Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹರಿದ್ವಾರ ದ್ವೇಷ ಭಾಷಣ ಪ್ರಕರಣ: ಸಶಸ್ತ್ರ...

ಹರಿದ್ವಾರ ದ್ವೇಷ ಭಾಷಣ ಪ್ರಕರಣ: ಸಶಸ್ತ್ರ ಪಡೆಗಳ ಐವರು ಮಾಜಿ ಮುಖ್ಯಸ್ಥರಿಂದ ರಾಷ್ಟ್ರಪತಿ, ಪ್ರಧಾನ ಮಂತ್ರಿಗೆ ಪತ್ರ

ವಾರ್ತಾಭಾರತಿವಾರ್ತಾಭಾರತಿ31 Dec 2021 10:12 PM IST
share
ಹರಿದ್ವಾರ ದ್ವೇಷ ಭಾಷಣ ಪ್ರಕರಣ: ಸಶಸ್ತ್ರ ಪಡೆಗಳ ಐವರು ಮಾಜಿ ಮುಖ್ಯಸ್ಥರಿಂದ ರಾಷ್ಟ್ರಪತಿ, ಪ್ರಧಾನ ಮಂತ್ರಿಗೆ ಪತ್ರ

ಹೊಸದಿಲ್ಲಿ,ಡಿ.31: ಸಶಸ್ತ್ರ ಪಡೆಗಳ ಐವರು ಮಾಜಿ ಮುಖ್ಯಸ್ಥರು,ಅಧಿಕಾರಿಗಳು ಮತ್ತು ಪ್ರತಿಷ್ಠಿತ ನಾಗರಿಕರು ಸೇರಿದಂತೆ ನೂರಕ್ಕೂ ಅಧಿಕ ಜನರು ವಿವಿಧ ಕಾರ್ಯಕ್ರಮಗಳಲ್ಲಿ,ತೀರ ಇತ್ತೀಚಿಗೆ ಉತ್ತರಾಖಂಡದ ಹರಿದ್ವಾರ ಮತ್ತು ದಿಲ್ಲಿಯಲ್ಲಿ ಮುಸ್ಲಿಮರ ನರಮೇಧಕ್ಕೆ ನೀಡಿರುವ ಬಹಿರಂಗ ಕರೆಗಳಿಗೆ ಸಂಬಂಧಿಸಿದಂತೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಕ್ರೈಸ್ತರು,ದಲಿತರು ಮತ್ತು ಸಿಕ್ಖರು ಸೇರಿದಂತೆ ಇತರ ಅಲ್ಪಸಂಖ್ಯಾತರನ್ನು ಗುರಿಯಾಗಿಸುತ್ತಿರುವುದನ್ನೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ದೇಶದ ಗಡಿಗಳಲ್ಲಿನ ಪ್ರಸ್ತುತ ಸ್ಥಿತಿಯನ್ನು ಪ್ರಸ್ತಾಪಿಸಿರುವ ಪತ್ರವು,ಹಿಂಸಾಚಾರದ ಇಂತಹ ಕರೆಗಳು ಆಂತರಿಕವಾಗಿ ಸೌಹಾರ್ದವನ್ನು ಹಾಳುಗೆಡವಬಹುದು ಮತ್ತು ಬಾಹ್ಯಶಕ್ತಿಗಳಿಗೆ ಉತ್ತೇಜನವನ್ನೂ ನೀಡಬಹುದು ಎಂದು ಎಚ್ಚರಿಕೆಯನ್ನು ನೀಡಿದೆ.

