Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗ್ರಾಮೀಣ ಪತ್ರಕರ್ತರ ಆರೋಗ್ಯ...

ಗ್ರಾಮೀಣ ಪತ್ರಕರ್ತರ ಆರೋಗ್ಯ ಕಾರ್ಡ್-ಬಸ್‍ಪಾಸ್ ಸೌಲಭ್ಯಗಳಿಗೆ ಬಜೆಟ್‍ನಲ್ಲಿ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

36 ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟಿಸಿದ ಸಿಎಂ

ವಾರ್ತಾಭಾರತಿವಾರ್ತಾಭಾರತಿ4 Jan 2022 6:10 PM IST
share
ಗ್ರಾಮೀಣ ಪತ್ರಕರ್ತರ ಆರೋಗ್ಯ ಕಾರ್ಡ್-ಬಸ್‍ಪಾಸ್ ಸೌಲಭ್ಯಗಳಿಗೆ ಬಜೆಟ್‍ನಲ್ಲಿ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಲಬುರಗಿ, ಜ.4: ಸಣ್ಣ ಪತ್ರಿಕೆಗಳು ಪ್ರಸಾರದಲ್ಲಿ ಕಡಿಮೆ ಸಂಖ್ಯೆ ಹೊಂದಿದ್ದರೂ ಕೂಡ ಅಲ್ಲಿನ ಸುದ್ದಿ, ಲೇಖನ, ಅಂಕಣಗಳ ಮೌಲ್ಯ ದೊಡ್ಡದು. ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು, ಬಸ್‍ಪಾಸ್ ಸೇರಿದಂತೆ ಇತರ ಸೌಲಭ್ಯಗಳಿಗೆ ಬರುವ ಬಜೆಟ್‍ನಲ್ಲಿ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಂಗಳವಾರ ನಗರದ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಏರ್ಪಡಿಸಿದ್ದ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಂಡಳಿ ಹಾಗೂ ಕೋಶಕ್ಕೆ ವಾರಾಂತ್ಯದೊಳಗೆ ಪೂರ್ಣ ನೇಮಕಾತಿ ಮಾಡಿ 3 ಸಾವಿರ ಕೋಟಿ ರೂ.ಕ್ರಿಯಾ ಯೋಜನೆಯನ್ನು ಒಂದು ವರ್ಷದ ಅವಧಿಯೊಳಗೆ ಅನುಷ್ಠಾನ ಮಾಡಲಾಗುವುದು ಎಂದರು.

ಪತ್ರಿಕಾ ರಂಗ ಹಲವಾರು ಸವಾಲುಗಳನ್ನು ಎದುರಿಸುತ್ತಿದೆ. ಖಾಸಗೀಕರಣ, ಉದಾರೀಕರಣ, ಜಾಗತೀಕರಣದ ಮಾರುಕಟ್ಟೆ ಆಧಾರಿತ ವ್ಯವಹಾರದ ನಡುವೆ ಜನಪರ ಆದ್ಯತೆಗಳನ್ನು, ಅಂತಃಕರಣವನ್ನು ಪತ್ರಿಕೆಗಳು ಕಾಯ್ದುಕೊಳ್ಳುತ್ತಿವೆ. ಪತ್ರಿಕೆಗಳಿಗೆ ಅಗತ್ಯವಿರುವ ಜಾಹೀರಾತು, ಗ್ರಾಮೀಣ ಪತ್ರಕರ್ತರಿಗೆ ಸೌಕರ್ಯಗಳನ್ನು ನೀಡಲು ಬರುವ ಬಜೆಟ್‍ನಲ್ಲಿ ಕ್ರಮವಹಿಸಲಾಗುವುದು ಎಂದು ಅವರು ಹೇಳಿದರು.

ಕಲ್ಯಾಣದ ಪುಣ್ಯಭೂಮಿ ಕಲಬುರಗಿಯಲ್ಲಿ ಕಾರ್ಯನಿರತ ಪತ್ರಕರ್ತರ ಸಮ್ಮೇಳನ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ. ಪತ್ರಕರ್ತರಿಗೆ, ಪತ್ರಿಕೋದ್ಯಮಿಗೆ ಸಮಾಜದಲ್ಲಿ ಮಹತ್ವದ ಸ್ಥಾನವಿದೆ. ಸ್ವಾತಂತ್ರ್ಯ ಚಳವಳಿಗೆ ಕೈಬರಹದ ಹಾಗೂ ಮೊಳೆ ಜೋಡಣೆ ಮುದ್ರಣ ಆಧಾರಿತ ಹಲವಾರು ಪತ್ರಿಕೆಗಳು ಭೂಗತವಾಗಿ ಕಾರ್ಯ ಮಾಡಿ, ದೇಶಭಕ್ತಿ, ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿವೆ. ಪಾಶ್ಚಿಮಾತ್ಯ ಪತ್ರಿಕೋದ್ಯಮ ಪ್ರಭಾವದ ನಡುವೆಯೂ ವಸಾಹತೋತ್ತರ ಕಾಲದಲ್ಲಿ ಭಾರತೀಯ ಪತ್ರಿಕೆಗಳು ಸ್ವಂತಿಕೆ ರೂಢಿಸಿಕೊಂಡಿವೆ ಎಂದು ಅವರು ಹೇಳಿದರು.

