ಹೊಸ ವರ್ಷಾಚರಣೆ: ಉಡುಪಿ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ

ಉಡುಪಿ, ಡಿ.31: ನೂತನ ವರ್ಷವನ್ನು ಉಡುಪಿ ಜಿಲ್ಲೆಯ ಕ್ರೆಸ್ತ ಬಾಂಧವರು ಪ್ರಾರ್ಥನೆ ಹಾಗೂ ಧನ್ಯವಾದ ಸಮರ್ಪಣೆಯೊಂದಿಗೆ ಸ್ವಾಗತಿಸಿದರು.
ಶುಕ್ರವಾರ ಸಂಜೆಯ ವೇಳೆ ಇಗರ್ಜಿಗಳಿಗೆ ತೆರಳಿದ ಕ್ರೆಸ್ತ ಬಾಂಧವರು ಕಳೆದ ವರ್ಷ ಸರ್ವ ರೀತಿಯಲ್ಲಿ ತಮ್ಮನ್ನು ಕಾಪಾಡಿದ್ದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿ ದರು. ನೂತನ ವರ್ಷ ಪ್ರತಿಯೊಬ್ಬರಿಗೂ ಸಂತೋಷ ತರಲಿ ಎಂದು ಬೇಡಿದರು.
ಉಡುಪಿ ಬಿಷಪ್ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ರಾತ್ರಿ ಪವಿತ್ರ ಬಲಿಪೂಜೆ ಅರ್ಪಿಸಿದರು. ನೂತನ ವರ್ಷದಲ್ಲಿ ದೇವರು ತೋರಿದ ಹಾದಿಯಲ್ಲಿ ನಡೆದು ವಿಶ್ವ ಶಾಂತಿಗಾಗಿ ಪ್ರತಿಯೊಬ್ಬರು ಸದಾ ಪ್ರಾಥನೆರ್ ಸಲ್ಲಿಸುವಂತೆ ಕರೆ ನೀಡಿದರು.
ಉಡುಪಿ ಬಿಷಪ್ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ರಾತ್ರಿ ಪವಿತ್ರ ಬಲಿಪೂಜೆ ಅರ್ಪಿಸಿದರು. ನೂತನ ವರ್ಷದಲ್ಲಿ ದೇವರು ತೋರಿದ ಹಾದಿಯಲ್ಲಿ ನಡೆದು ವಿಶ್ವ ಶಾಂತಿಗಾಗಿ ಪ್ರತಿಯೊಬ್ಬರು ಸದಾ ಪ್ರಾರ್ಥನೆ ಸಲ್ಲಿಸುವಂತೆ ಕರೆ ನೀಡಿದರು. ಪವಿತ್ರ ಬಲಿ ಪೂಜೆಗೆ ಮುಂಚಿತವಾಗಿ ಕಳೆದು ಹೋಗಲಿರುವ 2021ನೇ ವರ್ಷದಲ್ಲಿ ದೇವರು ಮಾಡಿದ ಎಲ್ಲಾ ರೀತಿಯ ಉತ್ತಮ ಕೆಲಸಗಳಿಗಾಗಿ ದೇವರಿಗೆ ಧನ್ಯವಾದ ಅರ್ಪಿಸಿ ಪರಮ ಪ್ರಸಾದದ ವಿಶೇಷ ಆರಾಧನೆಯನ್ನು ನಡೆಸಲಾಯಿತು. 2022ರಲ್ಲಿ ವಿಶ್ವದಲ್ಲಿ ಶಾಂತಿ ನೆಲೆಸಲಿ ಮತ್ತು ಕೋರೊನಾ ದಿಂದ ವಿಶ್ವ ಮುಕ್ತವಾಗಲಿ ಎಂದು ಪ್ರಾರ್ಥಿಸಲಾಯಿತು.
ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ.ಚೇತನ್ ಲೋಬೊ, ತೊಟ್ಟಂ ಚರ್ಚಿನ ಧರ್ಮಗುರು ವಂ.ಫ್ರಾನ್ಸಿಸ್ ಕರ್ನೆಲಿಯೋ ಉಪಸ್ಥಿತರಿದ್ದರು. ರಾಜ್ಯ ಸರಕಾರದ ಕೋವಿಡ್ ನಿಯಮಾವಳಿ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಚರ್ಚುಗಳಲ್ಲಿ 10 ಗಂಟೆಗೆ ಮೊದಲೇ ರಾತ್ರಿ ಪೂಜೆಗಳನ್ನು ಕೊನೆಗೊಳಿಸಲಾಗಿತ್ತು.
ಜಿಲ್ಲೆಯ ಪ್ರಮುಖದ ಚರ್ಚುಗಳಾದ ಶಿರ್ವ ಆರೋಗ್ಯ ಮಾತೆಯ ದೇವಾ ಲಯದಲ್ಲಿ ಧರ್ಮಗುರು ವಂ.ಡೆನಿಸ್ ಡೇಸಾ, ಉಡುಪಿ ಶೋಕಮಾತಾ ಇಗರ್ಜಿಯಲ್ಲಿ ಧರ್ಮಗುರು ವಂ.ಚಾರ್ಲ್ಸ್ ಮಿನೇಜಸ್, ಕುಂದಾಪುರ ಹೊಲಿ ರೋಸರಿ ಚರ್ಚ್‌ನಲ್ಲಿ ವಂ.ಸ್ಟ್ಯಾನಿ ತಾವ್ರೊ, ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಾಸಿಲಿಕಾದಲ್ಲಿ ವಂ.ಆಲ್ಬನ್ ಡಿಸೋಜ ನೇತೃತ್ವದಲ್ಲಿ ಹೊಸವರ್ಷ ಆಚರಣೆಯ ಬಲಿಪೂಜೆ ನೆರವೇರಿಸಲಾಯಿತು.







