ಜ.1: ಕುವೆಂಪು ಕಂಪಿನ ‘ಬಾ ಇಲ್ಲಿ ಸಂಭವಿಸು.....’
ಉಡುಪಿ, ಡಿ.31: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಯೋಜನೆ ಯಲ್ಲಿ ‘ಬಾ ಇಲ್ಲಿ ಸಂಭವಿಸು... ಕುವೆಂಪು ಕಂಪು’ ನಾಡಿನ ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪ ಅವರ ನೇತೃತ್ವದಲ್ಲಿ ತೆಂಕನಿಡಿಯೂರು ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಜ.1ರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅದ್ಯಯನ ಕೇಂದ್ರದ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಅಧ್ಯಕ್ಷತೆ ವಹಿಸಲಿದ್ದು, ಉಡುಪಿ ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಉಪಸ್ಥಿತರಿರುವರು ಎಂದು ಜಿಲ್ಲಾ ಕಪಾಸ ಪ್ರಕಟಣೆ ತಿಳಿಸಿದೆ.
Next Story