ತುರ್ತು ಪರಿಸ್ಥಿತಿ ಹೇರಿದ ಸಂದರ್ಭದಲ್ಲಿ ಪತ್ರಿಕೆಗಳ ಮೇಲೆ ದೊಡ್ಡ ಪ್ರಹಾರ ನಡೆಯಿತು. ಪತ್ರಕರ್ತರು ಅದನ್ನು ಗಟ್ಟಿಯಾಗಿ ಎದುರಿಸಿದರು. ಪತ್ರಿಕೋದ್ಯಮಿ ಸದಾ ಜಾಗೃತವಾಗಿ ಕೆಲಸ ಮಾಡಿದರೆ ಸರಕಾರ, ಸಮಾಜ ಎಚ್ಚರವಾಗಿರುತ್ತದೆ. ಕೋವಿಡ್ ಸಂದರ್ಭದಲ್ಲಿ ಆರೋಗ್ಯ, ಅಂಗನವಾಡಿ, ಆಶಾ, ಪೊಲೀಸ್, ಪೌರಕಾರ್ಮಿಕರೊಂದಿಗೆ ಪತ್ರಕರ್ತರು ಕೂಡ ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿ ಕಾರ್ಯನಿರ್ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಹಲವಾರು ಜನ ಪ್ರಾಣ ಕಳೆದುಕೊಂಡಿದ್ದಾರೆ, ಬಹುತೇಕ ಕುಟುಂಬದವರಿಗೆ ಈಗಾಗಲೇ ತಲಾ 5 ಲಕ್ಷ ರೂ.ಪರಿಹಾರ ನೀಡಲಾಗಿದೆ. ಇನ್ನೂ ಬಾಕಿ ಇರುವ ವ್ಯಕ್ತಿಗಳ ಕುಟುಂಬಕ್ಕೂ ಒದಗಿಸಲಾಗುವುದು. ಪತ್ರಕರ್ತರು-ರಾಜಕಾರಣಿಗಳು ಪರಸ್ಪರ ಅವಿನಾಭಾವ ಸಂಬಂಧ ಹೊಂದಿರುತ್ತಾರೆ. ಸಮಾಜದ ಒಳಿತಿಗೆ ಅದು ಬಳಕೆಯಾಗಬೇಕು. ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿ ಕುರಿತು ಈ ಸಮ್ಮೇಳನದಲ್ಲಿ ಚರ್ಚೆಗಳಾಗಲಿ ಅವುಗಳ ನಿರ್ಣಯಗಳ ಕರಡನ್ನು ಸರಕಾರಕ್ಕೆ ಕಳುಹಿಸಿಕೊಡಿ ಅವುಗಳ ಜಾರಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿದರು. ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ.ಅಜಯ್‍ಸಿಂಗ್ ವಸ್ತುಪ್ರದರ್ಶನ ಉದ್ಘಾಟಿಸಿದರು. ಸಂಸದ ಡಾ.ಉಮೇಶ್ ಜಾಧವ್ ವ್ಯಂಗ್ಯಚಿತ್ರ ಪ್ರದರ್ಶನ ಉದ್ಘಾಟಿಸಿದರು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಅಧ್ಯಕ್ಷ ರಾಜಕುಮಾರ ಪಾಟೀಲ್ ತೇಲ್ಕೂರ ಕಾರ್ಯನಿರತ ಪತ್ರಕರ್ತರ ಸಂಘದ 2022ನೆ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಿದರು.

ಇದೇ ಸಂದರ್ಭದಲ್ಲಿ ಪತ್ರಿಕಾ ಭವನದ ಮೊದಲ ಮಹಡಿ ಉದ್ಘಾಟನೆ, ಕೋವಿಡ್ ಕತೆಗಳು, ಮಾಧ್ಯಮ ಅವಲೋಕನ ಹಾಗೂ ಮಾಧ್ಯಮ ಹೆಜ್ಜೆಗಳು ಕೃತಿಗಳನ್ನು ಮುಖ್ಯಮಂತ್ರಿ ಬಿಡುಗಡೆ ಮಾಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನೂರಾಧ ಮಾತನಾಡಿದರು. ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪ ದಿವ್ಯ ಸಾನಿಧ್ಯ ವಹಿಸಿದ್ದರು. 

ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕರಾದ ಸುಭಾಷ್ ಗುತ್ತೇದಾರ್, ಡಾ.ಅವಿನಾಶ್ ಜಾಧವ್, ಬಸವರಾಜ ಮತ್ತಿಮುಡ, ಶರಣು ಸಲಗರ, ವಿಧಾನಪರಿಷತ್ ಸದಸ್ಯ ಬಿ.ಜಿ.ಪಾಟೀಲ್, ಶಶಿಲ್ ನಮೋಶಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಮತ್ತಿತರರು ವೇದಿಕೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X