ಕೋಟತಟ್ಟು ಪ್ರಕರಣ: ಕೊರಗರ ಮೇಲಿನ ಕೇಸು ವಜಾಕ್ಕೆ ಎಸ್ಪಿಗೆ ಮನವಿ

ಉಡುಪಿ, ಡಿ.31: ಕೋಟತಟ್ಟು ಕೊರಗರ ಮೆಹಂದಿ ಕಾರ್ಯಕ್ರಮಕ್ಕೆ ಸಂಬಂಧಿಸಿ ರಾಜೇಶ್ ಕೊರಗ ಹಾಗೂ ಇತರರ ಮೇಲೆ ಪೊಲೀಸರು ದಾಖಲಿಸಿದ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ಪ್ರಕರಣವನ್ನು ಶೀಘ್ರವೇ ಪರಿಹರಿಸಬೇಕೆಂದು ಆಗ್ರಹಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಮನವಿ ಅರ್ಪಿಸಲಾಯಿತು.
ಮೆಹಂದಿ ಕಾರ್ಯಕ್ರಮಕ್ಕೆ ಏಕಾಏಕಿ ದಾಳಿ ನಡೆಸಿ ಕೊರಗರ ಮೇಲೆ ದೌರ್ಜನ್ಯ ಎಸಗಿರುವುದು ಖಂಡನೀಯ. ಅಲ್ಲದೆ ರಾಜೇಶ್ ಮತ್ತು ಇತರರ ಮೇಲೆ ಸುಳ್ಳು ಪ್ರಕರಣವನ್ನು ದಾಖಲಿಸಿ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ವನ್ನು ಮುಚ್ಚಿ ಹಾಕುವ ಹುನ್ನಾರ ನಡೆಸಲಾಗಿದೆ. ಆದುದರಿಂದ ಕೊರಗ ಮೇಲೆ ದಾಖಲಾದ ಪ್ರಕರಣದ ಸತ್ಯಾಸತ್ಯತೆಯನ್ನು ತನಿಖೆ ನಡೆಸಿ ಸೂಕ್ತ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ, ಮುಖಂಡರಾದ ದಿನೇಶ್ ಪುತ್ರನ್, ಭಾಸ್ಕರ ರಾವ್ ಕಿದಿಯೂರು, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕೀರ್ತಿ ಶೆಟ್ಟಿ, ಹರಿಶ್ ಶೆಟ್ಟಿ ಪಾಂಗಾಳ, ರೋಶನಿ ಒಲಿವರಾ, ಶಂಕರ್ ಕುಂದರ್, ರವೀಂದ್ರ ಕಾಮತ್, ನಟರಾಜ ಹೊಳ್ಳ, ಗಣೆಶ್ ನೆಲ್ಲಿಬೆಟ್ಟು, ಬಸವ ಪೂಜಾರಿ ಉಪಸ್ಥಿತರಿದ್ದರು.





