೆ ಅತ್ಯಂತ ಉತ್ತಮ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಕುಯಿಲಾಡಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿಗೆ ಬಹುಮತ ನೀಡಿದ ಕಾಪು ಪುರಸಭಾ ವ್ಯಾಪ್ತಿಯ ಮತದಾರರಿಗೆ ಹೃತ್ಪೂರ್ವಕ ವಂದನೆಗಳನ್ನು ಸಲ್ಲಿಸುವ ಜೊತೆಗೆ ಚುನಾವಣಾ ಗೆಲುವಿಗೆ ಹಗಲಿರುಳು ಶ್ರಮಿಸಿರುವ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.
Next Story





