ಜ.9: ಸುರತ್ಕಲ್ ಬಂಟರ ಸಂಘದ ಕ್ರೀಡೋತ್ಸವ
ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಮತ್ತು ಬಂಟರ ಯಾನೆ ನಾಡವರ ಮಾತೃ ಸಂಘ(ರಿ) ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ)ದ ಸಹಯೋಗದೊಂದಿಗೆ ಸುರತ್ಕಲ್ ಗೋವಿಂದ ದಾಸ ಕಾಲೇಜ್ ಕ್ರೀಡಾಂಗಣದಲ್ಲಿ ಜ.9ರಂದು ಬೆಳಗ್ಗೆ 8:30ಕ್ಕೆ ಬಂಟರ ಕ್ರೀಡೋತ್ಸವ ನಡೆಯಲಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಕ್ರೀಡೋತ್ಸವವನ್ನು ಉದ್ಘಾಟಿಸಲಿದ್ದಾರೆ. ಸಂಜೆ 5 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಬಂಟರ ಮಾತೃ ಸಂಘದ ಕೋಶಾಧಿಕಾರಿ ಕೃಷ್ಣ ಪ್ರಸಾದ್ ರೈ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಮತ್ತಿತರರು ಭಾಗವಹಿಸಲಿದ್ದಾರೆ.
ವಯೋಮಿತಿ ಆಧಾರದಲ್ಲಿ ಹಗ್ಗ ಜಗ್ಗಾಟ, ವಾಲಿಬಾಲ್, ತ್ರೋಬಾಲ್ ಪಂದ್ಯಾಟದ ಜತೆಗೆ ಮಕ್ಕಳಿಗೂ ವಿವಿಧ ಸ್ಫರ್ಧೆಗಳು ನಡೆಯಲಿದೆ ಎಂದು ಕ್ರೀಡಾ ಕಾರ್ಯದರ್ಶಿ ಹರೀಶ್ ಕೆ. ಶೆಟ್ಟಿ ತಿಳಿಸಿದ್ದಾರೆ.
Next Story





