ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಸ್‌ಐಓ ಮನವಿ

ಉಡುಪಿ, ಜ.3: ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಸ್‌ಐಓ ಉಡುಪಿ ಜಿಲ್ಲೆಯ ವತಿಯಿಂದ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗೆ ಶನಿವಾರ ಮನವಿ ಸಲ್ಲಿಸ ಲಾಯಿತು.
ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಭೋದನಾ ತರಗತಿಗಳನ್ನು ತೊರೆದು ಪ್ರತಿಭಟಿಸುತ್ತಿದ್ದಾರೆ. ಇದರಿಂದ ವಿದ್ಯಾರ್ಥಿ ಗಳ ಕಲಿಕೆಗೆ ಬಹಳಷ್ಟು ನಷ್ಟವಾಗಲಿದೆ. ಪಾಠ-ಕಲಿಕೆಯು ವಿಳಂಬವಾದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಪಠ್ಯಕ್ರಮದ ಮೇಲೆ ಪ್ರಭಾವ ಬೀರುವ ಸಂಭವವಿದೆ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಅಧ್ಯಯನಕ್ಕೆ ಅನಾನುಕೂಲವಾಗಲಿದೆ. ಇದಲ್ಲದೆ ರಾಜ್ಯದ ಅನೇಕ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆಯೇ ಅವ ಲಂಬನೆಯಾಗಿವೆ. ಆದ್ದರಿಂದ ಕರ್ನಾಟಕ ರಾಜ್ಯ ಸರಕಾರ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಪ್ರಾಮಾಣಿಕವಾಗಿ ಪರಿಶೀಲಿಸಿ ಶೀಘ್ರದಲ್ಲಿಯೇ ಈಡೇರಿಸಬೇಕೆಂದು ಎಸ್‌ಐಓ ಉಡುಪಿ ಜಿಲ್ಲಾಧ್ಯಕ್ಷ ಅಫ್ವಾನ್ ಹೂಡೆ ಮನವಿ ಯಲ್ಲಿ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಎಸ್‌ಐಓ ಮಲ್ಪೆಘಟಕದ ಅಧ್ಯಕ್ಷ ಅಯಾನ್ ಶೇಕ್, ಹೂಡೆ ಘಟಕದ ಅಧ್ಯಕ್ಷ ಅಸ್ಜದ್, ಸದಸ್ಯರಾದ ಡಾ.ಫಹೀಮ್, ಶಾರೂಕ್, ವಸೀಮ್ ಅಬ್ದುಲ್ಲಾ ಉಪಸ್ಥಿತರಿದ್ದರು.





