Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಕಲೇಶಪುರ | ದಲಿತರ ಮೇಲೆ ಹಲ್ಲೆ ನಡೆಸಿದ...

ಸಕಲೇಶಪುರ | ದಲಿತರ ಮೇಲೆ ಹಲ್ಲೆ ನಡೆಸಿದ ಆರೋಪ; ಬಜರಂಗದಳದ 4 ಕಾರ್ಯಕರ್ತರ ವಿರುದ್ಧ FIR

ವಾರ್ತಾಭಾರತಿವಾರ್ತಾಭಾರತಿ26 Oct 2022 10:47 PM IST
share
ಸಕಲೇಶಪುರ | ದಲಿತರ ಮೇಲೆ ಹಲ್ಲೆ ನಡೆಸಿದ ಆರೋಪ; ಬಜರಂಗದಳದ 4 ಕಾರ್ಯಕರ್ತರ ವಿರುದ್ಧ FIR

ಸಕಲೇಶಪುರ: ದನವನ್ನು ಕಡಿದಿದ್ದಾರೆ ಎಂದು ಆರೋಪಿಸಿ ದಲಿತರ ಮೇಲೆ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳದ 4 ಮಂದಿ ಕಾರ್ಯಕರ್ತರ ವಿರುದ್ಧ ಸಕಲೇಶ ಪುರ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಿಲಾಗಿರುವ ಬಗ್ಗೆ ವರದಿಯಾಗಿದೆ.

ತಾಲೂಕಿನ ಮಳಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳಾದ ಶಿವು, ರವಿ, ಶ್ರೀಜಿತ್ ಗೌಡ ಹಾಗೂ ರವಿ ಮಳಲಿ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಮಳಲಿ ಗ್ರಾಮದ ಲೋಕೇಶ್( 35 ) ಹಲ್ಲೆಗೆ ಒಳಗಾದ ವ್ಯಕ್ತಿಯಾಗಿದ್ದು, ಇವರ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿದೆ ಎನ್ನಲಾಗಿದೆ. ಘಟನೆಯಲ್ಲಿ ಚಂದ್ರು (40) ಕೂಡ ಹಲ್ಲೆಗೆ ಒಳಗಾಗಿದ್ದಾರೆ ಎಂದು ದೂರಲಾಗಿದೆ.

ಇನ್ನು ದನ ಕಡಿದ ಅರೋಪದ ಮೇಲೆ ಲೋಕೇಶ್ ಮತ್ತು ಚಂದ್ರು ಇವರ ವಿರುದ್ಧವೂ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆ ವಿವರ: ಮಳಲಿ ಗ್ರಾಮ ಪಂಚಾಯತ್ ನ ಹಾಲೆ ಬೇಲೂರು ಬಳಿ ದನ ಕಡಿದ ವಿಚಾರ ತಿಳಿದ ಬಜರಂಗದಳದ ಕಾರ್ಯಕರ್ತರು ಸ್ಥಳಕ್ಕೆ ತೆರಳಿ ದಲಿತರ ಮೇಲೆ ಹಲ್ಲೆ ಮಾಡಿ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಬಂದ ಪೋಲಿಸರು ಇಬ್ಬರನ್ನು ವಶಪಡಿಸಿಕೊಂಡಿದ್ದಾರೆ.

ಬಂಧನ: ಗಾಯಗೊಂಡಿದ್ದ ವ್ಯಕ್ತಿಗಳಿಗೆ ಸ್ಥಳಿಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ , ಗಾಯಾಳುಗಳ ಹೇಳಿಕೆ ಮೇರೆಗೆ ಹಲ್ಲೆ ಮಾಡಿದ ವ್ಯಕ್ತಿಗಳ ವಿರುದ್ದ ಕೇಸು ದಾಖಲಿಸಿಕೊಂಡಿರುವ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಮಂದಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ದಲಿತ ಸಂಘಟನೆಯಿಂದ ದೂರು: ಪ್ರಕರಣಕ್ಕೆ ಸಂಬಂಧಿಸಿದಂತೆ ದಲಿತ ಮುಖಂಡರಾದ ಶಾಂತರಾಜ್ ಹೆನ್ನಲಿ ಮತ್ತು ಮಳಲಿ ಗೋಪಾಲ್ , ಪೋಲಿಸರಿಗೆ ದೂರು ನೀಡಿದ್ದು, 'ದಲಿತರ ಮೇಲೆ ಸಂಘಪರಿವಾರ ಪದೇ ಪದೇ ಹಲ್ಲೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಇನ್ನೂ 7 ಜನರು ಭಾಗಿಯಾಗಿದ್ದಾರೆ ಇವರ ಮೇಲೆ ಪ್ರಕರಣ ದಾಖಲಿಸಬೇಕು' ಎಂದು ಒತ್ತಾಯಿಸಿದ್ದಾರೆ.

ಪತ್ರಿಕೆಯೊಂದಿಗೆ ಮಾತನಾಡಿದ ದಸಂಸ ಮುಖಂಡ ಶಾಂತರಾಜ್ ಹೆನ್ನಲಿ, 'ದನ ಕಡಿದ ಪ್ರಕಣಕ್ಕೆ ಸಂಬಂಧಿಸಿದಂತೆ ಪೋಲಿಸರು ಕಾನೂನು ಕ್ರಮ ಕೈಗೊಳ್ಳಲಿ, ಆದರೆ ಅನೈತಿಕ ಪೋಲಿಸ್ ಗಿರಿಗೆ ನಮ್ಮ ವಿರೋಧವಿದೆ' ಎಂದರು.

'ಇತ್ತೀಚೆಗೆ ಸಕಲೇಶಪುರ ಮತ್ತು ಹಾಸನದಲ್ಲಿ ಪ್ರತಿಭಟನೆ ನಡೆಸಿ ಭಜರಂಗದಳದ ವರ್ತನೆಯ ವಿರುದ್ಧ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠದಿಕಾರಿಗಳಿಗೆ ದೂರು ನೀಡಿದ್ದೆವು. ಇಲ್ಲಿಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಮನವರಿಕೆ ಮಾಡಿದ್ದೆವು ಅದರೆ ಮತ್ತೆ ದಲಿತರ ಮೇಲಿನ ಹಲ್ಲೆ ಮರುಕಳಿಸಿದೆ. ಇವರಿಗೆ ಕಾನೂನಿನ ಭಯವಿಲ್ಲ' ಎಂದರು.

ಇದನ್ನೂ ಓದಿ: ಸಕಲೇಶಪುರ | ಕರು ಸಾಗಿಸುತ್ತಿದ್ದ ದಲಿತ ಯುವಕನ ಮೇಲೆ ಹಲ್ಲೆ ಆರೋಪ: ಬಜರಂಗದಳದ 9 ಮಂದಿ ಕಾರ್ಯಕರ್ತರ ವಿರುದ್ಧ FIR

share
ವಾರ್ತಾಭಾರತಿ
ವಾರ್ತಾಭಾರತಿ
Next Story
X