ಕೋವಿಡ್ ನಿಯಂತ್ರಣಕ್ಕೆ ಜನರು ಸಹಕರಿಸದಿದ್ದಲ್ಲಿ ಲಾಕ್‍ಡೌನ್ ಅನಿವಾರ್ಯ: ಗೃಹಸಚಿವ ಆರಗ ಜ್ಞಾನೇಂದ್ರ

ಚಿಕ್ಕಮಗಳೂರು, ಜ.3: ಕೋವಿಡ್ ನಿಯಂತ್ರಣಕ್ಕೆ ಜನರು ಸಹಕಾರ ನೀಡದೇ ಸೋಂಕು ಹೆಚ್ಚಳವಾದರೇ ರಾಜ್ಯದಲ್ಲಿ ಲಾಕ್‍ಡೌನ್ ಅನಿವಾರ್ಯವಾಗಲಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಜೀವ ಉಳಿಸುವುದಕ್ಕೆ ಸರಕಾರ ಬದ್ಧವಾಗಿದೆ. ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆ ಸಂಬಂಧ ಪ್ರತಿಕ್ರಿಯಿಸಿದ ಅವರು, ಪಾದಯಾತ್ರೆಗೆ ಅನುಮತಿ ಕೊಡುವುದು ಬಿಡುವುದು ಬೇರೆ, ಕೋವಿಡ್ ಸಮಯದಲ್ಲಿ ರಾಜಕಾರಣದ ನಡೆಯನ್ನು ಮುಂದೂಡುವುದು ಒಳ್ಳೆಯದು. ವಿರೋಧ ಪಕ್ಷವಾಗಿ ಹೋರಾಟ ಮಾಡಲು ಅವರಿಗೆ ಅವಕಾಶವಿದೆ. ಆದರೆ, ಅಧಿಕಾರದಲ್ಲಿ ದ್ದಾಗ ಕಾಂಗ್ರೆಸ್‍ನವರು ಏನು ಮಾಡಲಿಲ್ಲ ಎಂದ ಅವರು, ಪಾದಯಾತ್ರೆಯನ್ನು ಕೈಬಿಟ್ಟು ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿಕೊಂಡರು.
Next Story