‘ದೇಶದೊಳಗೆ ಶಾಂತಿ ಮತ್ತು ಸೌಹಾರ್ದದ ಯಾವುದೇ ಉಲ್ಲಂಘನೆಯು ದುಷ್ಟ ಬಾಹ್ಯ ಶಕ್ತಿಗಳಿಗೆ ಧೈರ್ಯ ನೀಡುತ್ತದೆ. ನಮ್ಮ ವೈವಿಧ್ಯಮಯ ಮತ್ತು ಬಹುತ್ವದ ಸಮಾಜದಲ್ಲಿ ಒಂದಲ್ಲೊಂದು ಸಮುದಾಯದ ವಿರುದ್ಧ ಹಿಂಸಾಚಾರಕ್ಕೆ ಇಂತಹ ರಾಜಾರೋಷ ಕರೆಗಳಿಗೆ ಅವಕಾಶ ನೀಡುವುದು ಪೊಲೀಸ್ ಪಡೆಗಳು ಮತ್ತು ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು ಸೇರಿದಂತೆ ಸಮವಸ್ತ್ರದಲ್ಲಿರುವ ನಮ್ಮ ಪುರುಷರು ಮತ್ತು ಮಹಿಳೆಯರ ಏಕತೆ ಮತ್ತು ಒಗ್ಗಟ್ಟಿನ ಮೇಲೆ ಗಂಭೀರ ವ್ಯತಿರಿಕ್ತ ಪರಿಣಾಮವನ್ನುಂಟು ಮಾಡುತ್ತದೆ ’ ಎಂದು ಪತ್ರದಲ್ಲಿ ಹೇಳಲಾಗಿದೆ.

ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ್ದ ಹರಿದ್ವಾರದ ‘ಧರ್ಮ ಸಂಸದ್ ’ನ್ನು ನೇರವಾಗಿ ಪ್ರಸ್ತಾಪಿಸಿರುವ ಪತ್ರವು,‘ಈ ಸಮಾವೇಶದಲ್ಲಿ ಹಿಂದು ಸಂತರು ಮತ್ತು ಇತರ ನಾಯಕರು ಮಾಡಿದ್ದ ಭಾಷಣಗಳಲ್ಲಿಯ ವಿಷಯಗಳು ನಮ್ಮನ್ನು ಗಂಭೀರವಾಗಿ ವಿಚಲಿತಗೊಳಿಸಿವೆ. ಹಿಂದು ರಾಷ್ಟ್ರದ ಸ್ಥಾಪನೆಗಾಗಿ ಮತ್ತು ಅಗತ್ಯ ಬಿದ್ದರೆ ಶಸ್ತ್ರಾಸ್ತ್ರಗಳನ್ನು ಎತ್ತಿಕೊಳ್ಳುವಂತೆ ಮತ್ತು ಹಿಂದು ಧರ್ಮದ ರಕ್ಷಣೆಯ ಹೆಸರಿನಲ್ಲಿ ಭಾರತದಲ್ಲಿಯ ಮುಸ್ಲಿಮರನ್ನು ಕೊಲ್ಲುವಂತೆ ಪದೇ ಪದೇ ಕರೆಗಳನ್ನು ನೀಡಲಾಗಿತ್ತು ’ ಎಂದು ಹೇಳಿದೆ.

ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದ ಹಾಗೂ ಅಗತ್ಯವಾದರೆ ಹೋರಾಟ ಮತ್ತು ಹತ್ಯೆಗಳ ಮೂಲಕ ಭಾರತವನ್ನು ಹಿಂದು ರಾಷ್ಟ್ರವನ್ನಾಗಿಸಲು ಬಹಿರಂಗವಾಗಿ ಶಪಥ ಕೈಗೊಂಡಿದ್ದ ದಿಲ್ಲಿಯಲ್ಲಿನ ಕಾರ್ಯಕ್ರಮವೊಂದನ್ನೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇತರ ಸ್ಥಳಗಳಲ್ಲಿಯೂ ಇಂತಹ ಇನ್ನಷ್ಟು ದೇಶದ್ರೋಹಿ ಸಭೆಗಳನ್ನು ಆಯೋಜಿಸಲಾಗುತ್ತಿದೆ ಎಂದೂ ಪತ್ರವು ಬೆಟ್ಟು ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X