ಉಡುಪಿ: ಜಕಣಾಚಾರಿ ಸಂಸ್ಮರಣಾ ಕಾರ್ಯಕ್ರಮ
![ಉಡುಪಿ: ಜಕಣಾಚಾರಿ ಸಂಸ್ಮರಣಾ ಕಾರ್ಯಕ್ರಮ ಉಡುಪಿ: ಜಕಣಾಚಾರಿ ಸಂಸ್ಮರಣಾ ಕಾರ್ಯಕ್ರಮ](https://www.varthabharati.in/sites/default/files/images/articles/2022/01/1/319828-1641055672.jpg)
ಉಡುಪಿ, ಜ.1:ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿ ಯಿಂದ ಶನಿವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಜಕಣಾಚಾರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಈ ಸಂದಭದಲ್ಲಿ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕಿರಣ್ ಫಡ್ನೇಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸಮಾಜದ ಮುಖಂಡ ಗಣೇಶ್ ಜಾಲ್ಸೂರು ಕಾರ್ಕಳ ಇವರು ಜಕಣಾಚಾರಿ ಜೀವನ ಸಾಧನೆ ಕುರಿತು ವಿಶೇಷ ಉಪನ್ಯಾಸ ನೀಡಿದರು.
Next Story