ಒಮೈಕ್ರಾನ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಡಿ. 31: ಕೋವಿಡ್ ರೂಪಾಂತರಿ ಒಮೈಕ್ರಾನ್ ಸೋಂಕು ಪ್ರಕರಣಗಳ ನಿಯಂತ್ರಣ ದೃಷ್ಟಿಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮುಂಬರುವ ದಿನಗಳಲ್ಲಿ ಆರೋಗ್ಯ ಮೂಲ ಸೌಕರ್ಯಗಳಾದ ಔಷಧಿ, ಐಸಿಯು ಹಾಸಿಗೆ ವ್ಯವಸ್ಥೆಗೆ ಸಂಬಂಧಿಸಿದಂತೆ ಇನ್ನು ಹೆಚ್ಚಿನ ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಡೀ ದೇಶದಲ್ಲಿಯೇ ಒಮೈಕ್ರಾನ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ದೇಶದ 8 ರಾಜ್ಯಗಳಲ್ಲಿ ಕರ್ನಾಟಕವು ಒಂದು ಎಂದು ಕೇಂದ್ರ ಸರಕಾರ ಗುರುತಿಸಿದೆ. ಈ ವಿಷಯವನ್ನು ಸರಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದರು.
ಹಿಂದೂ ದೇವಸ್ಥಾನಗಳನ್ನು ಸರಕಾರದ ಕಟ್ಟುಪಾಡುಗಳಿಂದ ಮುಕ್ತ ಮಾಡುತ್ತಿದ್ದೇವೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯು ಹಿಂದೂ ದೇವಸ್ಥಾನ ಹಾಗೂ ಹಿಂದೂ ಭಕ್ತರ ವಿರುದ್ಧ ಅವರಿಗಿರುವ ಮನೋಭಾವವನ್ನು ಸೂಚಿಸುತ್ತದೆ. ಸುಖಾ ಸುಮ್ಮನೆ ಶಿವಕುಮಾರ್ ನಮ್ಮ ವಿರುದ್ದ ಆರೋಪ ಮಾಡುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.





