Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲಾಕ್ ಡೌನ್ ಹೇರುವ ಅನಿವಾರ್ಯ...

ಲಾಕ್ ಡೌನ್ ಹೇರುವ ಅನಿವಾರ್ಯ ಪರಿಸ್ಥಿತಿಯನ್ನು ಸೃಷ್ಟಿಸಬಾರದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

''ನೈಟ್ ಕರ್ಫ್ಯೂ ವಿಸ್ತರಣೆ ಬಗ್ಗೆ ಚರ್ಚಿಸಿ ತೀರ್ಮಾನ''

ವಾರ್ತಾಭಾರತಿವಾರ್ತಾಭಾರತಿ2 Jan 2022 5:54 PM IST
share
ಲಾಕ್ ಡೌನ್ ಹೇರುವ ಅನಿವಾರ್ಯ ಪರಿಸ್ಥಿತಿಯನ್ನು ಸೃಷ್ಟಿಸಬಾರದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಳಗಾವಿ, ಜ. 2: ‘ಕೋವಿಡ್ ರೂಪಾಂತರಿ ಒಮೈಕ್ರಾನ್ ಸೋಂಕು ತಡೆಗಟ್ಟಲು ಮುಂಬೈ ಮಾದರಿಯಲ್ಲಿ ಬೆಂಗಳೂರು ನಗರದಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸುವ ಸಂಬಂಧ ಇನ್ನೂ ಎರಡು ದಿನಗಳಲ್ಲಿ ತಜ್ಞರ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ  ತಿಳಿಸಿದ್ದಾರೆ.

ರವಿವಾರ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕಫ್ರ್ಯೂ ವಿಸ್ತರಣೆ ಬಗ್ಗೆ ನಾಳೆ(ಜ.3) ಅಥವಾ ನಾಡಿದ್ದು ತೀರ್ಮಾನ ಮಾಡಲಾಗುವುದು. ಕೋವಿಡ್ ಸೋಂಕು ಯಾವ ರೀತಿಯಲ್ಲಿ ಹರಡುತ್ತಿದೆ ಎಂಬುದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ವಿಶೇಷವಾಗಿ ಬೆಂಗಳೂರು ನಗರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೋಂಕು ಹಬ್ಬುತ್ತಿದೆ. ಇವೆಲ್ಲವನ್ನೂ ಗಮನಿಸಿ ತೀರ್ಮಾನ ಮಾಡುತ್ತೇವೆ' ಎಂದರು.

ಕಂದಾಯ ಸಚಿವ ಆರ್.ಅಶೋಕ್ ‘ಲಾಕ್‍ಡೌನ್' ಬಗ್ಗೆ ಮಾತನಾಡಿದ್ದಾರೆ. ಆದರೆ, ನಮ್ಮ ನಿಲುವು ಬಹಳ ಸ್ಪಷ್ಟ. ಈ ಹಿಂದೆ ಲಾಕ್‍ಡೌನ್ ಆಗಿತ್ತು. ಇದೀಗ ಮತ್ತೊಮ್ಮೆ ಲಾಕ್‍ಡೌನ್ ಆಗಬಾರದು ಎಂದು ಕಟ್ಟುನಿಟ್ಟಿನ ತೀರ್ಮಾನ ಕೈಗೊಂಡಿದ್ದೇವೆ. ಜನರು ಮಾರ್ಗಸೂಚಿ ಪಾಲಿಸುವ ಮೂಲಕ ಸಹಕಾರ ಕೊಟ್ಟರೆ ಲಾಕ್‍ಡೌನ್ ಆಗುವುದಿಲ್ಲ. ಸಚಿವ ಆರ್.ಅಶೋಕ್ ಹೇಳಿದ ಅರ್ಥವೇ ಇದು. ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಬೊಮ್ಮಾಯಿ ಕೋರಿದರು.

ಗಡಿಯಲ್ಲಿ ಕಟ್ಟೆಚ್ಚರ: ಒಂದು ವಾರದಿಂದ ದೇಶದಲ್ಲಿ ಕೊರೋನ ಸೋಂಕು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಅದರಲ್ಲಿ ಒಮೈಕ್ರಾನ್ ಸೋಂಕು ಪ್ರಕರಣಗಳು ಪತ್ತೆಯಾಗುತ್ತಿರುವುದನ್ನು ಗಮನಿಸುತ್ತಿದ್ದೇವೆ. ಮಹಾರಾಷ್ಟ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೋಂಕು ಬರುತ್ತಿವೆ. ಮುಂಬೈ ಜೊತೆ ಒಡನಾಟ ಹೆಚ್ಚಿದ್ದು, ರಾಜ್ಯದ ಗಡಿಯಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ ಎಂದು ಬಸವರಾಜ ಬೊಮ್ಮಾಯಿ ಇದೇ ವೇಳೆ ತಿಳಿಸಿದರು.

