ವೃದ್ಧ ನಾಪತ್ತೆ

ಉಡುಪಿ, ಜ.1: ನಗರದ ಅಂಬಲಪಾಡಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಪ್ರಭಾಕರ ಎನ್ (61) ಎಂಬ ವ್ಯಕ್ತಿ ಡಿ.31ರಂದು ಸಂಜೆ 5 ಗಂಟೆಯ ಸುಮಾರಿಗೆ ಮನೆಯಿಂದ ಹೊರ ಹೋದವರು ವಾಪಸ್ಸು ಬಾರದೆ ನಾಪತ್ತೆ ಯಾಗಿದ್ದಾರೆ.
5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ, ಅಗಲ ಮುಖ ಹೊಂದಿದ್ದು, ಕನ್ನಡ ಮತ್ತು ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲಿಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story





