ಕೋಟ ಘಟನೆ: ಕಾಂಗ್ರೆಸ್‌ನಿಂದ ಎಸ್ಪಿಗೆ ಮನವಿ

ಉಡುಪಿ, ಡಿ.31: ಕೋಟತಟ್ಟು ಗ್ರಾಮದ ಚಿಟ್ಟಿಬೆಟ್ಟುನಲ್ಲಿ ಡಿ.27ರ ರಾತ್ರಿ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರು ರಾಜೇಶ್ ಕೊರಗ ಹಾಗೂ ಇತರರ ಮೇಲೆ ದಾಖಲಿಸಿದ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ಪ್ರಕರಣವನ್ನು ಶೀಘ್ರ ಪರಿಹರಿಸ ಬೇಕೆಂದು ಜಿಲ್ಲಾ ಪೋಲೀಸ್ ಅಧೀಕ್ಷಕರಿಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮನವಿ ಅರ್ಪಿಸಲಾಯಿತು.
ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮನವಿ ಅರ್ಪಿಸಿದರು.
ಈ ಸಂದರ್ಭ ದಲ್ಲಿ ಕಾಂಗ್ರೆಸ್ ಮುಖಂಡರಾದ ದಿನೇಶ್ ಪುತ್ರನ್, ಭಾಸ್ಕರರಾವ್ ಕಿದಿಯೂರು, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕೀರ್ತಿ ಶೆಟ್ಟಿ, ಹರೀಶ್ ಶೆಟ್ಟಿ ಪಾಂಗಾಳ ರೋಶನಿ ಒಲಿವರಾ, ಶಂಕರ್ ಕುಂದರ್ ಹಾಗೂ ಇತರರು ಉಪಸ್ಥಿತರಿದ್ದರು.
Next Story





