ನೈಟ್ ಕರ್ಫ್ಯೂ ಉಲ್ಲಂಘನೆ: ಬೆಂಗಳೂರಿನಲ್ಲಿ 196 ವಾಹನ ವಶಕ್ಕೆ

ಬೆಂಗಳೂರು, ಡಿ.30: ಕೋವಿಡ್-19 ನಿಯಂತ್ರಣಕ್ಕೆ ಜಾರಿಗೊಳಿಸಿರುವ ನೈಟ್ ಕಫ್ರ್ಯೂ ವೇಳೆ ನಿಯಮ ಮೀರಿ ಸಂಚರಿಸಿದ 196 ವಾಹನಗಳನ್ನು ಗುರುವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ನಾಲ್ಕು ಚಕ್ರ ವಾಹನ ಸೇರಿ ಒಟ್ಟು 196 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರು ಕೇಂದ್ರ ವಿಭಾಗ, ಪಶ್ಚಿಮ ವಿಭಾಗ, ಉತ್ತರ ವಿಭಾಗದಲ್ಲಿ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನೈಟ್ ಕಫ್ರ್ಯೂ ಜಾರಿಯಲ್ಲಿ ಇರುವುದರಿಂದ ಅನಗತ್ಯವಾಗಿ ರಾತ್ರಿ ವೇಳೆ ಸಂಚರಿಸದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಅದಾಗ್ಯೂ ಕೆಲವರು ಸಂಚರಿಸುತ್ತಿರುವುದರಿಂದ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದಾರೆ.
ಕರ್ಫ್ಯೂ ಜಾರಿಯಾದ ಮೊದಲ ದಿನ ಕೆಲವೆಡೆ ಎಚ್ಚರಿಕೆ ನೀಡಿ ವಾಹನಗಳನ್ನು ಬಿಟ್ಟು ಕಳುಹಿಸಲಾಗಿತ್ತು. ಮಂಗಳವಾರದಿಂದ ವಾಹನಗಳನ್ನು ಜಪ್ತಿ ಮಾಡಲಾಗುತ್ತಿದೆ.
Next Story