ಕೋವಿಡ್ ಎರಡು ಡೋಸ್ ಲಸಿಕೆ ಪಡೆದಿರಬೇಕು ಹಾಗೂ ಆರ್‍ಟಿಪಿಸಿಆರ್ ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ಕರ್ನಾಟಕ ರಾಜ್ಯಕ್ಕೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಬೆಳಗಾವಿ ಜೊತೆ ಅಕ್ಕ-ಪಕ್ಕದ ಚೆಕ್‍ಫೋಸ್ಟ್ ಬಿಗಿಗೊಳಿಸಲು ಸೂಚನೆ ನೀಡಲಾಗಿದೆ. ವಿಜಯಪುರ ಜಿಲ್ಲೆ ಸೇರಿ ಇನ್ನಿತರ ಗಡಿ ಪ್ರದೇಶಗಳಲ್ಲಿ ಚೆಕ್‍ಫೋಸ್ಟ್ ಮಾಡಿದ್ದಾರೆ. ಅದೇ ರೀತಿ ಬೆಳಗಾವಿ ಜಿಲ್ಲೆಯಲ್ಲಿಯೂ ಆಗಬೇಕು ಎಂದು ಅವರು ಸೂಚನೆ ನೀಡಿದರು.

ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ 11 ಚೆಕ್‍ಫೋಸ್ಟ್ ಗಳನ್ನು ಮಾಡಲಾಗಿದೆ. ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವುದರಿಂದ ಕೆಲ ಪ್ರಯಾಣಿಕರಿಗೆ ತೊಂದರೆ ಆಗಬಹುದು. ಆದರೆ, ಜನರ ಆರೋಗ್ಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ. ಇದು ಕೇವಲ ನಿಬರ್ಂಧ ಅಷ್ಟೇ ಅಲ್ಲ, ನಾವು ಪೂರ್ವ ತಯಾರಿ ಮಾಡಬೇಕಿದೆ ಎಂದರು.

ಈಗಾಗಲೇ ಕೋವಿಡ್ ಮೂರನೆ ಅಲೆ ಬರುವ ಮುನ್ಸೂಚನೆ ಹಿನ್ನೆಲೆಯಲ್ಲಿ ಸಿದ್ದತೆ ಮಾಡಿಕೊಳ್ಳುತ್ತಿದ್ದು, ಹೆಚ್ಚುವರಿ ಬೆಡ್, 4 ಸಾವಿರಕ್ಕೂ ಹೆಚ್ಚು ಐಸಿಯು ಹಾಸಿಗೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಔಷಧಗಳನ್ನು ಸಂಗ್ರಹಿಸಿದ್ದು, ಎಲ್ಲ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಲಸಿಕಾ ಅಭಿಯಾನ: ನಾಳೆ(ಜ.3)ಯಿಂದ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಲಸಿಕಾಕರಣ ಕಾರ್ಯಕ್ರಮವನ್ನು ಯೋಜನಾ ಬದ್ಧವಾಗಿ, ಶಿಸ್ತಿನಿಂದ ಕಾರ್ಯಗತಗೊಳಿಸಲು ಸೂಚನೆ ನೀಡಲಾಗಿದೆ. ಮಕ್ಕಳನ್ನು ಸುರಕ್ಷಾ ಚಕ್ರದೊಳಗೆ ತರಲು ಪ್ರಧಾನಿ ಆಶಯದ ಈ ಕಾರ್ಯಕ್ರಮಕ್ಕೆ ಜ.3ರಂದು ಚಾಲನೆ ನೀಡಲಾಗುವುದು. ಜ.10ರಂದು ಕೊ-ಮಾರ್ಬಿಡಿಟಿ ಇರುವ ಹಾಗೂ 60 ವರ್ಷಕ್ಕಿಂತ ಮೇಲ್ಪಟ್ಟಿರುವ ವ್ಯಕ್ತಿಗಳಿಗೆ ಲಸಿಕಾಕರಣವನ್ನು ಮಾಡಲಾಗುವುದು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X