Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿವಿ ಪರೀಕ್ಷಾ ಫಲಿತಾಂಶದಲ್ಲಿ...

ಮಂಗಳೂರು ವಿವಿ ಪರೀಕ್ಷಾ ಫಲಿತಾಂಶದಲ್ಲಿ ಗೊಂದಲವಿಲ್ಲ; ಪರೀಕ್ಷಾಂಗ ಕುಲ ಸಚಿವರ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ3 Jan 2022 9:09 PM IST
share

ಮಂಗಳೂರು, ಜ.3: ಮಂಗಳೂರು ವಿಶ್ವದ್ಯಾನಿಲಯವು ಕಳೆದ ಆಗಸ್ಟ್-ಸೆಪ್ಟೆಂಬರ್ ಹಾಗೂ ಸೆಪ್ಟಂಬರ್-ಅಕ್ಟೋಬರ್‌ನಲ್ಲಿ ನಡೆಸಿದ ಪದವಿ ಪರೀಕ್ಷೆಗಳ ಫಲಿತಾಂಶಗಳಲ್ಲಿ ಯಾವುದೇ ಗೊಂದಲವಿಲ್ಲ ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲ ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೆಲವು ಪತ್ರಿಕೆಗಳಲ್ಲಿ ಫಲಿತಾಂಶದ ಕುರಿತು ಏಕಪಕ್ಷೀಯವಾದ ಅಭಿಪ್ರಾಯಗಳನ್ನು ಒಳಗೊಂಡ ವರದಿಗಳು ಪ್ರಕಟವಾಗಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಉಂಟಾಗಿದೆ. ಮಂಗಳೂರು ವಿವಿಯು MuLinx ಎಂಬ Open Source Software ಬಳಸಿಕೊಂಡು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿ ಸವಾಲುಗಳನ್ನು ಎದುರಿಸಿ ಎಲ್ಲರ ಬೆಂಬಲದೊಂದಿಗೆ ಪರೀಕ್ಷೆಗಳನ್ನು ನಡೆಸಿ ಫಲಿತಾಂಶ ಪ್ರಕಟಿಸಿದೆ.

ಕೋವಿಡ್ ಹಿನ್ನಲೆಯಲ್ಲಿ ನಿರಂತರವಾಗಿ ಪರೀಕ್ಷೆಗಳನ್ನು ನಡೆಸಿರುವುದರಿಂದ ಹಾಗೂ ಹೊಸ ಸಾಫ್ಟ್‌ವೇರ್‌ನ ಬಳಕೆಯಲ್ಲಿ ಮತ್ತು ಈ ಹಿಂದಿನ ಪರೀಕ್ಷಾ ದತ್ತಾಂಶಗಳು ಹೊಸ ಸಾಫ್ಟ್‌ವೇರ್‌ಗೆ ಹೊಂದಾಣಿಕೆಯಾಗುವ ಹಂತದ ಪ್ರಕ್ರಿಯೆಯಿಂದಾಗಿ ಅಧಿಕ ಸಮಯಾವಕಾಶದ ಅಗತ್ಯವಿದ್ದ ಕಾರಣ ಫಲಿತಾಂಶ ಪ್ರಕಟನೆಯು ವಿಳಂಬವಾಗಿರುತ್ತದೆ ಎಂದು ಕುಲಸಚಿವರು ಸ್ಪಷ್ಟಪಡಿಸಿದ್ದಾರೆ.

ವಿದ್ಯಾರ್ಥಿಗಳ ಫಲಿತಾಂಶವನ್ನು ಸರಿಯಾಗಿ ಪರಿಶೀಲಿಸಿ ನೀಡುವುದು ವಿವಿಯ ಜವಾಬ್ದಾರಿಯಾದ ಕಾರಣ ಗೌಪ್ಯತೆ ಕಾಪಾಡುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವ ಕಾರಣಕ್ಕೂ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇರುವುದಿಲ್ಲ. ವಿದ್ಯಾರ್ಥಿಗಳಿಗೆ ಪ್ರಕಟವಾದ ಫಲಿತಾಂಶದ ಬಗ್ಗೆ ಗೊಂದಲವಿದ್ದಲ್ಲಿ ಉತ್ತರ ಪತ್ರಿಕೆಗಳ ವೈಯಕ್ತಿಕ ವೀಕ್ಷಣೆಗೆ ನಿಯಮಾನುಸಾರ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳನ್ನು ಕಾಲೇಜು ಪ್ರಾಂಶುಪಾಲರ ಮೂಲಕ ಪರೀಕ್ಷಾಂಗ ಕುಲಸಚಿವರ ಕಚೇರಿಗೆ ಪತ್ರ ಬರೆದು ಪರಿಹರಿಸಿಕೊಳ್ಳಬಹುದು ಎಂದು ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X