Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗಕ್ಕೆ...

ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗಕ್ಕೆ ಪ್ರಯತ್ನಿಸಿ : ಉಡುಪಿ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ3 Jan 2022 10:01 PM IST
share
ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗಕ್ಕೆ ಪ್ರಯತ್ನಿಸಿ : ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಜ.1: ಉದ್ಯೋಗಾಕಾಂಕ್ಷಿಗಳು ತಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಪ್ರಯತ್ನಿಸ ಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಕಿವಿಮಾತು ಹೇಳಿದ್ದಾರೆ.

ಸೋಮವಾರ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಪಂಚಾಯತ್, ಕರ್ನಾಟಕ ರಾಜ್ಯ ಗ್ರಾಮೀಣ ಜೀವ ನೋಪಾಯ ಅಭಿಯಾನ, ಕೌಶಲಭಿವೃಧ್ದಿ ಉದ್ಯಮಶೀಲತೆ ಮತ್ತು ಜೀವನೋ ಪಾಯ ಇಲಾಖೆ ಉಡುಪಿ ಜಿಲ್ಲೆ ಇವುಗಳ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವ್ ಆಚರಣೆ ಪ್ರಯುಕ್ತ ಆಯೋಜಿಸಿದ್ದ ಸಂಜೀವಿನಿ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಪ್ರತಿಯೊಬ್ಬರೂ ತಮ್ಮದೇ ಆದ ವಿಶಿಷ್ಟ ಮತ್ತು ವೈಶಿಷ್ಠಪೂರ್ಣ ವ್ಯಕ್ತಿತ್ವ ಹಾಗೂ ಆಸಕ್ತಿಯನ್ನು ಹೊಂದಿದ್ದು, ತಮಗೆ ಸರಿ ಹೊಂದುವ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯುವುದರಿಂದ ಆ ಉದ್ಯೋಗದಲ್ಲಿ ಹೆಚ್ಚಿನ ಸಾಧನೆ ಮಾಡಲು ಸಾದ್ಯ ವಾಗಲಿದೆ. ಕೋವಿಡ್‌ನಿಂದ ಅನೇಕ ಮಂದಿ ಉದ್ಯೋಗ ವಂಚಿತರಾಗಿದ್ದು, ಉದ್ಯೋಗಾಕಾಂಕ್ಷಿಗಳು ಉದ್ಯೋಗಮೇಳದಲ್ಲಿ ಭಾಗವಹಿಸುವ ಕಂಪೆನಿಗಳಲ್ಲಿ ತಮ್ಮ ವಿದ್ಯಾರ್ಹತೆ ಮತ್ತು ಆಸಕ್ತಿ ಇರುವ ಕ್ಷೇತ್ರದ ಉದ್ಯೋಗಗಳನ್ನು ಪಡೆಯ ಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಮಾತನಾಡಿ, ಉದ್ಯೋಗ ಮೇಳದಲ್ಲಿ ಅತೀ ಕಡಿಮೆ ಅವಧಿಯಲ್ಲಿ 1558 ಮಂದಿ ಉದ್ಯೋಗಾಕಾಂಕ್ಷಿಗಳುನೊಂದಾಯಿಸಿಕೊಂಡಿದ್ದು, ಇಂದಿನ ಉದ್ಯೋಗ ಮೇಳದಲ್ಲಿ ಭಾಗವಹಿಸಿರುವ ವಿವಿಧ ಕಂಪೆನಿಗಳಲ್ಲಿ ಸುಮಾರು 2000 ದಷ್ಟು ಉದ್ಯೋಗ ಲಭ್ಯತೆ ಇದ್ದು, ಅಭ್ಯರ್ಥಿಗಳು ಉತ್ತಮ ರೀತಿಯಲ್ಲಿ ತಮ್ಮ ಪ್ರತಿಭೆ ತೋರುವಂತೆ ಕಿವಿಮಾತು ಹೇಳಿದರು.

ಜಿಲ್ಲಾ ಪಂಚಾಯತ್‌ನ ಗ್ರಾಮೀಣ ಜೀವನೋಪಾಯ ಅಭಿಯಾನದ ಮೂಲಕ ವಿವಿಧ ತರಬೇತಿ ಕಾರ್ಯಕ್ರಮ ಗಳು, ಕೌಶಲ್ಯ ತರಬೇತಿ ನೀಡುವ ಮೂಲಕ ಉದ್ಯೋಗ ಒದಗಿಸಲು ಪ್ರಯತ್ನಿಸಲಾಗುತ್ತಿದ್ದು, ‘ಉದ್ಯಮಿಯಾಗು’ ಎಂಬ ಯೋಜನೆಯಡಿ, ಮೊಬೈಲ್ ಕ್ಯಾಂಟೀನ್, ಚಿಕ್ಕಿ ಘಟಕ ಸ್ಥಾಪನೆಗೆ ನೆರವು ನೀಡಲಾಗಿದೆ. ಉದ್ಯೋಗ ಪಡೆಯುವುದರಿಂದ ವ್ಯಕ್ತಿಯ ಆದಾಯ ಮತ್ತು ಜಿಲ್ಲೆಯ ತಲಾ ಆದಾಯ ಹೆಚ್ಚಳವಾಗಲಿದೆ ಎಂದರು.

ಜಿಪಂ ಯೋಜನಾ ನಿರ್ದೇಶಕ ಬಾಬು, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಜಗದೀಶ್ ಉಪಸ್ಥಿತರಿದ್ದರು. ಜಿಪಂ ಗ್ರಾಮೀಣ ಜೀವನೋಪಾಯ ಅಭಿಯಾನ ಜಿಲ್ಲಾ ವ್ಯವಸ್ಥಾಪಕ ಅವಿನಾಶ್ ಸ್ವಾಗತಿಸಿ, ನವ್ಯಾ ವಂದಿಸಿದರು. ಪ್ರಭಾಕರ ಆಚಾರ್ ಕಾರ್ಯಕ್ರಮ ನಿರೂಪಿಸಿದರು.

ಉದ್ಯೋಗಮೇಳದಲ್ಲಿ ಜಿಲ್ಲೆಯ ಮತ್ತು ರಾಜ್ಯದ ವಿವಿಧ ಭಾಗಗಲ 20ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X