ದಕ್ಷಿಣ ಆಫ್ರಿಕಾದಿಂದ ಬಂದ ಮಂಗಳೂರಿನ ಇಬ್ಬರಲ್ಲಿ ಒಮೈಕ್ರಾನ್ ಪತ್ತೆ

ಮಂಗಳೂರು, ಡಿ.31: ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ್ದ ಮಂಗಳೂರಿನ ಇಬ್ಬರು ಕೊರೋನ ಸೋಂಕಿತರಲ್ಲಿ ಒಮೈಕ್ರಾನ್ ಪತ್ತೆಯಾಗಿದೆ.
ಅವರ ಆರ್‌ಟಿಪಿಸಿಆರ್ ಪರೀಕ್ಷೆಯನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮಾಡಲಾದ ಸಂದರ್ಭ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅಲ್ಲಿಯೇ ಆಸ್ಪತ್ರೆಯಲ್ಲಿ ಅವರನ್ನು ಚಿಕಿತ್ಸೆಗೊಳಪಡಿಸಲಾಗಿದೆ. ಅವರ ಗಂಟಲ ದ್ರವದ ಮಾದರಿಯನ್ನು ಅಲ್ಲಿಯೇ ಜಿನೋಮಿಕ್ ತಪಾಸಣೆಗೊಳಪಡಿಸಿದ್ದು, ಇದೀಗ ಒಮೈಕ್ರಾನ್ ಸೋಂಕು ಪತ್ತೆಯಾಗಿದೆ.
ಸದ್ಯ ಅವರಿಬ್ಬರು ಬೆಂಗಳೂರಿನ ಸರಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ಅವರಿಬ್ಬರ ಪ್ರಾಥಮಿಕ ಸಂಪರ್ಕಿತರನ್ನು ಕೂಡಾ ಅಲ್ಲಿಯೇ ಪತ್ತೆ ಹಚ್ಚಿ ತಪಾಸಣೆಗೊಳಪಡಿಸಲಾಗಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
Next Story





