Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೌರ್ಜನ್ಯಕ್ಕೊಳಗಾದವರ ಮೇಲೆಯೇ ಪ್ರಕರಣ...

ದೌರ್ಜನ್ಯಕ್ಕೊಳಗಾದವರ ಮೇಲೆಯೇ ಪ್ರಕರಣ ದಾಖಲಿಸಿದ್ದು ಯಾವ ನ್ಯಾಯ ?: ಕೃಷ್ಣಪ್ಪ ಕೊಂಚಾಡಿ

ಪೊಲೀಸ್ ದೌರ್ಜನ್ಯ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ30 Dec 2021 10:35 PM IST
share
ದೌರ್ಜನ್ಯಕ್ಕೊಳಗಾದವರ ಮೇಲೆಯೇ ಪ್ರಕರಣ ದಾಖಲಿಸಿದ್ದು ಯಾವ ನ್ಯಾಯ ?: ಕೃಷ್ಣಪ್ಪ ಕೊಂಚಾಡಿ

ಮಂಗಳೂರು, ಡಿ.30: ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೋಟತಟ್ಟು ಎಂಬಲ್ಲಿ ಮೆಹಂದಿ ಕಾರ್ಯಕ್ರಮ ನಡೆಸುತ್ತಿದ್ದ ಕೊರಗ ಸಮುದಾಯದ ಮನೆಗೆ ನುಗ್ಗಿ ದೌರ್ಜನ್ಯ ಎಸಗಿದ ಪೊಲೀಸರನ್ನು ಬಂಧಿಸಿ ಜೈಲಿಗೆ ಅಟ್ಟುವ ಬದಲು ದೌರ್ಜನ್ಯಕ್ಕೊಳಗಾದ ಕೊರಗ ಸಮುದಾಯದ 7 ಮಂದಿಯ ಮೇಲೆ ಪ್ರಕರಣ ದಾಖಲಿಸಿದ್ದು ಯಾವ ನ್ಯಾಯ ಎಂದು ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಹ ಸಂಚಾಲಕ ಡಾ. ಕೃಷ್ಣಪ್ಪ ಕೊಂಚಾಡಿ ಪ್ರಶ್ನಿಸಿದ್ದಾರೆ.

ಕೋಟ ಠಾಣೆಯ ಪೊಲೀಸರು ಕೊರಗ ಸಮುದಾಯದ ಮನೆಗೆ ನುಗ್ಗಿ ದಾಂಧಲೆ ನಡೆಸಿ ದೌರ್ಜನ್ಯ ಎಸಗಿರುವ ಕೃತ್ಯವನ್ನು ಖಂಡಿಸಿ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ದಲಿತ ಹಕ್ಕುಗಳ ಸಮಿತಿ, ಡಿವೈಎಫ್‌ಐ ವತಿಯಿಂದ ಗುರುವಾರ ನಗರದ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕೊರಗ ಸಮುದಾಯ ಇಲ್ಲಿನ ಮೂಲನಿವಾಸಿಗಳು. ವರ್ಷದಿಂದ ವರ್ಷಕ್ಕೆ ಈ ಸಮುದಾಯದ ಜನಸಂಖ್ಯೆ ಇಳಿಕೆಯಾಗುತ್ತಲೇ ಇದೆ. ಇವರನ್ನು ರಕ್ಷಿಸಿ ಮುಖ್ಯವಾಹಿನಿಗೆ ತರಬೇಕಾದ ಪೊಲೀಸರೇ ದಾಂಧಲೆ ನಡೆಸಿ ದಬ್ಬಾಳಿಕೆ ಮಾಡಿರುವುದು ಅಕ್ಷಮ್ಯ. ತಪ್ಪಿತಸ್ಥ ಪೊಲೀಸರನ್ನು ವರ್ಗಾವಣೆ ಅಥವಾ ಅಮಾನತು ಮಾಡಿದರೆ ಸಾಲದು. ಅವರನ್ನು ಬಂಧಿಸಿ ಜೈಲಿಗೆ ಅಟ್ಟಬೇಕು ಮತ್ತು ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಕೃಷ್ಣಪ್ಪ ಕೊಂಚಾಡಿ ಒತ್ತಾಯಿಸಿದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ ದೌರ್ಜನ್ಯಕ್ಕೊಳಗಾದ ವರನ ಮದುವೆಯಲ್ಲಿ ಪಾಲ್ಗೊಂಡು ಮೊಸಳೆ ಕಣ್ಣೀರು ಸುರಿಸಿದ್ದಾರೆ. ನಿಜವಾಗಿಯೂ ದೌರ್ಜನ್ಯಕ್ಕೆ ಒಳಗಾದ ಕೊರಗ ಸಮುದಾಯದ ಮೇಲೆ ಸಚಿವರಿಗೆ ಕಾಳಜಿ ಇದ್ದರೆ ವರ ಸಹಿತ ಕೊರಗ ಸಮುದಾಯದ 7 ಮಂದಿಯ ವಿರುದ್ಧ ಪೊಲೀಸರು ದಾಖಲಿಸಿದ ಪ್ರಕರಣವನ್ನು ವಾಪಸ್ ಪಡೆಯಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಡಿಜೆಯಿಂದ ಸಾರ್ವಜನಿಕರ ನಿದ್ದೆಗೆ ಭಂಗವಾಗುವುದಾದರೆ, ವರ್ಷವಿಡೀ ಜಿಲ್ಲೆಯಲ್ಲಿ ನಡೆಯುವ ಆಟ, ಭಜನೆ, ಯಕ್ಷಗಾನ ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮದಿಂದ ಲಕ್ಷಾಂತರ ಜನರ ನಿದ್ದೆಗೆ ಭಂಗವಾಗುವುದಿಲ್ಲವೇ? ಆ ಬಗ್ಗೆ ಪೊಲೀಸರು ಯಾವ್ಯಾವ ಕ್ರಮ ಕೈಗೊಂಡಿದ್ದಾರೆ ಎಂದು ಕೃಷ್ಣಪ್ಪ ಕೊಂಚಾಡಿ ಪ್ರಶ್ನಿಸಿದರು.

ನಿವೃತ್ತ ಉಪನ್ಯಾಸಕ ಪಟ್ಟಾಭಿರಾಮ ಸೋಮಯಾಜಿ, ಸಿಪಿಎಂ ಮುಖಂಡ ಸುನಿಲ್ ಕುಮಾರ್ ಬಜಾಲ್, ಡಿವೈಎಫ್‌ಐ ಮುಖಂಡ ಸಂತೋಷ್ ಬಜಾಲ್ ಮಾತನಾಡಿದರು. 

ಸಂಘಟನೆಗಳ ಮುಖಂಡರಾದ ತಿಮ್ಮಯ್ಯ ಕೊಂಚಾಡಿ, ಕೃಷ್ಣ ತಣ್ಣೀರುಬಾವಿ, ಬಶೀರ್ ಪಂಜಿಮೊಗರು, ಯೋಗೀಶ್ ಜಪ್ಪಿನಮೊಗರು, ಭಾರತಿ ಬೋಳಾರ, ವಾಸುದೇವ ಉಚ್ಚಿಲ್, ಜಯಂತಿ ಬಿ. ಶೆಟ್ಟಿ, ಮನೋಜ್ ವಾಮಂಜೂರು, ಮಹಾಬಲ ದೆಪ್ಪಲಿಮಾರ್, ಮುಸ್ತಫಾ, ಸಂತೋಷ್, ಸುನಂದಾ ಕೊಂಚಾಡಿ, ಅಸುಂತಾ ಡಿಸೋಜ ಮತ್ತಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X